ಬೆಂಗಳೂರು : ಬಿಜೆಪಿಯ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಎನ್.ವೈ.ಗೋಪಾಲಕೃಷ್ಣ ಸೋಮವಾರ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸದಸ್ಯತ್ವ ಪಡೆದರು.
ಈ ವೇಳೆ ಮಾತನಾಡಿದ ಡಿ.ಕೆ.ಶಿವಕುಮಾರ್, ರಾಜ್ಯದಲ್ಲಿ ಜನರ ಧ್ವನಿ ಕಾಂಗ್ರೆಸ್ ಕಡೆಗೆ ಎಂಬುದು ಕಂಡು ಬರುತ್ತಿದೆ. ಕಾಂಗ್ರೆಸ್ ನಡೆ ಅಕಾರಕ್ಕೆ ಎಂಬುದನ್ನು ಅರ್ಥ ಮಾಡಿಕೊಂಡ ಜನಪ್ರತಿನಿಗಳು ನಮ್ಮ ಪಕ್ಷ ಸೇರುತ್ತಿದ್ದಾರೆ. ಇಂದು ಎನ್.ವೈ.ಗೋಪಾಲಕೃಷ್ಣ ಸೇರ್ಪಡೆಯಾಗಿದ್ದಾರೆ. ಜೆಡಿಎಸ್‍ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಅರಸೀಕೆರೆಯ ಕೆ.ಎಂ.ಶಿವಲಿಂಗೇಗೌಡ ಅವರ ರಾಜೀನಾಮೆಯೂ ಅಂಗೀಕಾರಗೊಂಡಿದೆ. ಅವರು ಏಪ್ರಿಲ್ 9ರಂದು ಕಾಂಗ್ರೆಸ್ ಸೇರುತ್ತಿದ್ದಾರೆ ಎಂದರು.
ಹಲವು ಶಾಸಕರು ಕಾಂಗ್ರೆಸ್ ಪಕ್ಷದ ಬಾಗಿಲು ತಟ್ಟುತ್ತಿದ್ದಾರೆ :
ಭ್ರಷ್ಟಚಾರ ಮತ್ತು ಬೆಲೆ ಏರಿಕೆಯಿಂದಾಗಿ ಜನ ಬಿಜೆಪಿ ವಿರುದ್ಧ ತಿರುಗಿ ಬಿದ್ದಿದ್ದಾರೆ. ಮೂರ್ನಾಲ್ಕು ಬಾರಿ ಶಾಸಕರಾಗಿದ್ದವರು ಬಿಜೆಪಿಗೆ ರಾಜೀನಾಮೆ ನೀಡಿ ಬರುತ್ತಿದ್ದಾರೆ. ವಿಧಾನ ಪರಿಷತ್ ಸದಸ್ಯರಾಗಿದ್ದ ಪುಟ್ಟಣ್ಣ, ಬಾಬುರಾವ್ ಚಿಂಚಣಸೂರ್ ಅವರಿಗೆ ಇನ್ನೂ ಅಕಾರವ ಇತ್ತು, ಆದರೂ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಬಿಜೆಪಿಯಿಂದ ಜನರಿಗೆ ಅನುಕೂಲವಾಗಿಲ್ಲ, ಅದಕ್ಕಾಗಿ ಇನ್ನೂ ಹಲವು ಶಾಸಕರು ಕಾಂಗ್ರೆಸ್ ಪಕ್ಷದ ಬಾಗಿಲು ತಟ್ಟುತ್ತಿದ್ದಾರೆ. ನಮಗೆ ಅವರಿಗೆ ಸ್ಥಾನ ಹೊಂದಿಸಲು ಸಾಧ್ಯವಾಗುತ್ತಿಲ್ಲ. ಸೂಕ್ಷ್ಮವಾಗಿ ನೋಡಿ ಅನ್ಯ ಪಕ್ಷಗಳ ನಾಯಕರನ್ನು ಕಾಂಗ್ರೆಸ್‍ಗೆ ಸೇರ್ಪಡೆ ಮಾಡಿಕೊಳ್ಳಲಾಗುತ್ತಿದೆ ಎಂದು ಹೇಳಿದರು.
ಇದನ್ನೂ ಓದಿ : ಮಾಜಿ ಶಾಸಕ ವೈಎಸ್‌ವಿ ದತ್ತಾ, ಶಾಸಕ ಹೆಚ್.ನಾಗೇಶ್ ಕಾಂಗ್ರೆಸ್ ಸೇರ್ಪಡೆ
ಬಿಜೆಪಿಯ ಗರ್ಭಗುಡಿಯನ್ನು ನಾನು ನೋಡಿದ್ದೇನೆ. ನನಗೆ ಅದು ಹೊಂದಾಣಿಕೆಯಾಗುವುದಿಲ್ಲ :
ಮೊಳಕಾಳ್ಮೂರು ಕ್ಷೇತ್ರದ ಎನ್.ವೈ.ಗೋಪಾಲಕೃಷ್ಣ ಹಿಂದೆ ಕಾಂಗ್ರೆಸ್ ಪಕ್ಷದಲ್ಲಿದ್ದರು. ಕಳೆದ ಚುನಾವಣೆಯಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದರು. ಮತ್ತೆ ಕಾಂಗ್ರೆಸ್‍ಗೆ ಯಾಕೆ ಬರುತ್ತಿದ್ದೀರಾ ಎಂದು ನಾನು ಕೇಳಿದೆ. ಬಿಜೆಪಿಯಲ್ಲಿ ಗರ್ಭಗುಡಿಯನ್ನು ನೋಡಿದ್ದೇನೆ. ನನಗೆ ಅದು ಹೊಂದಾಣಿಕೆಯಾಗುವುದಿಲ್ಲ. ಸಾಯುವಾಗ ಕಾಂಗ್ರೆಸ್‍ನಲ್ಲಿರಬೇಕು ಎಂದು ಬಯಸಿದ್ದೇನೆ. ನನ್ನ ಅಣ್ಣ ಮಾಜಿ ಸಂಸದ ನಾನು ಎನ್.ವೈ.ಹನುಮಂತಪ್ಪ ನೀನು ಬಿಜೆಪಿ ಸೇರಿದರು ನನ್ನ ಮತ ಮಾತ್ರ ಕಾಂಗ್ರೆಸ್‍ಗೆ ಎಂದು ಹೇಳಿದ್ದರು. ಇಂದು ಯಾವ ಷರತ್ತು ಇಲ್ಲದೆ ಕಾಂಗ್ರೆಸ್ ಸೇರಿದ್ದಾರೆ. ಎನ್.ವೈ.ಗೋಪಾಲಕೃಷ್ಣ ಸೇರ್ಪಡೆಯಿಂದ ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಯುವ ನಾಯಕನ ಭವಿಷ್ಯದ ಬಗ್ಗೆಯೂ ಪಕ್ಷ ಚಿಂತನೆ ನಡೆಸಿದೆ ಎಂದು ಸ್ಪಷ್ಟಪಡಿಸಿದ್ದರು.