ನ್ಯಾಯಾಂಗದಲ್ಲಿ ಕೇಂದ್ರದ ಹಸ್ತಕ್ಷೇಪ ಅಪಾಯಕಾರಿ: ನ್ಯಾಯಮೂರ್ತಿ ಸಂತೋಷ್ ಹೆಗ್ಡೆ

ಮೈಸೂರು: ಸಂವಿಧಾನದ ಅಡಿಯಲ್ಲಿ ರಚನೆಗೊಂಡಿರುವ ಅಂಗಗಳು ತಮ್ಮದೇ ಕಾರ್ಯವ್ಯಾಪ್ತಿಯಲ್ಲಿ ಕೆಲಸ ಮಾಡಬೇಕಿದೆ. ಒಂದರ ಮೇಲೆ ಮತ್ತೊಂದು ಸವಾರಿ ಮಾಡುವುದು ಸರಿಯಲ್ಲ. ಕೇಂದ್ರ ಸರ್ಕಾರ  ನ್ಯಾಯಾಂಗ ವ್ಯವಸ್ಥೆಯಲ್ಲಿ, ನ್ಯಾಯಾಧೀಶರ ನೇಮಕಾತಿ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ. ನ್ಯಾಯಾಂಗದಲ್ಲಿ ಕಾರ್ಯಾಂಗ ಹಸ್ತಕ್ಷೇಪ ಮಾಡಬಾರದು ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಹೇಳಿದರು.

ನಗರದ ಪತ್ರಕರ್ತರ ಭವನದಲ್ಲಿ ನಡೆದ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ನ್ಯಾ.ಸಂತೋಷ್‌ ಹೆಗ್ಡೆ ಅವರು, ಈ ರೀತಿ ಹಸ್ತಕ್ಷೇಪ ಮಾಡುವುದು ಅಪಾಯಕಾರಿ ಬೆಳವಣಿಗೆಯಾಗಿದೆ. ದೇಶದಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದ್ದು, ಜನಪ್ರತಿನಿಧಿಗಳು ಜನರ ಮಾಲೀಕರಾಗಿ ಕಾರ್ಯನಿರ್ವಹಿಸಬೇಕು. ರಾಜಕಾರಣಿಗಳು ಪರಸ್ಪರ ಭ್ರಷ್ಟಾಚಾರದ ಬಗ್ಗೆ ಆರೋಪ ಮಾಡುತ್ತಿದ್ದಾರೆ ಅಷ್ಟೇ. ಆದರೆ ಅದನ್ನು ಸರಿಪಡಿಸುವ ಕೆಲಸ ಮಾಡುತ್ತಿಲ್ಲ‌ ಎಂದು ವಿಷಾಧ ವ್ಯಕ್ತಪಡಿಸಿದರು.

ಇದನ್ನು ಓದಿ: ಕೊಲಿಜಿಯಂ ಕುರಿತ ಕಾನೂನು ಸಚಿವ ಕಿರಣ್‌ ರಿಜಿಜು ಹೇಳಿಕೆ: ಸುಪ್ರೀಂ ಕೋರ್ಟ್‌ ತೀವ್ರ ಅತೃಪ್ತಿ

ನ್ಯಾಯಾಂಗದ ಬಗ್ಗೆ ರಾಜಕಾರಣಿಗಳಿಗೆ ಅಷ್ಟೊಂದು ಜ್ಞಾನ ಇರುವುದಿಲ್ಲ. ಹೀಗಿರುವಾಗ ನ್ಯಾಯಾಧೀಶರ ಹಾಗೂ ನ್ಯಾಯಾಂಗದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ. ಧರ್ಮ ಮತ್ತು‌ ಭಾಷೆ ವಿಚಾರದಲ್ಲಿ ದೇಶ ವಿಭಜನೆಯಾಗುವ ಅಪಾಯದಲ್ಲಿದೆ. ಇದು ಯಾವಾಗ ಆಗುತ್ತದೆ ಎಂಬುದನ್ನು ಹೇಳಲು ಸಾಧ್ಯವಿಲ್ಲ ಎಂದರು.

ನ್ಯಾಯಾಲಯದಲ್ಲಿನ ಪ್ರಕರಣಗಳು ದೀರ್ಘಕಾಲ ವಿಚಾರಣೆಗೆ ಒಳಪಡುತ್ತಿವೆ. ಇಲ್ಲಿ ಗೆದ್ದವನು ಸೋತ. ಸೋತವನು ಸತ್ತ ಹಾಗೆ ಆಗುತ್ತಿದೆ. ಸಮಸ್ಯೆಗಳ ಪರಿಹಾರಕ್ಕೆ ಮಧ್ಯವರ್ತಿಗಳ ಬಳಿ ಹೋಗುವ ವ್ಯವಸ್ಥೆ ಆಗುತ್ತಿದೆ. ಇದು ಸಮಾಜಕ್ಕೆ ಬೇರೆಯ ಸಂದೇಶವೇ ರವಾನಿಸುತ್ತದೆ. ದುರಾಸೆ ಬಿಡಬೇಕು, ಸರಳ ಜೀವನ ನಡೆಸಬೇಕು ಎಂದು ನ್ಯಾ.ಸಂತೋಷ್‌ ಹೆಗ್ಡೆ ತಿಳಿಸಿದರು.

ಇಲ್ಲಿ ಕ್ಲಿಕ್‌ ಮಾಡಿ : ಜನಶಕ್ತಿ ಮೀಡಿಯಾ ವಾಟ್ಸ್‌ಪ್‌ ಗುಂಪು ಸೇರಲು ಈ ಲಿಂಕ್‌ ಕ್ಲಿಕ್‌ ಮಾಡಿ

Donate Janashakthi Media

Leave a Reply

Your email address will not be published. Required fields are marked *