ಸಿಎಂ, ಡಿಸಿಎಂ ಜತೆಗೆ 8 ಸಚಿವರ ಪ್ರಮಾಣ ವಚನ : ಇನ್ನೊಂದು ವಾರದಲ್ಲಿ ಪೂರ್ಣ ಸಂಪುಟ ರಚನೆ

ಬೆಂಗಳೂರು: ಇಂದು 24ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಸಿಎಂ, ಡಿಸಿಎಂ ಜತೆ ಎಂಟು ಸಚಿವರು ಮಾತ್ರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

28 ಸಚಿವರ ಆಯ್ಕೆಗೆ ಭಾರೀ ಕಸರತ್ತು ನಡೆಸಲಾಯಿತು. ಆದರೆ, ಅಂತಿಮವಾಗಿ ಮೊದಲ ಸಚಿವ ಸಂಪುಟಕ್ಕೆ ಕೇವಲ ಎಂಟು ಮಂದಿಯನ್ನು ಮಾತ್ರ ಆಯ್ಕೆ ಮಾಡಲಾಗಿದೆ. ಸದ್ಯ ಆರು ಸಮುದಾಯಕ್ಕೆ ಅವಕಾಶ ನೀಡಲಾಗಿದೆ. ಐದು ಸಮುದಾಯಕ್ಕೆ ತಲಾ ಒಂದೊಂದು ಸಚಿವ ಸ್ಥಾನ ಹಂಚಿಕೆ ಮಾಡಲಾಗಿದೆ. ದಲಿತ ಸಮುದಾಯಕ್ಕೆ ಮೂರು ಸ್ಥಾನ, ಅದರಲ್ಲಿ ದಲಿತ ಬಲ ಸಮುದಾಯಕ್ಕೆ ಎರಡು ಹಾಗೂ ದಲಿತ ಎಡ ಸಮುದಾಯಕ್ಕೆ ಒಂದು ಸಚಿವ ಸ್ಥಾನ ನೀಡಲಾಗಿದೆ.

ನಿನ್ನೆ ಮಧ್ಯಾಹ್ನದಿಂದ ಸಚಿವರ ಆಯ್ಕೆಗೆ ಭಾರೀ ಕಸರತ್ತು ನಡೆಯಿತು. ಕಾಂಗ್ರೆಸ್​ ನಾಯಕಿ ಸೋನಿಯಾ ನಿವಾಸದಲ್ಲಿ ತಡರಾತ್ರಿ ಎರಡು ಗಂಟೆಯವರೆಗೆ​ ಸಭೆ ನಡೆಯಿತು. ಜಾತಿವಾರು, ಹಿರಿತನದ ಆಧಾರ ಮೇಲೆ ಸಚಿವರನ್ನು ಆಯ್ಕೆ ಮಾಡಲಾಗಿದೆ. ಒಂದೇ ಬಾರಿಗೆ 28 ಸಚಿವರ ಆಯ್ಕೆಗೆ ಪ್ರಯತ್ನ ನಡೆಯಿತಾದರೂ ಸಿದ್ದರಾಮಯ್ಯ ಹಾಗೂ ಡಿಕೆಶಿ ನಡುವೆ ಒಮ್ಮತ ಮೂಡಲಿಲ್ಲ. ಇದರಿಂದ ಸಭೆ ಮೇಲೆ ಸಭೆ ನಡೆಸಬೇಕಾಯಿತು. ಸಹಮತ ಮೂಡದ ಹಿನ್ನೆಲೆಯಲ್ಲಿ ಎಂಟು ಜನ ಮಾತ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇನ್ನೊಂದು ವಾರದಲ್ಲಿ ಸಚಿವ ಸಂಪುಟ ಪೂರ್ಣಗೊಳಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಎಂಟು ಸಚಿವರು ಯಾರು?
* ಎಂ. ಬಿ. ಪಾಟೀಲ್ (ಲಿಂಗಾಯತ)
* ಡಾ. ಜಿ. ಪರಮೇಶ್ವರ್ (ದಲಿತ ಬಲ)
* ಪ್ರಿಯಾಂಕ ಖರ್ಗೆ (ದಲಿತ ಬಲ)
* ಕೆ.ಎಚ್. ಮುನಿಯಪ್ಪ (ದಲಿತ ಎಡ)
* ಕೆ. ಜೆ. ಜಾರ್ಜ್ (ಕ್ರಿಶ್ಚಿಯನ್)
* ಸತೀಶ್ ಜಾರಕಿಹೊಳಿ (ಪರಿಶಿಷ್ಠ ಪಂಗಡ) (ವಾಲ್ಮಿಕಿ)
* ಜಮೀರ್ ಅಹ್ಮದ್ ಖಾನ್ (ಮುಸ್ಲಿಂ)
* ರಾಮಲಿಂಗಾ ರೆಡ್ಡಿ (ರೆಡ್ಡಿ ಸಮುದಾಯ)

 

Donate Janashakthi Media

Leave a Reply

Your email address will not be published. Required fields are marked *