ದೆಹಲಿ : ಸುಪ್ರೀಂ ಕೋರ್ಟ್ ತನ್ನ ಸಿಬ್ಬಂದಿ ನೇಮಕಾತಿ ಪ್ರಕ್ರಿಯೆಯಲ್ಲಿ ಇತರ ಹಿಂದುಳಿದ ವರ್ಗಗಳಿಗೆ (ಒಬಿಸಿ) ಮೀಸಲಾತಿಯನ್ನು ಆರಂಭಿಸಲು ನಿರ್ಧರಿಸಿದೆ ಎಂದು ವರದಿಯಾಗಿದೆ. ಇದನ್ನು ಸಿಪಿಐ(ಎಂ) ಸ್ವಾಗತಿಸಿದೆ. ನ್ಯಾಯಾಲಯವು ಮೀಸಲಾತಿಯನ್ನು ಅಂಗವಿಕಲತೆ ಇರುವ ವ್ಯಕ್ತಿಗಳು, ಮಾಜಿ ಸೈನಿಕರು ಮತ್ತು ಸ್ವಾತಂತ್ರ್ಯ ಹೋರಾಟಗಾರರ ಅವಲಂಬಿತರಿಗೂ ವಿಸ್ತರಿಸಿದೆ.
ಸುಪ್ರೀಂ ಕೋರ್ಟ್ನ ನ್ಯಾಯಾಂಗೇತರ ಸಿಬ್ಬಂದಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ನೇಮಕಾತಿಗಾಗಿ ರೋಸ್ಟರ್ ವ್ಯವಸ್ಥೆಯನ್ನು ಜಾರಿಗೆ ತರುವ ಒಂದು ಮಹತ್ವದ ನಡೆಯನ್ನು ಮುಖ್ಯ ನ್ಯಾಯಾಧೀಶರು ಪ್ರಾರಂಭಿಸಿದ್ದಾರೆ ಎಂದಿರುವ ಸಿಪಿಐ(ಎಂ) ಪೊಲಿಟ್ಬ್ಯುರೊ, ನ್ಯಾಯಾಲಯದ ನ್ಯಾಯಾಂಗೇತರ ಸಿಬ್ಬಂದಿಯ ನೇಮಕಾತಿಯಲ್ಲಿ ದೀರ್ಘಕಾಲದಿಂದ ನಿರೀಕ್ಷಿಸುತ್ತಿದ್ದ ಮತ್ತು ಮಹತ್ವಪೂರ್ಣ ಸುಧಾರಣೆಗೆ ಅನುಕೂಲವಾಗುವಂತೆ ಈ ನೇಮಕಾತಿ ನಿಯಮಗಳನ್ನು ತಿದ್ದುಪಡಿ ಮಾಡಲು ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ತೆಗೆದುಕೊಂಡ ಉಪಕ್ರಮವನ್ನು ಪಕ್ಷವು ಶ್ಲಾಘಿಸುವುದಾಗಿ ಹೇಳಿದೆ.
ಈ ನಿರ್ಧಾರವು ಇದುವರೆಗೆ ದೃಢೀಕರಣ ಕ್ರಮದ ವ್ಯಾಪ್ತಿಯಿಂದ ಹೊರಗಿರುವ ವಲಯಗಳಿಗೆ ಮೀಸಲಾತಿಯನ್ನು ವಿಸ್ತರಿಸಬೇಕು ಎಂಬ ಸಾಮಾಜಿಕ ನ್ಯಾಯ ಚಳವಳಿಯ ದೀರ್ಘಕಾಲದ ಬೇಡಿಕೆಯ ಭಾಗಶಃ ಈಡೇರಿಕೆಯತ್ತ ಒಂದು ಸ್ವಾಗತಾರ್ಹ ಹೆಜ್ಜೆಯಾಗಿದೆ ಎಂದು ಸಿಪಿಐ(ಎಂ) ಪೊಲಿಟ್ಬ್ಯುರೊ ಹೇಳಿದೆ.
ಇದನ್ನೂ ನೋಡಿ : ಯುದ್ಧವೂ ಉದ್ಯಮವಾದಾಗ….! -ಡಾ.ಸಿದ್ದನಗೌಡ ಪಾಟೀಲ ವಿಶ್ಲೇಷಣೆಯಲ್ಲಿ Janashakthi Media
