ಭವಾನಿ ರೇವಣ್ಣ ಜಾಮೀನು ಅರ್ಜಿಗೆ ಆಕ್ಷೇಪಣೆ

ಬೆಂಗಳೂರು: ಸಂಸದ ‍‍ಪ್ರಜ್ವಲ್‌ ರೇವಣ್ಣ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣದಲ್ಲಿನ ಸಂತ್ರಸ್ತೆಯೊಬ್ಬರ ಅಪಹರಣದ ಆರೋಪದಡಿ ಭವಾನಿ ರೇವಣ್ಣ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಎಸ್‌ಐಟಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.

ಈ ಸಂಬಂಧ ಪ್ರಜ್ವಲ್ ರೇವಣ್ಣ ಅವರ ತಾಯಿಯೂ ಆದ ಭವಾನಿ ರೇವಣ್ಣ ಸಲ್ಲಿಸಿರುವ ಅರ್ಜಿಯನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ (ಸಿಸಿಎಚ್‌–82) ನ್ಯಾಯಾಧೀಶ ಸಂತೋಷ ಗಜಾನನ ಭಟ್‌ ಸೋಮವಾರ ವಿಚಾರಣೆ ನಡೆಸಿದರು.

ಇದನ್ನುಓದಿ : ತಂದೆ ಹಾಗೂ ನನ್ನ ಮಾತಿಗೆ ಬೆಲೆಕೊಟ್ಟು ಪ್ರಜ್ವಲ್‌ ಬರುತ್ತಿದ್ದಾನೆ: ಹೆಚ್‌ಡಿಕೆ

‘ಮಧ್ಯಂತರ ಮತ್ತು ನಿಗದಿತ (ರೆಗ್ಯುಲರ್) ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಿ’ ಎಂದು ಪ್ರಾಸಿಕ್ಯೂಷನ್‌ಗೆ ನೋಟಿಸ್‌ ಜಾರಿಗೊಳಿಸಲು ಆದೇಶಿಸಿದ ನ್ಯಾಯಾಧೀಶರು ವಿಚಾರಣೆಯನ್ನು ಮಂಗಳವಾರಕ್ಕೆ (ಮೇ 28) ಮುಂದೂಡಿದ್ದಾರೆ. ಪ್ರಕರಣವೇನು?: ‘ಸಂತ್ರಸ್ತ ಮಹಿಳೆಯನ್ನು ಅಪಹರಿಸಲಾಗಿದೆ’ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕೆ.ಆರ್‌.ನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಕಲಂ 364ಎ, 365 ಮತ್ತು 34 ಅಡಿ ಎಫ್‌ಐಆರ್‌ ದಾಖಲಿಸಲಾಗಿದೆ.

ಇದರಲ್ಲಿ ಯವರ ಪತಿ ಎಚ್‌.ಡಿ.ರೇವಣ್ಣ ಮೊದಲ ಆರೋಪಿಯಾಗಿದ್ದರೆ ಸತೀಶ ಬಾಬಣ್ಣ ಎರಡನೇ ಆರೋಪಿಯಾಗಿದ್ದಾರೆ. ಈ ಪ್ರಕರಣದಲ್ಲಿ ಅವರು ಜಾಮೀನು ಕೋರಿದ್ದಾರೆ.

ಇದನ್ನು ನೋಡಿ : ಪ್ರಜ್ವಲ್ ರೇವಣ್ಣ ಲೈಂಗಿಕ ಹತ್ಯಾಕಾಂಡ ಗೊತ್ತಿದ್ದು ಬಿಜೆಪಿ ಯಾಕೆ ಟಿಕೆಟ್ ನೀಡಿತು? ವಿಡಿಯೋ ಹಂಚಿದವರಿಗೂ ಶಿಕ್ಷೆಯಾಗಲಿ

Donate Janashakthi Media

Leave a Reply

Your email address will not be published. Required fields are marked *