ಬೆಂಗಳೂರು| ಜಿ. ಪರಮೇಶ್ವರ ರ ವಿರುದ್ಧ ಆಕ್ಷೇಪಾರ್ಹ ಪೋಸ್ಟ್: ಪ್ರಕರಣ ದಾಖಲು

Please follow and like us:
ಬೆಂಗಳೂರು: ಸೈಬರ್ ಅಪರಾಧ ಠಾಣೆಯ ಪೊಲೀಸರು ಗೃಹ ಸಚಿವ ಜಿ.ಪರಮೇಶ್ವರ ರ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಪೋಸ್ಟ್ ಹಾಕಿರುವ ವಿಚಾರವಾಗಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪರಮೇಶ್ವರ್ ಅವರಿಗೆ ಸಂಬಂಧಿಸಿದ ನೆಲಮಂಗಲ ತಾಲ್ಲೂಕಿನ ಟಿ. ಬೇಗೂರುದಲ್ಲಿರುವ ವೈದ್ಯಕೀಯ ಕಾಲೇಜಿನಲ್ಲಿ ನಡೆದ ಘಟನೆಯನ್ನು ಉಲ್ಲೇಖಿಸಿ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಪೋಸ್ಟ್‌ ಮಾಡಲಾಗಿತ್ತು. ಬೆಂಗಳೂರು

ಇದನ್ನೂ ಓದಿ: ವಾಟ್ಸಾಪ್ ನೋಟಿಸ್‌ಗೆ ಮಾನ್ಯತೆ ಇಲ್ಲ: ಪೊಲೀಸ್ ಇಲಾಖೆಗೆ ಹೈಕೋರ್ಟ್‌

‘ಹಿಂದೂ ಜಾಗೃತನಾಗು’ ಹೆಸರಿನ ‘ಎಕ್ಸ್’ ಖಾತೆಯಲ್ಲಿ ಈ ಆಕ್ಷೇಪಾರ್ಹ ಪೋಸ್ಟ್ ಹಾಕಲಾಗಿತ್ತು. ಇದರ ಬೆನ್ನಲ್ಲೇ ಆರೋಪಿಗಳ ವಿರುದ್ಧ ಪ್ರಕರಣ ದಾಖಲು ಮಾಡಿಕೊಂಡಿರುವ ಸೈಬರ್ ಠಾಣೆಯ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ.

ಪರಮೇಶ್ವರ ಒಡೆತನದ ಸಿದ್ದಾರ್ಥ ಮೆಡಿಕಲ್‌ ಕಾಲೇಜಿನ ತರಗತಿಯಲ್ಲಿ ಎಲ್ಲ ಸಹ ವಿದ್ಯಾರ್ಥಿಗಳ ಸಮ್ಮುಖದಲ್ಲಿ ಪ್ರಾಧ್ಯಾಪಕ ಅಬ್ದುಲ್‌ ಅವರು ವಿದ್ಯಾರ್ಥಿನಿಗೆ ಪ್ರೇಮ ನಿವೇದನೆ ಮಾಡಿದ್ದರು.

ಇದರಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು ಪ್ರಾಧ್ಯಾಪಕನಿಗೆ ಥಳಿಸಿದ್ದರು. ಅಲ್ಲದೇ ವಿದ್ಯಾರ್ಥಿನಿಯೂ ಚಪ್ಪಲಿ ಏಟು ನೀಡಿದ್ದರು. ಈ ಘಟನೆಯ ಬಳಿಕ ಪರಮೇಶ್ವರ ಅವರ ವಿರುದ್ಧ ಆಕ್ಷೇಪಾರ್ಹ ಪೋಸ್ಟ್ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ನೋಡಿ: ನಾಲ್ಕೇ ತಿಂಗಳಲ್ಲಿ ನಿರ್ಗಮನ? ನಿತೀಶ್‌ಗೆ ಬಿಜೆಪಿ ಒತ್ತಡವಿತ್ತೆ? | ವಿ Janashakthi Media

Please follow and like us:
Donate Janashakthi Media

Leave a Reply

Your email address will not be published. Required fields are marked *