ವಿಧಾನ ಪರಿಷತ್‌ನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಅಶ್ಲೀಲ ಪದ ಬಳಕೆ: ಸಿಟಿ ರವಿ ಅಮಾನತಿಗೆ ಕಾಂಗ್ರೆಸ್‌ ನಾಯಕರು ಒತ್ತಡ

ಬೆಳಗಾವಿ : ಡಾ.ಬಿ.ಆರ್.ಅಂಬೇಡ್ಕ‌ರ್‌ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಅವಹೇಳನಕಾರಿ ಹೇಳಿಕೆ ಖಂಡಿಸಿ ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್- ಬಿಜೆಪಿ ಸದಸ್ಯರ ನಡುವೆ ವಾಗ್ವಾದ ನಡೆಯಿತು. ಇದೇ ವೇಳೆ  ಸಚಿವೆ ಲಕ್ಷ್ಮೀ ಹೆಬ್ಬಾಳ‌  ಬಗ್ಗೆ ಸದಸ್ಯ ಸಿ.ಟಿ. ರವಿ ಅಶ್ಲೀಲ ಪದ ಬಳಕೆ ಮಾಡಿದ್ದಕ್ಕೆ ಕಾಂಗ್ರೆಸ್‌ ಪ್ರತಿಭಟನೆ ನಡೆಸಿತು.   ವಿಧಾನ 

ಸಿಟಿ ರವಿ  ಅಶ್ಲೀಲ ಪದ ಬಳಸಿದ್ದಾರೆ ಎಂದು ಆರೋಪಿಸಿ ಇದೀಗ ಕಾಂಗ್ರೆಸ್ ಸದಸ್ಯರು ಸಭಾಪತಿ ಬಸವರಾಜ್‌ ಹೊರಟ್ಟಿ ಅವರಿಗೆ ದೂರು ನೀಡಿದ್ದು, ಸಿಟಿ ರವಿ ಅಮಾನತ್ತಿಗೆ ಒತ್ತಾಯಿಸಿದ್ದಾರೆ. ಸಭಾಪತಿ ಹೊರಟ್ಟಿ ಕಚೇರಿಯಲ್ಲಿ ಮಾತುಕತೆ ನಡೆಸಿದ್ದಾರೆ. ಶೂನ್ಯ ಅವಧಿಯಲ್ಲಿ ಅಮಿತ್ ಶಾ ಹೇಳಿಕೆ ಖಂಡಿಸಿ ಆಡಳಿತ ಸದಸ್ಯರು ಧರಣಿಗೆ ಮುಂದಾದರು. ಕೂಡಲೇ ಅಮಿತ್ ಶಾ ಅವರನ್ನು ಬಂಧಿಸಿ, ರಾಜೀನಾಮೆ ಪಡೆಯುವಂತೆ ಕೈ ಸದಸ್ಯರು ಆಗ್ರಹಿಸಿದರು.

ಇದನ್ನೂ ಓದಿ : ವಿಧಾನಸಭಾ ಕಲಾಪ: ವಿವಾದಾತ್ಮಕ ಹೇಳಿಕೆ ನೀಡಿದ್ದ ಅಮಿತ್ ಶಾ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಕೇಂದ್ರ ಸಚಿವ ಅಮಿತ್ ಶಾ ಅವರು ಬಾಬಾ ಸಾಹೇಬ್ ಅಂಬೇಡ್ಕ‌ ಅವರ ಕುರಿತಂತೆ ಹೇಳಿಕೆ ನೀಡಿದ್ದರು ಈ ಒಂದು ಹೇಳಿಕೆಗೆ ಸದನದಲ್ಲಿ ಕಾಂಗ್ರೆಸ್ ನಾಯಕರು ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ ಭಾವಚಿತ್ರ ಹಿಡಿದುಕೊಂಡು ಬಿಜೆಪಿ ವಿರುದ್ಧ ಘೋಷಣೆ ಕೂಗಿದರು. ಈ ಸಂದರ್ಭ ದಲ್ಲಿ ಬಿಜೆಪಿ ಕೂಡ ಅಂಬೇಡ್ಕರ್ ಅವರ ಭಾವಚಿತ್ರ ಹಿಡಿದುಕೊಂಡು ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ನಡೆಸಿತು.

ರಾಹುಲ್ ಗಾಂಧಿ ಡ್ರಗ್ ಅಡಿಕ್ಟ್ ಎಂದು ಸಿ.ಟಿ.ರವಿ ಆರೋಪಿಸಿದರು. ಇದಕ್ಕೆ ಕೌಂಟರ್್ರ ನೀಡಿದ ಸಚಿವ ಲಕ್ಷ್ಮೀ ಹೆಬ್ಬಾಳ‌ ನೀವು ರಸ್ತೆ ಅಪಘಾತದಲ್ಲಿ ಇಬ್ಬರನ್ನು ಕೊಲೆ ಮಾಡಿದ್ದೀರಿ, ಹಾಗಾಗಿ, ನೀವು ಕೊಲೆಗಾರರು ಎಂದು ದೂರಿದರು. ಆಗ ಸಿ.ಟಿ. ರವಿ, ಆಕ್ಷೇಪಾರ್ಹ ಪದ ಬಳಸಿ, ನಿಮ್ಮನ್ನು ನಾನು ಹಾಗೆ ಕರೆಯೋಕೆ ಆಗುತ್ತಾ ಎಂದರು. ಇದರಿಂದ ಕೈ ಸದಸ್ಯರ ಪಿತ್ತ ನೆತ್ತಿಗೇರಿತು. ನಿಮ್ಮ ಮನೆಯಲ್ಲೂ ಹೆಣ್ಣು ಮಕ್ಕಳು ಇಲ್ಲವೇ? ನಿಮ್ಮ ತಾಯಿನೂ ಓರ್ವ ಹೆಣ್ಣು? ಎಂದು ಲಕ್ಷ್ಮೀ ಹೆಬ್ಬಾಳ್ಳ‌ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ನೋಡಿ : ಅಂಬೇಡ್ಕರ್ ಕುರಿತ ಹೇಳಿಕೆ | ಅಮಿತ್ ಶಾ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ Janashakthi Media

Donate Janashakthi Media

Leave a Reply

Your email address will not be published. Required fields are marked *