ಗಣಿ-ಭೂ ವಿಜ್ಞಾನ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣ : ಓರ್ವ ಆರೋಪಿ ಪೊಲೀಸರ ವಶಕ್ಕೆ

ಬೆಂಗಳೂರು: ಗಣಿ-ಭೂವಿಜ್ಞಾನ ಇಲಾಖೆ ಉಪ ನಿರ್ದೇಶಕಿ ಪ್ರತಿಮಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಹಿಂದೆ ಪ್ರತಿಮಾ ಕಾರು ಚಾಲಕನಾಗಿದ್ದ ಕಿರಣ್ ಎನ್ನುವಾತನನ್ನು ಸುಬ್ರಹ್ಮಣ್ಯಪುರ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹಲವು ವರ್ಷಗಳಿಂದ ಕಾರು ಚಾಲಕನಾಗಿದ್ದ ಕಿರಣ್​ನನ್ನು ಪ್ರತಿಮಾ ಅವರು ತೆಗೆದುಹಾಕಿದ್ದರು. ಕೆಲಸದಿಂದ ತೆಗದುಹಾಕಿದ್ದಕ್ಕೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಕಿರಣ್​ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ. ಗಣಿ-ಭೂ ವಿಜ್ಞಾನ 

ಕಿರಣ್ ಕಳೆದ ಐದು ವರ್ಷಗಳಿಂದ ಗುತ್ತಿಗೆ ಆಧಾರದ ಮೇಲೆ ಕೆಲಸಕ್ಕೆ ಮಾಡುತ್ತಿದ್ದ. ಕಿರಣ್ ತಂದೆ ಸುರೇಶ್ ಸಹ ಇದೇ ಇಲಾಖೆಯಲ್ಲಿ ಚಾಲಕಾರಿದ್ದರು. ಪ್ರತಿಮಾ ಒಂದು ವಾರದ ಹಿಂದೆ ಕಿರಣ್​ನನ್ನು ಕೆಲಸದಿಂದ ತೆಗೆದಿದ್ದರು. ಕೆಲ ವಿಚಾರಗಳಿಗೆ ಪ್ರತಿಮಾ ಮತ್ತು ಕಿರಣ್ ನಡುವೆ ಭಿನ್ನಾಭಿಪ್ರಾಯ ಬಂದಿತ್ತು ಎಂದು ಹೇಳಲಾಗಿದೆ. ಕೆಲಸದಿಂದ ವಜಾಗೊಳಿಸಿದ್ದಕ್ಕೆ ಕೋಪಗೊಂಡಿದ್ದ ಕಿರಣ್ ಈ ಕೃತ್ಯ ವೆಸಗಿರಬಹುದು ಎಂದು ಹೇಳಲಾಗಿದ್ದು, ಸದ್ಯ ವಶಕ್ಕೆ ಪಡೆದಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ನಂತರ ನ್ಯಾಯಾಲಯಕ್ಕೆ ಹಾಜರು ಪಡಿಸಲಿದ್ದಾರೆ. ಗಣಿ-ಭೂ ವಿಜ್ಞಾನ 

ಬೆಂಗಳೂರಿನ ಸುಬ್ರಹ್ಮಣ್ಯ ಪುರ ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡಕಲ್ಲಸಂದ್ರದ ಗೋಕುಲ್‌ ಅಪಾರ್ಟ್ಮೆಂಟ್‌ನಲ್ಲಿ ಗಣಿ-ಭೂವಿಜ್ಞಾನ ಇಲಾಖೆಯ ಅಧಿಕಾರಿ ಪ್ರತಿಮಾರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಮಹಿಳಾ ಅಧಿಕಾರಿ ಒಬ್ಬರೇ ಇದ್ದಾಗ ದುಷ್ಕರ್ಮಿಗಳು ಬಂದು ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಇದನ್ನು ಓದಿ: ಬರ ಪರಿಹಾರ ವಿಚಾರದಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ| ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಶನಿವಾರ ಸಂಜೆ 7.30ರ ಸುಮಾರಿಗೆ ಬೆಂಗಳೂರಿನ  ಗ್ರಾಮಾಂತರ ಭೂಗರ್ಭ ಶಾಸ್ತ್ರ ವಿಭಾಗದ ಹಿರಿಯ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪ್ರತಿಮಾ ದೊಡ್ಡಕಲ್ಲಸಂದ್ರದ ಗೋಕುಲ್‌ ಅಪಾರ್ಟ್ಮೆಂಟ್‌ನ ಮನೆಗೆ ನುಗ್ಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಅಧಿಕಾರಿಯ ಕುತ್ತಿಗೆಯನ್ನು ಹಗ್ಗದಿಂದ ಬಿಗಿದು ಬಳಿಕ ಚಾಕುವಿನಿಂದ ಕತ್ತನ್ನು ಸೀಳಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಇವರ ಪತಿ ಮತ್ತು ಮಗ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನೆಲೆಸಿದ್ದಾರೆ.

ಈಗಾಗಲೇ ಆರೋಪಿಗಳ ಪತ್ತೆಗೆ ಮೂರು ವಿಶೇಷ ತಂಡಗಳನ್ನು ರಚನೆ ಮಾಡಲಾಗಿದ್ದು, ವೈಯಕ್ತಿಕ ಜೀವನ, ವೃತ್ತಿ ಜೀವನ, ಹಣಕಾಸು ( ಆರ್ಥಿಕ ) ಜೀವನ ಈ ಮೂರು ಆಯಾಮಗಳಲ್ಲಿ ತನಿಖೆ ಕೈಗೊಂಡಿದ್ದಾರೆ. ಗಣಿ-ಭೂ ವಿಜ್ಞಾನ 

ವಿಡಿಯೋ ನೋಡಿ: ಕಾರ್ನಾಡ್ ನೆನಪು : ಕಾರ್ನಾಡರು‌ ಅಡ್ಡಾಡುತ ಬೆಳದವರಲ್ಲ, ಆಡಾಡತ ಬೆಳದವರು – ಡಾ. ಎಂ.ಎಸ್.‌ ಆಶಾದೇವಿ

Donate Janashakthi Media

Leave a Reply

Your email address will not be published. Required fields are marked *