ಭಾರತದಲ್ಲಿ ಒಮಿಕ್ರಾನ್ ಪತ್ತೆ : ಆಶ್ವರ್ಯವೇನಿಲ್ಲ – ಡಬ್ಲ್ಯೂಎಚ್ಒ

ಜಿನೀವಾ : ಕೊರೋನಾವೈರಸ್ ರೂಪಾಂತರಿ ತಳಿ ಒಮಿಕ್ರಾನ್ ಭಾರತದಲ್ಲಿ ಪತ್ತೆಯಾಗಿರುವುದರಲ್ಲಿ ಆಶ್ಚರ್ಯವೇನಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ಆಗ್ನೇಯ ಏಷ್ಯಾದ ಪ್ರಾದೇಶಿಕ ನಿರ್ದೇಶಕಿ ಡಾ ಪೂನಂ ಖೇತ್ರಪಾಲ್ ಸಿಂಗ್ ಹೇಳಿದ್ದಾರೆ.

ಅಂತರ್ ಸಂಪರ್ಕಿತ ಜಗತ್ತಿನಲ್ಲಿ ನಾವು ವಾಸಿಸುತ್ತಿರುವುದರಿಂದ ಒಮಿಕ್ರಾನ್ ಪತ್ತೆಯಾಗಿರುವುದು ಅನಿರೀಕ್ಷಿತವೇನಲ್ಲಾ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

 

ಒಮಿಕ್ರಾನ್ ರೂಪಾಂತರಿ ಹೆಚ್ಚಿನ ಸಂಖ್ಯೆಯ ರೂಪಾಂತರಿಗಳನ್ನು ಹೊಂದಿದ್ದು, ತ್ವರಿತಗತಿಯಲ್ಲಿ ಹರಡಬಲ್ಲದು ಎಂಬ ಆತಂಕ ಮನೆ ಮಾಡಿದ್ದು, ಇದರ ಪ್ರಸರಣ, ತೀವ್ರತೆ ಮತ್ತು ರೋಗ ನಿರೋಧಕ ಶಕ್ತಿ ಕ್ಷೀಣತೆ ಸುತ್ತ ವಿಶ್ವದಾದ್ಯಂತ ಸಂಶೋಧಕರು ಅಧ್ಯಯನ ನಡೆಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಆಗಮಿಸಿದ್ದ 66 ಮತ್ತು 46 ವರ್ಷದ ವ್ಯಕ್ತಿಗಳಲ್ಲಿ ಈ ಸೋಂಕು ಪತ್ತೆಯಾಗಿದೆ. ಅಲ್ಲದೇ ಇವರಿಬ್ಬರೂ ಬೆಂಗಳೂರಿನವರೇ ಎಂದು ಹೇಳಲಾಗುತ್ತಿದೆ. ಇದರಲ್ಲಿ ಓರ್ವ ವ್ಯಕ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದ್ದು, ಮತ್ತೋರ್ವ ವ್ಯಕ್ತಿ ವಿದೇಶಕ್ಕೆ ಹೋಗಿದ್ದಾರೆ ಎಂಬ ಶಂಕೆ ಇದೆ.

ಅಪಾಯಕಾರಿ ವೈರಸ್ ಅಲ್ಲ : ರಾಜ್ಯದಲ್ಲಿ ಇಬ್ಬರಿಗೆ ಕೊರೊನಾ ರೂಪಾಂತರಿ ತಳಿ ಒಮಿಕ್ರಾನ್ ಪತ್ತೆ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಆತಂಕ ಪಡುವ ಅಗತ್ಯವಿಲ್ಲ, ಒಮಿಕ್ರಾನ್ ಅಪಾಯಕಾರಿ ವೈರಸ್ ಅಲ್ಲ ಎಂದು ತಿಳಿಸಿದ್ದಾರೆ.

ನವದೆಹಲಿಯಲ್ಲಿ ಮಾತನಾಡಿದ ಸಿಎಂ, ಒಮಿಕ್ರಾನ್ ತಡೆಗೆ ಈಗಾಗಲೇ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ತಜ್ಞರು ಆತಂಕ ಪಡುವ ಅಗತ್ಯವಿಲ್ಲ ಎಂದಿದ್ದಾರೆ. ಅಗತ್ಯಬಿದ್ದರೆ ಮಾರ್ಗಸೂಚಿ ಬದಲಿಸಲಾಗುವುದು ಎಂದು ಹೇಳಿದರು.

ಒಮಿಕ್ರಾನ್ ಸೋಂಕಿತರ ಚಿಕಿತ್ಸೆಗೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಜನರು ಆತಂಕ ಪಡುವ ಅಗತ್ಯವಿಲ್ಲ ಆದರೆ ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಹೇಳಿದರು.

Donate Janashakthi Media

Leave a Reply

Your email address will not be published. Required fields are marked *