ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ವಿಪಕ್ಷ ನಾಯಕ ಆಯ್ಕೆ ವಿಚಾರವಾಗಿ ಅಸಮಾಧಾನ ಭುಗಿಲೆದ್ದಿದೆ. ಈ ಹೊತ್ತಿನಲ್ಲೇ ಶಾಸಕ ಬಸನ ಗೌಡ ಪಾಟೀಲ ಯತ್ನಾಳ್ ವಿಪಕ್ಷ ಸ್ಥಾನ ಉತ್ತರ ಕರ್ನಾಟಕಕ್ಕೆ ಸಿಗಬೇಕು ಇದರಲ್ಲಿ ರಾಜಿ ಇಲ್ಲ ಎಂದು ಆಗ್ರಹಿಸಿದ್ದಾರೆ.
ರಾಜ್ಯ ಅಧ್ಯಕ್ಷ ಹಾಗೂ ವಿಪಕ್ಷ ನಾಯಕ ಸ್ಥಾನ ಹಂಚಿಕೆ ವಿಚಾರವಾಗಿ ಬಿಜೆಪಿಯಲ್ಲಿ ಅಸಮಾಧಾನ ಉಂಟಾಗಿದೆ. ಈ ವಿಚಾರವಾಗಿ ಇಂದು ಸಂಜೆ ನಡೆಯಲಿರುವ ಶಾಸಕಾಂಗ ಪಕ್ಷದ ಸಭೆಗೆ ವೀಕ್ಷಕರಾಗಿ ಆಗಮಿಸಿರುವ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಶ್ಯಂತ್ ಕುಮಾರ್ ಗೌತಮ್ ಶಾಸಕ ಬಸನ ಗೌಡ ಪಾಟೀಲ ಯತ್ನಾಳ್ ಮನೆಗೆ ಆಗಮಿಸಿ ಮಾತನಾಡಿದ್ದಾರೆ.
ಇದನ್ನೂ ಓದಿ:ವಿಪಕ್ಷ ನಾಯಕನಿಲ್ಲದ ಅಧಿವೇಶನ – ಕಗ್ಗಂಟು ಬಿಚ್ಚಲಾಗದ ಬಿಜೆಪಿ
ಮಾತುಕತೆಯ ನಂತರ ಮಾತನಾಡಿತ ಯತ್ನಾಳ್, ದಕ್ಷಿಣ ಕರ್ನಾಟಕದವರೇ ಆಗಬೇಕಾ? ಮಂಗಳೂರು ಬಿಟ್ಟರೆ ದಕ್ಷಿಣ ಕರ್ನಾಟಕದ ಎಷ್ಟು ಶಾಸಕರು ಇದ್ದಾರೆ? ಬಹಳಷ್ಟು ಶಾಸಕರು ನಮ್ಮ ಜೊತೆ ಇದ್ದಾರೆ ಆದರೆ ಅವರಿಗೆ ಮಾತಾಡಲು ಧಮ್ ಇಲ್ಲ ಎಂದು ಹೇಳಿದ್ದಾರೆ.