ರಾಮನಾಥ್ ಕೋವಿಂದ್ ನೇತೃತ್ವದಲ್ಲಿ ಸಮಿತಿ ರಚನೆ ರಾಮನಾಥ್ ಕೋವಿಂದ್
ನವದೆಹಲಿ: ಒಂದು ದೇಶ, ಒಂದು ಚುನಾವಣೆ ಯೋಜನೆ ಅನುಷ್ಠಾನ ಸಾಧ್ಯತೆಯನ್ನು ಪರಿಶೀಲಿಸಲು ಕೇಂದ್ರ ಸರ್ಕಾರವು ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ನೇತೃತ್ವದ ಸಮಿತಿಯನ್ನು ರಚಿಸಿದೆ ಎಂದು ಶುಕ್ರವಾರ ಸೆಪ್ಟೆಂಬರ್-1 ರಂದು ಮಾಧ್ಯಮಗಳು ವರದಿ ಮಾಡಿವೆ. ,
ಇದನ್ನೂ ಓದಿ:ಸೆಪ್ಟೆಂಬರ್ 18 ರಿಂದ 22ರ ವರೆಗೆ ಸಂಸತ್ ವಿಶೇಷ ಅಧಿವೇಶನ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಘೋಷಣೆ
ದೆಹಲಿಯ ಜಿ 20 ಶೃಂಗಸಭೆಯ ನಂತರ ವಿಶೇಷ ಅಧಿವೇಶನ ನಡೆಯಲಿದ್ದು, ಇದರ ನಡುವೆಯೇ ಒಂದು ರಾಷ್ಟ್ರ, ಒಂದು ಚುನಾವಣೆಯ ಸಾಧ್ಯತೆಯನ್ನು ಅಧ್ಯಯನ ಮಾಡಲು ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಸಮಿತಿಯನ್ನು ಕೇಂದ್ರ ಸರ್ಕಾರ ರಚಿಸಿದೆ. ಸಮಿತಿಯ ಸದಸ್ಯರ ಕುರಿತು ಅಧಿಸೂಚನೆಯನ್ನು ನಂತರ ಹೊರಡಿಸಲಾಗುವುದು ಎಂದು ಸರ್ಕಾರ ತಿಳಿಸಿದೆ.
ಈಗಾಗಲೇ ಚರ್ಚೆಯಲ್ಲಿರುವ ‘ಒಂದು ರಾಷ್ಟ್ರ-ಒಂದು ಚುನಾವಣೆ’ ಮಸೂದೆಯು ಸ್ವಲ್ಪ ಸಮಯದವರೆಗೆ ಸರ್ಕಾರದ ಕಾರ್ಯಸೂಚಿಯಲ್ಲಿರಲಿದೆ. ಕೇಂದ್ರ ಸರ್ಕಾರವು ಸೆಪ್ಟೆಂಬರ್ 18 ರಿಂದ 22 ರವರೆಗೆ ನಡೆಯಲಿರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆಯನ್ನು ಮಂಡಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಈ ಮಸೂದೆಯು ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸಲು ಅವಕಾಶ ನೀಡುತ್ತದೆ ಎಂದು ಹೇಳಲಾಗಿದೆ.ರಾಮನಾಥ್ ಕೋವಿಂದ್
ಇದೇ ವರ್ಷ ನವೆಂಬರ್-ಡಿಸೆಂಬರ್ ತಿಂಗಳಲ್ಲಿ ಐದು ರಾಜ್ಯಗಳ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮುಂದಿನ ವರ್ಷ ಮೇ ಅಥವಾ ಜೂನ್ ತಿಂಗಳಿನಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. ಒಂದು ದೇಶ, ಒಂದು ಚುನಾವಣೆ ಕಲ್ಪನೆ ಬಗ್ಗೆ ಹಿಂದೆ ಪ್ರತಿಪಾದಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು, “ಈ ವ್ಯವಸ್ಥೆ ಭಾರತಕ್ಕೆ ಅಗತ್ಯವಾಗಿದೆ. ಏಕೆಂದರೆ, ವರ್ಷದಲ್ಲಿ ಆಗಾಗ್ಗೆ ನಡೆಯುತ್ತಿರುವ ಚುನಾವಣೆಗಳು ಅಭಿವೃದ್ಧಿ ಕಾರ್ಯಕ್ಕೆ ಅಡ್ಡಿಯಾಗಿದೆ” ಎಂದು ಹೇಳಿದ್ದರು.