ನವದೆಹಲಿ: ಕೇಂದ್ರ ಹಣಕಾಸು ಸಚಿವಾಲಯವು ಶೀಘ್ರದಲ್ಲೇ ‘ಒಂದು ರಾಜ್ಯ ಒಂದು ಪ್ರಾದೇಶಿಕ ಗ್ರಾಮೀಣ ಬ್ಯಾಂಕ್’ ಯೋಜನೆಯನ್ನು ಜಾರಿಗೆ ತರಲಿದೆ. ಅದರಂತೆ ಕರ್ನಾಟಕದಲ್ಲಿ ಈಗಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್ ಮತ್ತು ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್‌ಗಳು ವಿಲೀನಗೊಂಡು ಒಂದೇ ಆಗಲಿವೆ.
ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳ (ಆರ್‌ಆರ್‌ಬಿ) ಕಾರ್ಯಾಚರಣೆಯ ದಕ್ಷತೆ ಹೆಚ್ಚಳ ಮತ್ತು ವೆಚ್ಚದ ಸಾರ್ವತ್ರೀಕರಣ ಹಾಗೂ ಹಾಲಿ ಇರುವ 42 ಆರ್‌ಆರ್‌ಬಿಗಳ ಸಂಖ್ಯೆಯನ್ನು 28ಕ್ಕಿಳಿಸುವ ಉದ್ದೇಶದಿಂದ ಸರ್ಕಾರ ಒಂದು ರಾಜ್ಯ ಒಂದು ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ ಎಂಬ ಯೋಜನೆ ಜಾರಿಗೆ ತರಲು ಉದ್ದೇಶಿಸಿದೆ.
ಇದನ್ನೂ ಓದಿ: ಉತ್ತರ ಭಾರತದಲ್ಲಿ ಐದು ದಿನಗಳ ಬಿಸಿಗಾಳಿ ಅಬ್ಬರ – ಐಎಂಡಿ ಎಚ್ಚರಿಕೆ
ಈಗಾಗಲೇ ಬ್ಯಾಂಕುಗಳ ಸಂಖ್ಯೆ ಕಡಿತಕ್ಕೆ ಸಂಬಂಧಿಸಿದ ಕೆಲಸ-ಕಾರ್ಯಗಳು ಪೂರ್ಣಗೊಂಡಿವೆ. ವಿಲೀನ ಕಾರ್ಯ ಶೀಘ್ರದಲ್ಲೇ ಆರಂಭವಾಗಲಿದೆ ಎಂದು ಮೂಲಗಳು ತಿಳಿಸಿವೆ.
ಹಣಕಾಸು ಸಚಿವಾಲಯದ ಪ್ರಕಾರ ಒಟ್ಟು 15 ಆರ್‌ಆರ್‌ಬಿಗಳನ್ನು ವಿಲೀನಗೊಳಿಸಲು ಉದ್ದೇಶಿಸಲಾಗಿದೆ. ಆಂಧ್ರಪ್ರದೇಶವು ಅತಿಹೆಚ್ಚು ಅಂದರೆ ನಾಲ್ಕು ಆರ್‌ಆರ್‌ಬಿಗಳನ್ನು ಹೊಂದಿದ್ದು, ಉತ್ತರಪ್ರದೇಶ ಮತ್ತು ಪಶ್ಚಿಮ ಬಂಗಾಳ ತಲಾ ಮೂರು, ಬಿಹಾರ, ಗುಜರಾತ್, ಜಮ್ಮು ಮತ್ತು ಕಾಶ್ಮೀರ, ಕರ್ನಾಟಕ, ಮಧ್ಯಪ್ರದೇಶ, ಮಹಾರಾಷ್ಟ್ರ, ಒಡಿಶಾ ಮತ್ತು ರಾಜಸ್ಥಾನ ತಲಾ ಎರಡು ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳನ್ನು ಹೊಂದಿವೆ. ವಿಲೀನಕ್ಕೂ ಮುನ್ನ ಆರ್‌ಆರ್‌ಬಿಗಳಿಗೆ ಹಣಕಾಸು ಮರುಪೂರಣ ಕಾರ್ಯ ನಡೆಯಲಿದೆ ಎಂದು ತಿಳಿದು ಬಂದಿದೆ.
ಇದನ್ನೂ ನೋಡಿ: ಪಿಚ್ಚರ್ ಪಯಣ – 155 | ಕಾಡುವ ವಲಸಿಗ ಫಿಲಂಗಳು – ವಸಂತರಾಜ್ ಎನ್.ಕೆ Janashakthi Media