ಆನ್‌ಲೈನ್ ಗೇಮ್ ಚಟ: ಲಕ್ಷಾಂತರ ರೂಪಾಯಿ ಸಾಲ ಮಡಿಕೊಂಡ ಯುವಕ ಆತ್ಮಹತ್ಯೆಗೆ ಯತ್ನ

ಬೀದರ್: ಯುವಕನೊಬ್ಬ ಮೊಬೈಲ್ ಮೂಲಕ ಆನ್‌ಲೈನ್ ಗೇಮ್ ಚಟಕ್ಕೆ ಬಿದ್ದು ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡ ಪರಿಣಾಮ ಕೊನೆಗೆ ಸಾಲ ತೀರಿಸಲಾಗದೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೀದರ್‌ನಲ್ಲಿ  ನಡೆದಿದೆ. ಚಟ

ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಜ್ಯೋತಿ ತಾಂಡಾದ ಬಳಿ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನಿಸಿದ್ದು, ಪೆಟ್ರೋಲ್ ಹಾಕಿಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಹಿನ್ನೆಲೆ ದೇಹದ ಬಹುತೇಕ ಭಾಗ ಸುಟ್ಟು ಹೋಗಿದೆ.ಆತ್ಮಹತ್ಯೆಗೆ ಯತ್ನಿಸಿದ ಯುವಕನನ್ನು ವಿಜಯ್‌ಕುಮಾರ್‌ ಜಗನ್ನಾಥ ಹೊಳ್ಳೆ (25) ಎಂದು ಗುರುತಿಸಲಾಗಿದೆ.

ಇದನ್ನೂ ಓದಿ : 4ನೇ ತರಗತಿಯ ದಲಿತ ವಿದ್ಯಾರ್ಥಿ ಗೆ ಬಾಸುಂಡೆ ಬರುವಂತೆ ಥಳಿತ, ಶಿಕ್ಷಕ ಸಸ್ಪೆಂಡ್

ಮೂಲತಃ ಹುಲಸೂರು ತಾಲೂಕಿನ ಬೇಲೂರು ಗ್ರಾಮದ ಯುವಕ ವಿಜಯ್‌ಕುಮಾರ್ ಜಗನ್ನಾಥ ಹೊಳೆ ಆನ್‌ಲೈನ್ ಗೇಮ್ ಹುಚ್ಚಿಗೆ ಬಿದ್ದು 12 ಲಕ್ಷಕ್ಕೂ ಅಧಿಕ ಸಾಲ ಮಾಡಿಕೊಂಡಿದ್ದ ಬಿ.ಫಾರ್ಮಸಿ ಪದವೀಧರನಾಗಿದ್ದು ಕೆಲ ತಿಂಗಳಿಂದ ಆನ್‌ಲೈನ್ ಗೇಮ್ ಹುಚ್ಚಿಗೆ ಬಿದ್ದಿದ್ದ ಎನ್ನಲಾಗಿದೆ.

ಲಕ್ಷಾಂತರ ರೂಪಾಯಿ ಸಾಲ ಮಾಡಿ ಆನ್‌ಲೈನ್‌ನಲ್ಲಿ ಕಳೆದುಕೊಂಡಿದ್ದ ಯುವಕನ ಹಣವನ್ನು ಈಗಾಗಲೇ ಕುಟುಂಬಸ್ಥರು 10 ಲಕ್ಷ ಸಾಲ ತೀರಿಸಿದ್ದರು. ಆದರೆ ಮತ್ತೆ ಎರಡು ಲಕ್ಷ ಸಾಲ ಮಾಡಿಕೊಂಡಿದ್ದ ವಿಜಯಕುಮಾರ್, ಈ ಸಾಲದ ವಿಷಯ ಮನೆಯಲ್ಲಿ ಗೊತ್ತಾದ್ರೆ ತೊಂದರೆ ಆಗುತ್ತೆ ಅಂತಾ ಅತ್ಮಹತ್ಯೆಗೆ ಯತ್ನಿಸಿದ್ದಾನೆ.

ಸದ್ಯ ಗಂಭೀರ ಗಾಯಗೊಂಡ ಯುವಕ ವಿಜಯ್‌ಕುಮಾರ್ ಜಗನ್ನಾಥ ಹೊಳ್ಳೆ ನನ್ನು ಬ್ರಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಮೇಹಕ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ನೋಡಿ : ‘ಪುರುಷರ ಸಾವಿನ ಸುತ್ತ’ – 498A ಏನು – ಎತ್ತ? Janashakthi Media

Donate Janashakthi Media

Leave a Reply

Your email address will not be published. Required fields are marked *