ಆನ್ ಲೈನ್ ಗೇಮ್ ನಿಷೇಧಕ್ಕೆ : ಹೊಸ ಕಾನೂನು ಜಾರಿಗೆ ಚಿಂತನೆ

ಬೆಂಗಳೂರು : ಕಾನೂನು ಬಾಹಿರವಾಗಿ ನಡೆಯುತ್ತಿರುವ ಆಲ್ ಲೈನ್ ಗೇಮ್ ನಿಷೇಧಿಸಲು ರಾಜ್ಯ ಸರ್ಕಾರ ಚಿಂತನೆ ನೆಡೆಸುತ್ತಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಇಂದು ವಿಧಾನಸೌಧದ  ಬ್ಯಾಂಕ್ವೆಟ್ ಸಭಾಂಗಣದಲ್ಲಿ ನಡೆದ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಏರ್ಪಡಿಸಿದ್ದ ಮುಖ್ಯಮಂತ್ರಿ ಪದಕ ಪ್ರಧಾನ ಸಮಾರಂಭ ಮುಗಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈಗಾಗಲೇ ದಿನೇ ದಿನೇ ಆನ್ ಲೈನ್ ಗೇಮ್ ಗಳ ಜೂಜಾಟಕ್ಕೆ ಯುವಕರು ಬಲಿಯಾಗುತ್ತಿದ್ದಾರೆ.

ಇದರಿಂದ ಇವರ ಕುಟುಂಬಗಳು ಬೀದಿಗೆ ಬರುತ್ತಿವೆ. ಇದರಿಂದ ತಮ್ಮ ಅಮುಲ್ಯ ಬದುಕನ್ನು ಆಳುಮಾಡಿಕೊಳ್ಳುತ್ತಿದ್ದಾರೆ. ಇತಂಹ ಕಾನೂನು ಬಾಹಿರವಾಗಿ ನಡೆಯುತ್ತಿರುವ ಗೇಮ್ ಗಳ ನೀಷೇಧಕ್ಕೆ  ಹೊಸ ಕಾನೂನು ಜಾರಿಗೊಳಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಈಗಾಗಲೇ ಬೇರೆ ಬೇರೆ ರಾಜ್ಯಗಳಲ್ಲಿ ಈ ಕಾನೂನು ಜಾರಿಯಲ್ಲಿದ್ದು, ಅದರ ಬಗ್ಗೆ ಅಧ್ಯನ ಮಾಡಿ ಹೊಸ ಕಾನೂನು ಜಾರಿಗೊಳಿಸುತ್ತೇವೆ ಎಂದು ಅವರು ತಿಳಿಸಿದರು.

Donate Janashakthi Media

Leave a Reply

Your email address will not be published. Required fields are marked *