ಹುಬ್ಬಳ್ಳಿ: ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ಬಿ.ವೈ. ವಿಜಯೇಂದ್ರ ಅವರನ್ನು ಆಯ್ಕೆ ಮಾಡಿರುವ ಬಿಜೆಪಿ ಹೈಕಮಾಂಡ್ ನಿರ್ಧಾರ ಅತ್ಯಂತ ಸೂಕ್ತವಾಗಿದೆ. ನಮ್ಮ ರಾಷ್ಟ್ರೀಯ ನಾಯಕತ್ವ ಯುವಕರಿಗೆ ಆದ್ಯತೆ ನೀಡಿದೆ. ವಿಜಯೇಂದ್ರ ಅವರನ್ನು ನಾನು ಅತ್ಯಂತ ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ. ವಿಜಯೇಂದ್ರ ನಾಯಕತ್ವದಲ್ಲಿ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಾವು ಪಕ್ಷವನ್ನು ಗಟ್ಟಿಗೊಳಿಸುತ್ತೇವೆ. ಬಿ.ವೈ. ವಿಜಯೇಂದ್ರ ಮೂರು ವರ್ಷ ಮಾತ್ರ ಅಧ್ಯಕ್ಷರಾಗಿರುತ್ತಾರೆ. ನಂತರ ಮತ್ತೊಬ್ಬ ಕಾರ್ಯಕರ್ತ ಅಧ್ಯಕ್ಷರಾಗುತ್ತಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ವರ್ಷ
ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಪ್ರಲ್ಹಾದ್ ಜೋಶಿ, ಬಿ.ಎಸ್. ಯಡಿಯೂರಪ್ಪ ಒಂದು ಜಾತಿ, ಸಮುದಾಯಕ್ಕೆ ಸೀಮಿತರಾದ ನಾಯಕರಲ್ಲ. ಯಡಿಯೂರಪ್ಪ ಪಕ್ಷಾತೀತ ನಾಯಕ. ಎಲ್ಲ ಸಮುದಾಯದವರೂ ಅವರಿಗೆ ಬೆಂಬಲ ಕೊಡುತ್ತಿದ್ದಾರೆ. ಕರ್ನಾಟಕ ಬಿಜೆಪಿಯಲ್ಲಿ ಯಾವುದೇ ಬಣ ಇಲ್ಲ ಎಂದು ಸ್ಪಷ್ಟಪಡಿಸಿದರು.
ಇದನ್ನೂ ಓದಿ:ಕರ್ನಾಟಕ ಬಿಜೆಪಿಯ ನೂತನ ಅಧ್ಯಕ್ಷರಾಗಿ ಬಿ.ಎಸ್. ಯಡಿಯೂರಪ್ಪ ಅವರ ಮಗ ವಿಜಯೇಂದ್ರ ಆಯ್ಕೆ
ಒಟ್ಟಿಗೆ ಕೆಲಸ ಮಾಡುತ್ತೇವೆ
ವಿಜಯೇಂದ್ರ 15 ವರ್ಷಗಳಿಂದ ಪಕ್ಷದ ಕೆಲಸವನ್ನು ಮಾಡಿಕೊಂಡು ಬಂದಿದ್ದಾರೆ. ವಿಜಯೇಂದ್ರ ಆ ಹುದ್ದೆಗೆ ಬರುವ ಮುನ್ನ, ಅವರು ಯುವ ಮೋರ್ಚಾದಲ್ಲಿ ಕೆಲಸ ಮಾಡಿದ್ದಾರೆ. ಇದು ವಂಶಪಾರಂಪರ್ಯದ ಅಧಿಕಾರವಲ್ಲ. ನೆಹರು, ಇಂದಿರಾಗಾಂಧಿ, ರಾಜೀವ್ ಗಾಂಧಿ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕ್ ಖರ್ಗೆ ಅವರದ್ದು ವಂಶಪಾರಂಪರ್ಯ ಆಡಳಿತವಾಗಿದೆ. ಈಗ ಅಸಮಾಧಾನಿತರ ಜತೆ ನಾನು ಮಾತನಾಡುತ್ತೇನೆ. ವಿಜಯೇಂದ್ರ ಅವರಿಗೆ ನಾವು ಎಲ್ಲ ರೀತಿಯ ಬೆಂಬಲವನ್ನೂ ಕೊಡುತ್ತೇವೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ 25 ಸ್ಥಾನವನ್ನು ಗೆಲ್ಲಬೇಕಿದೆ. ವಿಜಯೇಂದ್ರ ನೇತೃತ್ವದಲ್ಲಿ ನಾನೂ ಸೇರಿದಂತೆ ಎಲ್ಲ ನಾಯಕರೂ ಕೆಲಸ ಮಾಡುತ್ತೇವೆ. ಇದು ಸಮುದಾಯದ ಆಧಾರದ ಮೇಲೆ ಕೊಟ್ಟಿರುವ ಹುದ್ದೆ ಅಲ್ಲ ಎಂದು ಪ್ರಲ್ಹಾದ್ ಜೋಶಿ ಸ್ಪಷ್ಟಪಡಿಸಿದರು.
ಈಗ ದೇಶದಲ್ಲಿ ಕಾಂಗ್ರೆಸ್ ಪರಿಸ್ಥಿತಿ ಏನಾಗಿದೆ?
ರಾಜ್ಯದಲ್ಲಿ ನಮ್ಮದೇ ತಪ್ಪುಗಳಿಂದ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ದೇಶದಲ್ಲಿ ಕಾಂಗ್ರೆಸ್‌ನ ಪರಿಸ್ಥಿತಿ ಏನಾಗಿದೆ? ಎಂದು ಪ್ರಲ್ಹಾದ್ ಜೋಶಿ ಪ್ರಶ್ನೆ ಮಾಡಿದರು. ಸಿಎಂ ಸಿದ್ದರಾಮಯ್ಯ ಅವರನ್ನು ಕಂಡರೆ ಮೋದಿಗೆ ಭಯ ಎಂದು ಹೇಳಿಕೆ ನೀಡುತ್ತಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಿದ ಪ್ರಲ್ಹಾದ್ ಜೋಶಿ, ಈ ಹಿಂದೆ ರಾಹುಲ್ ಗಾಂಧಿ ಸಹ ಬಾಲಿಶ ಹೇಳಿಕೆ ನೀಡಿದ್ದರು. ಮೋದಿಯವರು ನನ್ ಕಣ್ಣಲ್ಲಿ ಕಣ್ಣಿಟ್ಟು ನೋಡಲಿ ಎಂದಿದ್ದರು. ಈಗ ಸಿದ್ದರಾಮಯ್ಯ ಸಹ ರಾಹುಲ್ ಗಾಂಧಿ ಲೆವಲ್‌ಗೆ ಇಳಿದು ಮಾತನಾಡುತ್ತಿದ್ದಾರೆ ಎಂದು ಕಿಡಿಕಾರಿದರು. ಕೇಂದ್ರ
ವಿಡಿಯೋ ನೋಡಿ:ದುಡಿಯುವ ಜನರ ಮಹಾಧರಣಿ ನವೆಂಬರ್ 26 ರಿಂದ 28 Janashakthi Media