ಮುಂಬೈ: ಮಹಾರಾಷ್ಟ್ರದ ನೂತನ ಸರ್ಕಾರದಲ್ಲಿ ಏಕನಾಥ್ ಶಿಂಧೆ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸದಿದ್ದರೆ ಪಕ್ಷದ ಯಾವುದೇ ಶಾಸಕರು ಯಾವುದೇ ಜವಾಬ್ದಾರಿಯನ್ನು ವಹಿಸಿಕೊಳ್ಳುವುದಿಲ್ಲ ಎಂದು ಸುದ್ದಿಗಾರರೊಂದಿಗೆ ಮಾತನಾಡಿದ ಶಿವಸೇನೆ (ಶಿಂಧೆ ಬಣ) ನಾಯಕ ಉದಯ್ ಸಮಂತ್, ಹೇಳಿದ್ದಾರೆ.
ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ದೇವೇಂದ್ರ ಪಡ್ನವೀಸ್ ಪ್ರಮಾಣ ವಚನಕ್ಕೆ ಕೆಲವೇ ಗಂಟೆಗಳು ಬಾಕಿಯಿರುವಾಗ ಶಿವಸೇನೆ ನಾಯಕ ಉದಯ್ ಸಮಂತ್ ಮಾತನಾಡಿ, ಶಿವಸೇನೆಯ ಯಾವುದೇ ಶಾಸಕರು ಉಪ ಮುಖ್ಯಮಂತ್ರಿಯಾಗಬೇಕೆಂಬ ಇಚ್ಚೆಯನ್ನು ಹೊಂದಿಲ್ಲ, ಶಿಂಧೆ ಮಾತ್ರ ಆ ಹುದ್ದೆಯನ್ನು ಅಲಂಕರಿಸಬೇಕು ಎಂದು ಹೇಳಿದ್ದಾರೆ.
ಇದನ್ನೂ ಓದಿ: ಜೂಜಾಟದ ಚಟಕ್ಕೆ ಬಿದ್ದ ವಿದ್ಯಾರ್ಥಿ: ಸಾಲ ತೀರಿಸಲು ಸಾಧ್ಯವಾಗದೆ ಆತ್ಮಹತ್ಯೆ
ಶಿವಸೇನಾ ನಾಯಕ ಏಕನಾಥ್ ಶಿಂಧೆ ಅವರಿಗೆ ಉಪ ಮುಖ್ಯಮಂತ್ರಿಯಾಗಿ ಹೊಸ ಸರ್ಕಾರವನ್ನು ಸೇರಲು ಇಚ್ಛೆಯಿಲ್ಲ ಎನ್ನಲಾಗಿದೆ. ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ದೇವೇಂದ್ರ ಫಡ್ನವಿಸ್ ಅವರು ಗುರುವಾರ ಸಂಜೆ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಅದ್ದೂರಿ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಕೂಡ ಭಾಗಿಯಾಗಲಿದ್ದಾರೆ ಎಂದು ಹೇಳಲಾಗಿದೆ.
ಇದನ್ನೂ ನೋಡಿ: ಸಾರ್ವಜನಿಕ ಆರೋಗ್ಯ ವ್ಯವಸ್ಥೆಗೆ ಕೇರಳ ಮಾದರಿ ಜಾರಿಯಾಗಲಿ – ಡಾ. ಅನೀಲ್ Janashakthi Media