ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ವಿರುದ್ಧ ನಡುಗುವ ಚಳಿ, ದೆಹಲಿಯ ಕಳಪೆ ವಾಯು ಗುಣಮಟ್ಟದ ನಡುವೆ ಎರಡನೇ ದಿನದ ಅಧಿವೇಶನ ಆರಂಭಕ್ಕೆ ಮುನ್ನ ವಿಪಕ್ಷ ಸದಸ್ಯರು ಪ್ರತಿಭಟನೆ ನಡೆಸಿದರು. ಸಂಸತ್ತಿನ ಮುಂದೆ ಘೋಷಣೆಗಳನ್ನು ಕೂಗುತ್ತಾ ತೀವ್ರವಾದ ಪ್ರತಿಭಟನೆ ವ್ಯಕ್ತಪಡಿಸಿದರು.
ಮೊದಲ ದಿನದ ಚಳಿಗಾಲದ ಅಧಿವೇಶನದಂದು ಕೂಡ ಎಸ್ಐಆರ್ ವಿಚಾರವಾಗಿ ವಿಪಕ್ಷಗಳು ಚರ್ಚೆಗೆ ಪಟ್ಟು ಹಿಡಿದವು. ಇದರಿಂದ ಹಲವು ಬಾರಿ ಕಲಾಪಗಳನ್ನು ಮುಂದೂಡಲಾಯಿತು. ಕಾಂಗ್ರೆಸ್, ಇಂಡಿಯಾ ಒಕ್ಕೂಟದ ನಾಯಕರು ಮತ್ತು ವಿಪಕ್ಷ ಸಂಸದರು ಸಂಸತ್ತಿನ ಮಕರ ದ್ವಾರದ ಮುಂದೆ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ವರಿಷ್ಠೆ ಸೋನಿಯಾ ಗಾಂಧಿ ಕೂಡ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.
ಇದನ್ನೂ ಓದಿ : ಕಬ್ಬನ್ ಪಾರ್ಕ್ ಪುಷ್ಪ ಪ್ರದರ್ಶನದಲ್ಲಿ : ಸಾಹಾಸ್ ಸಂಸ್ಥೆಯಿಂದ ತ್ಯಾಜ್ಯ ವಿಲೇವಾರಿ ಜಾಗೃತಿ ಅಭಿಯಾನ – ರಾಧ ಬಿ ಎಸ್
ರಾಜ್ಯಸಭೆಯಲ್ಲಿ ಆಮ್ ಆದ್ಮಿ ಪಕ್ಷದ ಸಂಸದ ಸಂಜಯ್ ಸಿಂಗ್, ಎಸ್ಐಆರ್ ಮತ್ತು ಸಂಬಂಧಿತ ವಿಷಯಗಳ ಕುರಿತು ಚರ್ಚೆಗೆ ಒತ್ತಾಯಿಸಿ ನೋಟಿಸ್ ಸಲ್ಲಿಸಿದ್ದರು. 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಸುತ್ತಿರುವ ಎಸ್ಐಆರ್ ಕುರಿತು ಇಂಡಿಯಾ ಒಕ್ಕೂಟ ಚರ್ಚೆಗೆ ಒತ್ತಾಯಿಸಿತು. ಇದರಲ್ಲಿ 14, 21 ಮತ್ತು 326 ನೇ ವಿಧಿಗಳ ಮೇಲೆ ಪರಿಣಾಮ ಬೀರುವ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅನಿಯಂತ್ರಿತವಾಗಿ ತೆಗೆದುಹಾಕಲಾಗಿದೆ. ದೇಶಾದ್ಯಂತ ಹಲವಾರು ಬೂತ್ ಮಟ್ಟದ ಅಧಿಕಾರಿಗಳಿ ನಿಧನರಾಗುತ್ತಿದ್ದಾರೆ ಎಂಬ ವಿಷಯವನ್ನು ಸೇರಿಸಿ, ಚರ್ಚಗೆ ಪಟ್ಟು ಹಿಡಿದಿದ್ದರು.
ಮತದಾರರ ಪಟ್ಟಿಯ ಸಾಮೂಹಿಕ ಅನಿಯಂತ್ರಿತ ಅಳಿಸುವಿಕೆಗಳು, ತೀವ್ರ ಕಾರ್ಯವಿಧಾನದ ಉಲ್ಲಂಘನೆಯಾಗಿದೆ. ಮಂಗಳವಾರ ಸಿಂಗ್, ಎಸ್ಐಆರ್ ಕುರಿತು ತುರ್ತು ಚರ್ಚೆಗೆ ಅವಕಾಶ ಕೋರಿ ಇಂದು ಮತ್ತೊಮ್ಮೆ ಪ್ರಸ್ತಾವನೆ ಮಂಡಿಸಿದರು. ಎಸ್ಐಆರ್ ಪ್ರಕ್ರಿಯೆ ರಾಷ್ಟ್ರವ್ಯಾಪಿ ಚುನಾವಣಾ ಸಮಗ್ರತೆಯ ಬಿಕ್ಕಟ್ಟನ್ನು ಹುಟ್ಟುಹಾಕಿದೆ. ಇದು ಮುಕ್ತ ಮತ್ತು ನ್ಯಾಯಯುತ ಚುನಾವಣೆಗಳಿಗೆ ಗಂಭೀರ ಬೆದರಿಕೆ ಒಡ್ಡಿದೆ ಎಂದು ಆರೋಪಿಸಿದರು.
ಅನೇಕ ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರ ಹೆಸರು ಅಳಿಸುವಿಕೆಯು ಹಿಂದಿನ ಗೆಲುವಿನ ಅಂತರವನ್ನು ಮೀರಿದೆ. ವಲಸಿಗರು, ಮಹಿಳೆಯರು, ಅಲ್ಪಸಂಖ್ಯಾತರು ಮತ್ತು ದುರ್ಬಲ ಗುಂಪುಗಳ ಉದ್ದೇಶಿತ ಹಕ್ಕು ನಿರಾಕರಣೆಯ ಬಗ್ಗೆ ಕಳವಳವನ್ನು ಹುಟ್ಟುಹಾಕಿದೆ ಎಂದು ಅವರು ಹೇಳಿದ್ದಾರೆ.
ಅಧಿವೇಶನ ಆರಂಭವಾದ ತಕ್ಷಣ, ವಿರೋಧ ಪಕ್ಷದ ಸದಸ್ಯರು ಎಸ್ಐಆರ್ ಪ್ರಕ್ರಿಯೆ ಕುರಿತು ಚರ್ಚೆಗೆ ಪಟ್ಟು ಹಿಡಿದು ಗದ್ದಲ ಮುಂದುವರೆಸಿದರು. ತಮಿಳುನಾಡಿನ ಕಾಂಗ್ರೆಸ್ ಸಂಸದ ಮಾಣಿಕಂ ಟ್ಯಾಗೋರ್, ಇಂಡಿಯಾ ಒಕ್ಕೂಟ ಎಸ್ಐಆರ್ ಮತ್ತು ಚುನಾವಣಾ ಸುಧಾರಣೆಗಳ ಕುರಿತು ಚರ್ಚೆಗೆ ಒತ್ತು ನೀಡಲು ನಿರ್ಧರಿಸಿದೆ ಎಂದು ಹೇಳಿದ್ದಾರೆ. ಪ್ರಶ್ನೋತ್ತರ ಅವಧಿ ಪ್ರಾರಂಭವಾದಾಗ ಎಸ್ಐಆರ್ ವಿಚಾರವಾಗಿ ಚರ್ಚೆಗೆ ಅವಕಾಶ ನೀಡಬೇಕು ಎಂದು ತಮ್ಮ ಸ್ಥಾನಗಳನ್ನು ಬಿಟ್ಟು ಬಂದು ಒತ್ತಾಯಿಸಿದರು.
ಈ ವೇಳೆ, ವಿರೋಧ ಪಕ್ಷಗಳಿಗೆ ತಿರುಗೇಟು ನೀಡಿದ ಒಡಿಶಾದ ಬಿಜೆಪಿ ಸಂಸದೆ ಅಪರಾಜಿತಾ ಸಾರಂಗಿ, ಪ್ರಧಾನಿ ನಾಟಕ ನಡೆಸದೇ ನೈಜ ವಿಚಾರ ಚರ್ಚಿಸುವಂತೆ ತಿಳಿಸಿದ್ದರೂ ವಿಪಕ್ಷಗಳು ಆಧಾರರಹಿತ ವಿಷಯಗಳನ್ನು ಇಟ್ಟುಕೊಂಡು ಇಂಡಿಯಾ ಒಕ್ಕೂಟ ತನ್ನ ಮೊಂಡಾಟ ಮುಂದುವರೆಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸ್ಪೀಕರ್ ಓಂ ಬಿರ್ಲಾ ಈ ಗದ್ದಲ ನಿಯಂತ್ರಣ ಮಾಡಲು ಸಾಧ್ಯವಾಗದೇ ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಿದರು.
ಅಂಡಮಾನ್ ನಿಕೋಬಾರ್ ದ್ವೀಪ, ಛತ್ತೀಸ್ಗಢ, ಗೋವಾ, ಗುಜರಾತ್, ಕೇರಳ, ಲಕ್ಷದ್ವೀಪ, ಮಧ್ಯಪ್ರದೇಶ, ಪುದುಚೇರಿ, ರಾಜಸ್ಥಾನ್, ತಮಿಳುನಾಡು, ಉತ್ತರ ಪ್ರದೇಶ ಮತ್ತು ಪಶ್ಚಿಮ ಮಂಗಾಳದಲ್ಲಿ ಎರಡನೇ ಹಂತದ ಎಸ್ಐಆರ್ ಪ್ರಕ್ರಿಯೆ ಸಾಗಿದೆ.
ಇದನ್ನೂ ನೋಡಿ : ಅಂಗನವಾಡಿ, ಆಶಾ, ಬಿಸಿಯೂಟ ನೌಕರರ ಹೋರಾಟJanashakthi Media
