ನವದೆಹಲಿ | ಲೋಕಸಭೆಯಲ್ಲಿ ಪ್ರಧಾನಿ ಭಾಷಣ ರದ್ದು ವಿರೋಧ ಪಕ್ಷಗಳ ಪ್ರತಿಭಟನೆ

ನವದೆಹಲಿ: ರಾಷ್ಟ್ರಪತಿಗಳ ಭಾಷಣಕ್ಕೆ ಲೋಕಸಭೆಯಲ್ಲಿ ವಂದನಾ ನಿರ್ಣಯದ ಮೇಲಿನ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣ ರದ್ದುಗೊಳಸಿದ್ದನ್ನು ಖಂಡಿಸಿ ಸಂಸತ್ತಿನಲ್ಲಿ ವಿರೋಧ ಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದವು.

ರಾಜ್ಯಸಭೆಯಲ್ಲೂ ಕಾಂಗ್ರೆಸ್‌ ಮುಖಂಡ ಮಲ್ಲಿಕಾರ್ಜುನ ಖರ್ಗೆ ಸರ್ಕಾರದ ನಡೆಯನ್ನು ಖಂಡಿಸಿದರು. ಈ ವೇಳೆ ಲೋಕಸಭೆಯಲ್ಲಿ ಗದ್ದಲ ಉಂಟಾಗಿದ್ದರಿಂದ ಸದನವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು. ಸದನದಲ್ಲಿ ಉಂಟಾದ ಗದ್ದಲದ ಕಾರಣ ಪ್ರಧಾನಿ ಭಾಷಣವನ್ನು ರದ್ದುಗೊಳಿಸಲಾಗಿದೆ ಎಂದು ಸರ್ಕಾರ ಮಾಧ್ಯಮಗಳಿಗೆ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ : ಬೆಂಗಳೂರು | ಕರ್ನಾಟಕದ ಶಾಲಾ ಶಿಕ್ಷಣಕ್ಕೆ ಬಿಕ್ಕಟ್ಟು: ಶಿಕ್ಷಕರ ಕೊರತೆ–ವಿದ್ಯಾರ್ಥಿಗಳ ಭವಿಷ್ಯ ಅತಂತ್ರ

ಗುರುವಾರ ಲೋಕಸಭೆ ಆರಂಭವಾಗುತ್ತಿದ್ದಂತೇ, ಪ್ರಧಾನಿ ಮೋದಿ ಅವರ ಭಾಷಣ ರದ್ದುಗೊಳಿಸಿದ್ದನ್ನು ಪ್ರಶ್ನಿಸಿದ ಪ್ರತಿಪಕ್ಷ ನಾಯಕರು, ಗದ್ದಲದ ನೆಪ ಹೇಳಿ ಪ್ರಧಾನಿ ಭಾಷಣದಿಂದ ತಪ್ಪಿಸಿಕೊಂಡಿರುವುದು ಸದನದ ಸಂಪ್ರದಾಯಕ್ಕೆ ಮಾಡಿದ ಅವಮಾನ ಎಂದರು.

ಸದನದ ಬಾವಿಗಳಿದು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಪ್ರಧಾನಿ ಮೋದಿ ಭಾಷಣ ರದ್ದುಗೊಂಡಿದ್ದಕ್ಕೆ ವಿರೋಧ ಪಕ್ಷದ ಸದಸ್ಯರು ಪ್ರತಿಭಟನೆ ನಡೆಸಿದ್ದು ಬಳಿಕ ಸ್ಪೀಕರ್‌ ಸದನವನ್ನು ಮಧ್ಯಾಹ್ನಕ್ಕೆ ಮುಂದೂಡಿದರು.

ರಾಜ್ಯಸಭೆ ಕಲಾಪ ಆರಂಭವಾಗುತ್ತಿದ್ದಂತೇ ಮಾತನಾಡಿದ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡುವುದಿಲ್ಲ, ವಿಪಕ್ಷ ನಾಯಕ ಮಾತನಾಡುತ್ತೇನೆ ಎಂದರೆ ಮಾತನಾಡಲು ಬಿಡುವುದಿಲ್ಲ. ಸರ್ಕಾರದ ಈ ನಡೆ ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ಮಾಡಿದ ಅಪಚಾರ ಎಂದು ವಾಗ್ದಾಳಿ ನಡೆಸಿದರು.

ಆದಾಗ್ಯೂ, ಸಂಜೆ 5 ಗಂಟೆಗೆ ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ ಎಂದು ವರದಿಗಳು ಹೇಳಿವೆ.

ಇದನ್ನೂ ನೋಡಿ : “ಮನರೇಗಾ ನಮ್ಮ ಹಕ್ಕು: V B GRAM G ವಿರುದ್ಧ ಜನಪಂಚಾಯತ್‌” | ಉದ್ಯೋಗ ಖಾತರಿ Janashakthi Media

Donate Janashakthi Media

Leave a Reply

Your email address will not be published. Required fields are marked *