ನೀತಿಸಂಹಿತೆ ಉಲ್ಲಂಘಿಸಿ ಕಾರ್ಯಕ್ರಮ ಆಯೋಜನೆ : ಶಶಿಕಲಾ ಜೊಲ್ಲೆ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು : ಮೇ 10 ರಂದು ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ, ಈ ಹಿನ್ನೆಲೆ ಚುನಾವಣಾ ನೀತಿಸಂಹಿತೆಯೂ ಕೂಡ ಜಾರಿಯಾಗಿದೆ. ಆದರೆ ಸಚಿವೆ ಶಶಿಕಲಾ ಜೊಲ್ಲೆ ಅವರು ಚುನಾವಣಾ ನೀತಿಸಂಹಿತೆ ಉಲ್ಲಂಘಿಸಿದ ಆರೋಪದ ಹಿನ್ನಲೆಯಲ್ಲಿ ಅವರ ಮೇಲೆ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ.

ತಮ್ಮ ಸ್ವಕ್ಷೇತ್ರ ಬೆಳಗಾವಿ ಜಿಲ್ಲೆ ನಿಪ್ಪಾಣಿಯಲ್ಲಿ ಚುನಾವಣಾ ದಿನಾಂಕ ಘೋಷಣೆಯಾದ ನಂತರ ನೀತಿಸಂಹಿತೆ ಉಲ್ಲಂಘಿಸಿ ಕಾರ್ಯಕ್ರಮವನ್ನು ಆಯೋಜಿಸಿದ್ದರು ಎಂಬ ಆರೋಪ ಕೇಳಿಬಂದಿತ್ತು.ಈ ಹಿನ್ನಲೆಯಲ್ಲಿ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪೊಲೀಸ್ ಠಾಣೆಯಲ್ಲಿ ಶಶಿಕಲಾ ಜೊಲ್ಲೆ ವಿರುದ್ಧ ಎಫ್‍ಐಆರ್ ದಾಖಲಾಗಿದ್ದು, ಕಾನೂನು ಸಂಕಷ್ಟ ಎದುರಾಗಿದೆ.

ಮೂರು ದಿನಗಳ ಹಿಂದೆ ಅರಿಶಿಣ ಕುಂಕುಮ ಕಾರ್ಯಕ್ರಮಕ್ಕೆ ಅನುಮತಿ ಪಡೆದು, ಕಾರ್ಯಕ್ರಮದಲ್ಲಿ ಜನರಿಗೆ ಊಟದ ವ್ಯವಸ್ಥೆ ಮಾಡಿರುವುದು, ಪತಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಅವರ ಹೆಸರಲ್ಲಿ ಹಾಡು ರಚಿಸಿ, ಅದರಲ್ಲಿ ಬಿಜೆಪಿ ಚಿಹ್ನೆ ಬಳಸಿರುವ ಹಿನ್ನೆಲೆಯಲ್ಲಿ ನಿಪ್ಪಾಣಿಯ ರಣರಾಗಿಣಿ ಮಹಿಳಾ ಮಂಡಳ ಅಧ್ಯಕ್ಷೆ, ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ನಿಪ್ಪಾಣಿ ಶಹರ ಪೊಲೀಸ್ ಠಾಣೆಯಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ : ಸಚಿವೆ ಶಶಿಕಲಾ ಜೊಲ್ಲೆ ಮೇಲಿನ ಭ್ರಷ್ಠಾಚಾರ: ಸ್ವತಂತ್ರ ನ್ಯಾಯಾಂಗ ತನಿಖೆಗೆ ಸಿಪಿಐ(ಎಂ) ಆಗ್ರಹ

ಕಾರ್ಯಕ್ರಮದಲ್ಲಿ ಪಾಲ್ಗೊಂಡ ಜನರಿಗೆ ಊಟದ ವ್ಯವಸ್ಥೆಯನ್ನೂ ಮಾಡಿದ್ದರು. ಜತೆಗೆ ಕಾರ್ಯಕ್ರಮದಲ್ಲಿ ಚಿಕ್ಕೋಡಿ ಸಂಸದ ಅಣ್ಣಸಾಹೇಬ ಜೊಲ್ಲೆ ಅವರ ಹಾಡು ಹಾಗೂ ಬಿಜೆಪಿ ಚಿಹ್ನೆಗಳನ್ನೂ ಪ್ರದರ್ಶಿಸಿದ್ದಾರೆ. ಈ ಕುರಿತು ನಿಪ್ಪಾಣಿ ಪುರಸಭೆ ಪೌರಾಯುಕ್ತ ಜಗದೀಶ ಬಾಬು ಹುಲಗೆಜ್ಜಿ ಅವರು ನಿಪ್ಪಾಣಿ ಶಹರ ಠಾಣೆಗೆ ದೂರು ಸಲ್ಲಿಸಿದ್ದರು.

Donate Janashakthi Media

Leave a Reply

Your email address will not be published. Required fields are marked *