ಧಾರವಾಡ: ನಗರದ ಕರ್ನಾಟಕ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಪ್ರತಿಭಟನೆಗೆ ಸೌಹಾರ್ದ ಬೆಂಬಲವಾಗಿ ಸ್ನಾತಕ ಮತ್ತು ಸ್ನಾತಕೋತ್ತರ ಪದವಿಗಳ ಅಂತಿಮ ಸೆಮಿಸ್ಟರ್‌ಗಳ ಪರೀಕ್ಷೆಗೆ ಮಾತ್ರ ಯುಜಿಸಿ ಆದೇಶದಂತೆ ನಿಯಮಗಳನ್ನು ಪಾಲಿಸಬೇಕೆಂದು ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ನಿಯೋಗವು ವಿವಿ ಕುಲಪತಿ ಪ್ರೊ.ಕೆ.ಬಿ.ಗುಡಸಿ ಅವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಎಸ್ಎಫ್ಐ ರಾಜ್ಯ ಸಮಿತಿ ಸದಸ್ಯರಾದ ಗಣೇಶ ರಾಠೋಡ ಮಾತಾನಾಡಿ ʻʻವಿಶ್ವವಿದ್ಯಾಲಯಗಳು ಮತ್ತು ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ 2020-2021ನೇ ಸಾಲಿನ ಸ್ನಾತಕ ಮತ್ತು ಸ್ನಾತಕೋತ್ತರ ಪದವಿಗಳ ‘ವರ್ಷಾಂತ್ಯದ ಸೆಮಿಸ್ಟರ್ ಅಥವಾ ಅಂತಿಮ ಸೆಮಿಸ್ಟರ್’ಗೆ ಮಾತ್ರ ‘ಆಫ್‌ಲೈನ್ ಅಥವಾ ಆನ್‌ಲೈನ್ ಪರೀಕ್ಷೆ ನಡೆಸುವಂತೆ ವಿಶ್ವವಿದ್ಯಾಲಯದ ಧನಸಹಾಯ ಆಯೋಗ (ಯುಜಿಸಿ) ಆದೇಶಿಸಿದೆ. ಕೋವಿಡ್-19ನಿಂದಾಗಿ ಮುಂದೂಡಲ್ಪಟ್ಟಿದ್ದ ಸೆಮಿಸ್ಟರ್ ಪರೀಕ್ಷೆಗಳನ್ನು ನಡೆಸುವಂತಿಲ್ಲ. ಬದಲಿಗೆ, ಹಿಂದಿನ ಸೆಮಿಸ್ಟರ್ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಪಡೆದ ಅಂಕಗಳ ಆಧಾರದಲ್ಲಿ ಆಥವಾ ಆಂತರಿಕ ಮೌಲ್ಯಮಾಪನದ ಮೂಲಕ ಫಲಿತಾಂಶ ಪ್ರಕಟಿಸುವಂತೆ ಸೂಚಿಸಿದೆ ಎಂದರು.
ಇದನ್ನು ಓದಿ: ಕರ್ನಾಟಕ ವಿಶ್ವವಿದ್ಯಾಲಯ ಯುಜಿಸಿ ನಿಯಮ ಪಾಲಿಸಲು ಎಸ್‌ಎಫ್‌ಐ ಆಗ್ರಹ
ಎಸ್ಎಫ್ಐ ರಾಜ್ಯ ಸಮಿತಿ ಸದಸ್ಯರಾದ ಬಸವರಾಜ ಭೋವಿ ಮಾತಾನಾಡಿ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ 2021-2022ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳು ಸೆಪ್ಟಂಬರ್ 24ರಿಂದ ಆರಂಭಗೊಳ್ಳಲಿದ್ದು, ಅಕ್ಟೋಬರ್ 1ರಿಂದ ಸ್ನಾತಕ ಮತ್ತು ಸ್ನಾತಕೋತ್ತರ ಪದವಿಗಳ ತರಗತಿಗಳು ಶುರುವಾಗಲಿವೆ. ಈ ಬಾರಿ ತರಗತಿಗಳನ್ನು ಆಫ್‌ಲೈನ್, ಆನ್‌ಲೈನ್ ಅಥವಾ ಎರಡೂ ಮಾದರಿಯಲ್ಲಿ ನಡೆಸಬೇಕೆಂದು ಆಗ್ರಹಿಸಿದರು.
ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಗಳ ವಿಷಯದಲ್ಲಿ ಕರ್ನಾಟಕ ವಿಶ್ವವಿದ್ಯಾಲಯವು ತನ್ನ ಹಠಮಾರಿ ಧೋರಣೆ ಬಿಟ್ಟು ಯುಜಿಸಿ ಯ ಆದೇಶದಂತೆ ನಡೆದುಕೊಳ್ಳಬೇಕೆಂದು ಎಸ್ಎಫ್ಐ ಸಂಘಟನೆ ಒತ್ತಾಯಿಸಿದೆ. ಈ ಸಂದರ್ಭದಲ್ಲಿ ಕುಲಪತಿಗಳು ಮನವಿ ಸ್ವೀಕರಿಸಿ ಯುಜಿಸಿ ಆದೇಶವನ್ನು ಪಾಲಿಸಲಾಗುವುದು ಎಂದು ಭರವಸೆ ನೀಡಿದರು.
ನಿಯೋಗದಲ್ಲಿ ಪರಶುರಾಮ ಮಳ್ಳಿ, ನಾಗರಾಜ್ ಸಿ.ಐ, ಲಕ್ಷ್ಮಣ ಎಂ, ಅಬ್ದುಲ್, ಸುನೀಲ್, ಸೇರಿದಂತೆ ಮತ್ತಿತರರು ಭಾಗವಹಿಸಿದರು.
Namage eradu sem matte odakondu bariyoke time sakagalla…tumba pressure aagatte bariyo exam nu sariyagi bariyoke aagalla…
Let them make us promoted to next semester.
I want to get promote to 3rd sem
Please promote