ಬೆಂಗಳೂರು: “ಸಿದ್ದರಾಮಯ್ಯ ನೇತೃತ್ವದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದ ಕನ್ನಡದ ವಿಚಾರದಲ್ಲಿ ರಾಜಿಯಾಗದೆ ಕೆಲಸ ಮಾಡುತ್ತಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
ವಿಧಾನಸೌಧ ಆವರಣದಲ್ಲಿ ನಡೆದ ನಾಡದೇವಿ ಭುವನೇಶ್ವರಿ ಕಂಚಿನ ಪ್ರತಿಮೆ ಸ್ಥಾಪನೆ ಭೂಮಿಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು “ವಿಧಾನಸೌಧದ ಆವರಣದಲ್ಲಿ ಅಂಬೇಡ್ಕರ್ ಅವರ, ಬಸವಣ್ಣನವರ, ಕೆಂಪೇಗೌಡರು ಸೇರಿದಂತೆ ಅನೇಕ ನಾಯಕರ ಪ್ರತಿಮೆಗಳಿವೆ. ಈ ಶಕ್ತಿ ಕೇಂದ್ರದಲ್ಲಿ ನಾಡ ದೇವಿ ಭುವನೇಶ್ವರಿ ತಾಯಿ ಪ್ರತಿಮೆ ಇರಬೇಕು. ಇಲ್ಲಿಗೆ ಭೇಟಿ ನೀಡುವವರು ದೇವಿಯ ಆಶೀರ್ವಾದ ಪಡೆದುಕೊಳ್ಳಬೇಕು ಎಂಬುದು ನಮ್ಮ ಆಶಯ. ಕರ್ನಾಟಕ ಎಂದು ನಾಮಕರಣ ಮಾಡಿ 50 ವರ್ಷಗಳಾಗಿದ್ದು ಈ ನೆನಪಿಗಾಗಿ 25 ಅಡಿಯ ಕಂಚಿನ ಪ್ರತಿಮೆ ಸ್ಥಾಪಿಸಲಾಗುತ್ತಿದೆ” ಎಂದರು. ಕನ್ನಡದ
ಇದನ್ನೂ ಓದಿ: ಅಕಾಡೆಮಿ, ಪ್ರಾಧಿಕಾರಗಳ ಸ್ವಾಯತ್ತತೆಗೆ ಭಂಗ – ಜಾಗೃತ ನಾಗರಿಕರು ಕರ್ನಾಟಕ ಕಳವಳ
“ಬೆಂಗಳೂರಿನಲ್ಲಿ ಕನ್ನಡ ನಾಮಫಲಕ ಕಡ್ಡಾಯ ಮಾಡಿ ಮೊದಲಬಾರಿಗೆ ಕಾನೂನು ಮಾಡಲಾಯಿತು. ಇದಕ್ಕೆ ಅನೇಕ ಕನ್ನಡ ಸಂಘಟನೆಗಳು ಹೋರಾಟ ಮಾಡಿವೆ. ಒಂದಷ್ಟು ಬಾರಿ ಕಾನೂನು ಕೈಗೆ ತೆಗೆದುಕೊಂಡಾಗ ರಾಜಿಯಾಗದೆ ಕೆಲಸ ಮಾಡಿದ್ದೇವೆ. ಜೊತೆಗೆ ಕನ್ನಡ ಉಳಿಸುವ ಕೆಲಸವನ್ನು ಮಾಡಿದ್ದೇವೆ” ಎಂದು ಹೇಳಿದರು.
“ನಾವು ಯಾರು ಶಾಶ್ವತವಲ್ಲ ಆದರೆ ನಾವು ಮಾಡುವ ಕೆಲಸಗಳು ಶಾಶ್ವತವಾಗಿ ಉಳಿಯುತ್ತವೆ. ಉತ್ತಮವಾದ ಆಲೋಚನೆ ಮಾಡಿರುವ ಕನ್ನಡ ಸಂಸ್ಕೃತಿ ಇಲಾಖೆಗೆ ಅಭಿನಂದನೆಗಳು. ಕನ್ನಡ ಬೆಳೆಯಲಿ, ಉಳಿಯಲಿ” ಎಂದು ಆಶಿಸಿದರು.
ವಿಧಾನಸೌಧದ ಬಳಿ ಮಾಧ್ಯಮಗಳಿಗೆ ಮಾತನಾಡಿದ ಅವರು, “ನೀಟ್ ಪರೀಕ್ಷೆಯಲ್ಲಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅಕ್ರಮ ನಡೆದಿದೆ ಎಂದು ಒಪ್ಪಿಕೊಂಡಿದ್ದಾರೆ. ಈ ವಿಚಾರವಾಗಿ ಸುಪ್ರೀಂ ಕೋರ್ಟ ಎನ್ ಟಿಎ (ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ) ಗೆ ನೋಟಿಸ್ ನೀಡಿರುವುದು ಉತ್ತಮ ನಡೆ. ನಮ್ಮ ದೇಶದ ಮಕ್ಕಳ ಭವಿಷ್ಯ ಮುಖ್ಯವಾದುದು” ಎಂದು ಹೇಳಿದರು.
ಇದನ್ನೂ ನೋಡಿ: ‘ಗಾಂಧೀಜಿಯ ಹ೦ತಕ’ – ಪುಸ್ತಕದಲ್ಲಿ ಏನಿದೆ? – ವೀರಶೆಟ್ಟಿ ಬಿ. ಗಾರಂಪಳ್ಳಿಯವರ ವಿಶ್ಲೇಷಣೆJanashakthi Media