ನವದೆಹಲಿ: ಇಂದಿನಿಂದ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಕರ್ನಾಟಕ, ಆಂಧ್ರಪ್ರದೇಶ ಸೇರಿದಂತೆ ದೇಶದ 10 ಕ್ಕೂ ಹೆಚ್ಚು ರಾಜ್ಯಗಳಲ್ಲಿ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸೈಕ್ಲೋನಿಕ್ ಪರಿಚಲನೆಯು ನೈಋತ್ಯ ಅರೇಬಿಯನ್ ಸಮುದ್ರದ ಮೇಲೂ ಇರುತ್ತದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಅಕ್ಟೋಬರ್ 29 ರಿಂದ ನವೆಂಬರ್ 3 ರವರೆಗೆ ದೇಶದಾದ್ಯಂತ ಹವಾಮಾನದ ಬಗ್ಗೆ ನವೀಕರಣವನ್ನು ನೀಡಿದೆ.
ಉತ್ತರ ಭಾರತದಲ್ಲಿ ಶೀತಗಾಳಿ ಹೆಚ್ಚಾಗುವ ನಿರೀಕ್ಷೆಯಿದ್ದು, ದಕ್ಷಿಣ ಭಾರತ ಮತ್ತು ಮಧ್ಯ ಭಾರತದ ಕೆಲವು ರಾಜ್ಯಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಎಚ್ಚರಿಕೆಯೂ ಇದೆ. ನವೆಂಬರ್ 3ರವರೆಗೆ ಉತ್ತರ ಭಾರತದಲ್ಲಿ ಶುಭ್ರವಾದ ವಾತಾವರಣವಿದ್ದರೂ ಚಳಿ ಹೆಚ್ಚಾಗತೊಡಗುತ್ತದೆ.
ಇದನ್ನೂ ಓದಿ: ದೀಪಾವಳಿಗೂ ಮುನ್ನವೇ ಗ್ಯಾಸ್ ಚೇಂಬರಾಗುವ ಭೀತಿಯಲ್ಲಿ ದೆಹಲಿ
ಈ ರಾಜ್ಯಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗಲಿವೆ
ಹವಾಮಾನ ಇಲಾಖೆಯ ಪುಕಾರ, ಸಕ್ರಿಯ ಚಂಡಮಾರುತದ ಪರಿಚಲನೆಯಿಂದಾಗಿ, ಒಡಿಶಾ, ಕರಾವಳಿ ಆಂಧ್ರಪ್ರದೇಶ, ಛತ್ತೀಸ್‌ಗಢ, ಮಧ್ಯಪ್ರದೇಶ, ಮಹಾರಾಷ್ಟ್ರ, ಜಾರ್ಖಂಡ್, ಕರಾವಳಿ ಕರ್ನಾಟಕದ ಕೆಲವು ಭಾಗಗಳು, ಕೇರಳ, ತಮಿಳುನಾಡು, ಅಂಡಮಾನ್ ನಿಕೋಬಾರ್ ದ್ವೀಪಗಳು, ಪಶ್ಚಿಮ ಬಂಗಾಳ, ಬಿಹಾರ, ಜಾರ್ಖಂಡ್, ಪೂರ್ವ ಮಧ್ಯ ಪ್ರದೇಶ, ಪೂರ್ವ ಉತ್ತರ ಪುದೇಶ, ದಕ್ಷಿಣ ಕೊಂಕಣ, ಗೋವಾ, ಲಕ್ಷದ್ವೀಪ, ಲೇಹ್ ಲಡಾಖ್ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು.
ಇದನ್ನೂ ನೋಡಿ: ಪಿಚ್ಚರ್ ಪಯಣ – 152ಸಿನೆಮಾ : ಜಗ್ಗಿ ಭಾಷೆ : ಪಂಜಾಬಿನಿರ್ದೇಶನ : ಅನ್ಮೊಲ್ ಸಿದ್ದುವಿಶ್ಲೇಷಣೆ : ಮ.ಶ್ರೀ.ಮುರಳಿ ಕೃಷ್ಣ