ವಿಜಯಪುರ: ನಗರದಲ್ಲಿನ ಗಾಂಧಿನಗರದ ಸ್ಟಾರ್ ಚೌಕ್ ಬಳಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ನಡೆದಿದ್ದೂ, ಸದಾಶಿವ ಮಾದರ, ಸದಾಶಿವ ಬಬಲಾದಿ, ಉಮೇಶ್ ಎಂಬ ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಖೇಮು ರಾಠೋಡ್ ಎಂಬಾತ ಹಲ್ಲೆ ಮಾಡಿದ್ದಾನೆ.
ಕೆಲಸಕ್ಕೆ ಮುಂಚಿತವಾಗಿಯೇ ಹಣ ಪಡೆದು, ಕೆಲಸಕ್ಕೆ ಬರಲು ಲೇಟ್ ಮಾಡಿದ್ದಕ್ಕೆ ಖೇಮು ರಾಠೋಡ್ ಪೈಪ್‌ಗಳಿಂದ ಕಾರ್ಮಿಕರ ಮೇಲೆ ಹಲ್ಲೆ ಮಾಡಿದ್ದಾನೆ.
ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಚಿಕ್ಕಲಿಕಿ ಗ್ರಾಮಕ್ಕೆ ಸೇರಿದವರಾಗಿದ್ದಾರೆ ಈ ಮೂವರು ಕಾರ್ಮಿಕರು. 3 ಜನ ಕಾರ್ಮಿಕರು ಹಬ್ಬಕ್ಕೆಂದು ಊರಿಗೆ ಹೋಗಿದ್ದರು, ಅಲ್ಲಿಂದ ವಾಪಸ್ ಬರಲು ಸ್ವಲ್ಪ ಲೇಟ್ ಆಗಿದೆ.
ಇದನ್ನೂ ಓದಿ: ಬೆಳಗಾವಿ| ಕಾಂಗ್ರೆಸ್ ಸಮಾವೇಶದಲ್ಲಿ ಬಿಜೆಪಿ ಶಾಸಕ!
ಹೀಗಾಗಿ ಕೆಲಸಕ್ಕೆ ಹಾಜರಾಗಲು ತಡವಾಗಿದೆ. ಇದರಿಂದ ರೊಚ್ಚಿಗೆದ್ದ ಇಟ್ಟಿಗೆ ಬಟ್ಟಿ ಮಾಲೀಕ ಹಲ್ಲೆ ಮಾಡಿದ್ದಾನೆ. ನೊಂದ ಕಾರ್ಮಿಕರು ಎಷ್ಟೇ ಅಂಗಲಾಚಿ ಬೇಡಿಕೊಂಡರೂ ಸಹ ಕರುಣೆ ತೋರದೇ ಹಲ್ಲೆ ಮಾಡಿದ್ದಾನೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಹೃದಯ ವಿದ್ರಾವಕ ಘಟನೆ ನಡೆದಿದೆ.
ಇಟ್ಟಿಗೆ ಕಾರ್ಖಾನೆಯಲ್ಲಿ ಮೂವರು ಕಾರ್ಮಿಕರ ಮೇಲೆ ನಡೆದ ಭೀಕರ ಹಲ್ಲೆಯಲ್ಲಿ ಇಟ್ಟಿಗೆ ಕಾರ್ಖಾನೆ ಮಾಲೀಕ ಸೇರಿ ಮೂವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹಣ ಪಡೆದು ಕೆಲಸಕ್ಕೆ ಬರಲು ತಡ ಮಾಡಿದ್ದಕ್ಕೆ ಹಲ್ಲೆ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಇನ್ನು ಪರಾರಿಯಾಗಿರುವ ಇಬ್ಬರಿಗಾಗಿ ವಿಜಯಪುರ ಗ್ರಾಮಾಂತರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಈ ಒಂದು ಕೇಸ್ ಬಗ್ಗೆ ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಹಲ್ಲೆ ಮಾಡಿದವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ. ಯಾರೇ ತಪ್ಪು ಮಾಡಿದರೂ ಅವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಹೇಳಿದ್ದಾರೆ.
ಕಾರ್ಮಿಕ ಸಚಿವ ಸಂತೋಷ್ ಲಾಡ್ ಈ ಘಟನೆ ಬಗ್ಗೆ ಮಾತನಾಡಿದ್ದು, ಎಲ್ಲರೂ ತಲೆತಗ್ಗಿಸುವಂತ ಅಮಾನವೀಯ ಘಟನೆ ಇದು. ಲೇಬರ್, ಪೊಲೀಸ್ ಕೇಸ್ ಎಲ್ಲಾ ಸೆಕೆಂಡರಿ. ಈ ತರ ಮನಸ್ಥಿತಿ ಇರುವಂತದ್ದು ನಮ್ಮ ರಾಜ್ಯದಲ್ಲಿ ನಡೆದಿದೆ ಅಂದರೆ ನನಗೆ ವೈಯಕ್ತಿಕವಾಗಿ ತಲೆತಗ್ಗಿಸುವಂತದ್ದು. ಕಾರ್ಮಿಕರನ್ನ ಹಿಗ್ಗಾ ಮುಗ್ಗಾ ಹೊಡೆದಿರುವುದನ್ನ ನಾನು ಮಾಧ್ಯಮಗಳ ಮುಖಾಂತರ ನೋಡಿದ್ದೇನೆ. ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಮಾತನಾಡಿದ್ದಾರೆ.
ಇದನ್ನೂ ನೋಡಿ: ಕಲಬುರಗಿ | ಬಹುತ್ವ ಭಾರತ ಉಳಿಸುವುದು ಅಗತ್ಯ : ದಾಕ್ಷಾಯಿಣಿ ಶರಣಬಸಪ್ಪ ಅಪ್ಪ Janashakthi Media