ಚಿಕ್ಕಬಳ್ಳಾಪುರ: ಕೊವಿಡ್ ಆಸ್ಪತ್ರೆಗೆ ಅಳವಡಿಸಿದ್ದ ಜಂಬೋ ಆಕ್ಸಿಜನ್ ಸಿಲಿಂಡರ್‌ಗಳನ್ನು ಕಳ್ಳತನ ಮಾಡಿರುವ ಘಟನೆ ಚಿಕ್ಕಬಳ್ಳಾಪುರದ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಅವರ ತವರು ಕ್ಷೇತ್ರದಲ್ಲಿ ಕಳ್ಳತನವಾಗಿದ್ದು, ಖಾಸಗಿ ಆಸ್ಪತ್ರೆಗಳ ಮೇಲೆ ಅನುಮಾನ ವ್ಯಕ್ತಪಡಿಸಲಾಗಿದೆ. ಈ ಸಂಬಂಧ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಜಿಲ್ಲಾ ಸರ್ಜನ್ ಡಾ.ಪಿ.ವಿ.ರಮೇಶ ಸಿಲೆಂಡರ್ಗಳನ್ನು ಹುಡುಕಿಕೊಡುವಂತೆ ನಗರದ ಠಾಣೆಗೆ ದೂರು ನೀಡಿದ್ದಾರೆ.
ಇದನ್ನು ಓದಿ: “ನೀವು ಉಳೀತಿರೋ ಇಲ್ವೋ ಗೊತ್ತಿಲ್ಲ, ನಾನಂತೂ ಉಳಿಯಬೇಕು” ಸಚಿವ ಉಮೇಶ್ ಕತ್ತಿ ವಿವಾದಾತ್ಮಕ ಹೇಳಿಕೆ
ಕೊರೊನಾ ಎರಡನೇ ಅಲೆ ದೇಶದಾದ್ಯಂತ ಹಬ್ಬಿದ್ದು, ಸೋಂಕಿತರ ಸಂಖ್ಯೆ ಹೆಚ್ಚಳವಾಗಿದೆ. ಇದರ ಜೊತೆಗೆ ಸಾವಿನ ಸಂಖ್ಯೆಯಲ್ಲಿ ಕೂಡ ಏರಿಕೆ ಕಂಡುಬಂದಿದೆ. ಹೀಗಿರುವಾಗಲೇ ಆಕ್ಸಿಜನ್ ಕೊರತೆ ಕಂಡುಬಂದಿದ್ದು, ಎಲ್ಲೇಡೆ ಹಾಹಾಕಾರ ಸೃಷ್ಟಿಯಾಗಿದೆ. ಸರಿಯಾದ ಸಮಯದಲ್ಲಿ ಸರಿಯಾದ ಪ್ರಮಾಣದಲ್ಲಿ ಆಕ್ಸಿಜನ್ ಸಿಲಿಂಡರ್ಗಳು ಸಿಗದೆ ಸೋಂಕಿತರು ಉಸಿರುಗಟ್ಟಿ ಒದ್ದಾಡಿ ಕೊನೆಯುಸಿರೆಳೆಯುತ್ತಿರುವ ಘಟನೆ ನಡೆದಿದೆ.
ಇದನ್ನು ಓದಿ: ಮಠ ಮಾನ್ಯಗಳಿಗೆ ನೀಡಿದ ದೇಣಿಗೆಯನ್ನು ವಾಪಸ್ ಪಡೆಯಿರಿ: ಹೆಚ್.ವಿಶ್ವನಾಥ್
ಆಕ್ಸಿಜನ್ ಸಿಲಿಂಡರ್‌ಗಳನ್ನು ಇರಿಸಲಾಗಿದ್ದ ಕೋಣೆಯ ಕೀಗಳು ಡಾ.ವಿಜಯಲಕ್ಷ್ಮೀ, ಡಿ ದರ್ಜೆ ನೌಕರ ಮುನಿರಾಜು ಅವರ ಬಳಿ ಮಾತ್ರ ಇವೆ. ಅಲ್ಲದೆ ಈ ಕಳ್ಳತನದ ಹಿಂದೆ ಆಸ್ಪತ್ರೆ ಸಿಬ್ಬಂದಿಯ ಕೈವಾಡ ಇರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಕೊರೊನಾ ಸೋಂಕಿತರಿಗೆ ಆಕ್ಸಿಜನ್ ಬೇಡಿಕೆ ಹೆಚ್ಚಾದ ಕಾರಣಕ್ಕೆ ಆಸ್ಪತ್ರೆಯ ಸಿಬ್ಬಂದಿಗಳೇ ಶಾಮಿಲಾಗಿ ಕಳ್ಳತನ ಮಾಡಿರುವ ಶಂಕೆ ಸದ್ಯ ವ್ಯಕ್ತವಾಗಿದ್ದು, ಚಿಕ್ಕಬಳ್ಳಾಪುರ ನಗರ ಠಾಣೆ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.