ರಾಜ್ಯದ ಕಾನೂನು- ಸುವ್ಯವಸ್ಥೆ ಸಮರ್ಪಕ ನಿರ್ವಹಣೆಗೆ ಪಿ.ರಾಜೀವ್ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಹೋಗಿದೆ. ಅಮಾಯಕರ ಕೊಲೆಗಳು ನಡೆಯುತ್ತಿವೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ಆಕ್ಷೇಪ ವ್ಯಕ್ತಪಡಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಈಗಿನ ಸರಕಾರದಲ್ಲಿ ನಾವು ಏನು ಮಾಡಿದರೂ ದಕ್ಕಿಸಿಕೊಳ್ಳಬಹುದು, ನಮ್ಮ ಪ್ರಭಾವದಿಂದ ನಾವು ಬಚಾವ್ ಆಗಬಹುದು ಎಂಬ ಭಾವನೆಯಿಂದ ಕ್ಷುಲ್ಲಕ ಕಾರಣಕ್ಕೆ ಕೊಲೆಗಳು ನಡೆಯುತ್ತಿವೆ ಎಂದು ಆರೋಪಿಸಿದರು. ಸರಕಾರವು ಕಾನೂನು- ಸುವ್ಯವಸ್ಥೆಯನ್ನು ಸರಿಯಾಗಿ ನಿರ್ವಹಿಸಬೇಕು ಎಂದು ಆಗ್ರಹಿಸಿದರು.

ಕಾನೂನು ಎಲ್ಲರಿಗೂ ಸಮಾನ. ಎಲ್ಲರನ್ನೂ ಸಮಾನ ದೃಷ್ಟಿಯಿಂದ ನೋಡುವುದೇ ಕಾನೂನು. ನಮ್ಮ ಸಂವಿಧಾನದಂತೆ ಕಾನೂನಿನಡಿ ಎಲ್ಲರೂ ಸಮಾನರು. ಆದರೆ, ವಿಐಪಿಯನ್ನು ಕರೆದುಕೊಂಡು ಬಂದ ತಕ್ಷಣ ಶಾಮಿಯಾನ ಹಾಕಿ, ಮಾಧ್ಯಮದವರ ಮೇಲೆ ಹಲ್ಲೆ ಮಾಡಿ, ಮಾಧ್ಯಮದವರನ್ನು ಪೊಲೀಸ್ ಠಾಣೆ ಆವರಣಕ್ಕೆ ಬಿಡಲಾರದಂತೆ ವರ್ತಿಸುತ್ತಿದ್ದು, ಇದು ಸರಕಾರ ಯಾವ ರೀತಿ ಆಡಳಿತ ನಡೆಸುತ್ತಿದೆ ಎಂಬುದಕ್ಕೆ ಸಾಕ್ಷಿ ಎಂದು ವಿವರಿಸಿದರು.

ಪ್ರತಿಯೊಬ್ಬರ ಮಾನ- ಪ್ರಾಣಕ್ಕೆ ಬಹಳ ದೊಡ್ಡ ಘನತೆ ಇದೆ. ಅಮಾಯಕರ ಪ್ರಾಣಹಾನಿಗೆ ಕಾರಣ ಆದವರ ವಿರುದ್ಧ ಕಾನೂನಿನಡಿ ನಿಷ್ಪಕ್ಷಪಾತವಾಗಿ ತನಿಖೆ ಮಾಡಬೇಕು. ಇನ್ನು ಮುಂದೆ ಅಮಾಯಕರ ಪ್ರಾಣಹಾನಿ ಆಗದಂತೆ ಗೃಹ ಸಚಿವರು ಮತ್ತು ಪೊಲೀಸ್ ಇಲಾಖೆ ತನ್ನ ಕರ್ತವ್ಯ ನಿರ್ವಹಿಸಲಿ ಎಂದು ಒತ್ತಾಯಿಸಿದರು.

ಇದನ್ನು ಓದಿ : ಕಲುಷಿತ ನೀರು ಸೇವನೆ : ಚಿಕ್ಕಬಳ್ಳಾಪುರದಲ್ಲಿ ನಾಲ್ವರು, ತುಮಕೂರಿನಲ್ಲಿ ಮೂವರ ಸಾವು

ವೈಯಕ್ತಿಕ ಹಿತಾಸಕ್ತಿ, ಓಲೈಕೆಗೆ ಸೆಕ್ಷನ್ ಬಳಕೆ..

ಪೊಲೀಸ್ ಠಾಣೆಗೆ 144 ಸೆಕ್ಷನ್ ಹಾಕುವುದು ಎಂದರೆ ಪೊಲೀಸ್ ಸ್ಟೇóóಶನನ್ನು ರಕ್ಷಿಸಲು ಇನ್ನೊಬ್ಬ ಖಾಸಗಿಯವರಿಗೆ ಕೊಟ್ಟಂತೆ. ಅಂದರೆ, ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಹೋಗಿದೆ ಎಂಬುದಕ್ಕೆ ನಿದರ್ಶನವಿದು ಎಂದು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದರು. ಮಾಧ್ಯಮದವರನ್ನು ದೂರ ಇಡುವ ಉದ್ದೇಶ, ಇನ್ನೊಬ್ಬರನ್ನು ದೂರವಿಡಲು ಮತ್ತು ಠಾಣೆಯಲ್ಲಿ ತಮ್ಮ ವೈಯಕ್ತಿಕ ಹಿತಾಸಕ್ತಿಯ ಚಟುವಟಿಕೆ ಮಾಡುವುದಕ್ಕಾಗಿ ಅಥವಾ ಯಾರನ್ನೋ ಓಲೈಕೆಗೆ 144ನೇ ಸೆಕ್ಷನ್ ಬಳಸಿಕೊಳ್ಳುತ್ತಿದ್ದಾರೆ ಎಂದು ಟೀಕಿಸಿದರು.

ಕೊಲೆ ಮಾಡಿದವನು, ಕೊಲೆಗೆ ಸಂಚು ಮಾಡಿದವನು, ಕೊಲೆಗೆ ದುಷ್ಪ್ರೇರಣೆ ನೀಡಿದವನು, ಕೊಲೆ ಪ್ರಕರಣದ ಸಾಕ್ಷಿ ನಾಶ ಮಾಡುವವನು, ಕೊಲೆಯ ಸಾಕ್ಷ್ಯದ ದಿಕ್ಕು ತಪ್ಪಿಸುವವನು- ಈ ಎಲ್ಲ ಚಟುವಟಿಕೆಗಳು ಕೊಲೆಯ ಒಳಸಂಚಿನ ಭಾಗವೇ ಆಗುತ್ತದೆ. ಅದು ಒಬ್ಬ ಕೊಲೆಗಾರನ ಹೊಣೆಗಾರಿಕೆಯಷ್ಟೇ ಪ್ರಮುಖ ಎಂದು ಅವರು ಪ್ರಶ್ನೆಗೆ ಉತ್ತರ ನೀಡಿದರು.

ಜನರಿಗೆ ತನಿಖಾ ಸಂಸ್ಥೆ, ಪೊಲೀಸ್ ಇಲಾಖೆ ಬಗ್ಗೆ ವಿಶ್ವಾಸ ಕಡಿಮೆ ಆಗಬಾರದು. ಇದು ಪೊಲೀಸ್ ಇಲಾಖೆಯ ಗುರುತರವಾದ ಜವಾಬ್ದಾರಿ ಎಂದು ಅವರು ಇನ್ನೊಂದು ಪ್ರಶ್ನೆಗೆ ಉತ್ತರಿಸಿದರು. ಆ ನಿಟ್ಟಿನಲ್ಲಿ ಎಸ್‍ಐಟಿ, ಪೊಲೀಸ್ ಠಾಣೆಗಳ ನಡವಳಿಕೆ ಜನರಲ್ಲಿ ವಿಶ್ವಾಸ ಮೂಡಿಸುವಂತೆ ಇರಬೇಕು ಎಂದು ಆಶಿಸಿದರು.

ಇದನ್ನು ನೋಡಿ : ಆಡಳಿತ ನಡೆಸುವವರಿಗೆ ಸಂವಿಧಾನ ಶಿಕ್ಷಣದ ಅಗತ್ಯವಿದೆ’ – ಜಸ್ಟೀಸ್ ಎಚ್.ಎನ್. ನಾಗಮೋಹನ ದಾಸ್Janashakthi Media

Donate Janashakthi Media

Leave a Reply

Your email address will not be published. Required fields are marked *