ಪದವಿ ಕಾಲೇಜು ಆರಂಭಿಸುವ ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ: ಡಿಸಿಎಂ ಡಾ. ಸಿ.ಎನ್.ಅಶ್ವತ್ಥನಾರಾಯಣ

ಬೆಂಗಳೂರು: ರಾಜ್ಯದಲ್ಲಿ ಪದವಿ ಕಾಲೇಜುಗಳನ್ನು ಆರಂಭಿಸುವ ಬಗ್ಗೆ ಸದ್ಯ ಯಾವುದೇ ತೀರ್ಮಾನಗಳನ್ನು ಕೈಗೊಂಡಿಲ್ಲ ಎಂದು ಉಪ ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಸ್ಪಷ್ಟನೆ ನೀಡಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಶ್ವತ್ಥನಾರಾಯಣ ಅವರು, ʻಪದವಿ ವಿದ್ಯಾರ್ಥಿಗಳಿಗೆ ಲಸಿಕೆ ನೀಡುವುದು ಮಾತ್ರ ಸರಕಾರದ ಆದ್ಯತೆಯಾಗಿದೆ. ಅದರ ಹೊರತಾಗಿ ಕಾಲೇಜುಗಳನ್ನು ಆರಂಭಿಸಲಾಗುವುದಿಲ್ಲ. ಕೋವಿಡ್ ಪೂರ್ಣವಾಗಿ ನಿವಾರಣೆಯಾಗದಿರುವುದರಿಂದ ಈ ನಿರ್ಧಾರಕ್ಕೆ ಬದಲಾಗಿದೆ ಎಂದು ಹೇಳಿದರು.

ರಾಜ್ಯದಲ್ಲಿ ಶೇ 65.14ರಷ್ಟು ವಿದ್ಯಾರ್ಥಿ-ಸಿಬ್ಬಂದಿಗಳಿಗೆ ಲಸಿಕೆ

ವಿದ್ಯಾರ್ಥಿಗಳಿಗೆ ಲಸಿಕೆ ವಿತರಣೆಯ ಬಗ್ಗೆ ಮಾಹಿತಿ ನೀಡಿದ ಉಪಮುಖ್ಯಮಂತ್ರಿ ಅಶ್ವತ್ಥನಾರಾಯಣ ಅವರು ʻʻರಾಜ್ಯದಲ್ಲಿ ಶೇಕಡಾ 65.14ರಷ್ಟು ಕಾಲೇಜು ವಿದ್ಯಾರ್ಥಿಗಳು, ಸಿಬ್ಬಂದಿಗಳಿಗೆ ಲಸಿಕೆ ಹಾಕಲಾಗಿದೆ. ರಾಜ್ಯದ ಆರು ಶೈಕ್ಷಣಿಕ ವಲಯಗಳ ಸರಕಾರಿ ಮತ್ತು ಅನುದಾನಿತ ಪದವಿ ಕಾಲೇಜುಗಳಲ್ಲಿ 4.90 ಲಕ್ಷ ವಿದ್ಯಾರ್ಥಿಗಳಿದ್ದು, ಅವರಲ್ಲಿ ಈವರೆಗೆ 3.13 ಲಕ್ಷ ಮಂದಿಗೆ ಲಸಿಕೆ ನೀಡಲಾಗಿದೆ.  29,241 ಸಿಬ್ಬಂದಿ ಪೈಕಿ 24,875 ಜನ ಲಸಿಕೆ ಪಡೆದುಕೊಂಡಿದ್ದಾರೆ. ಇದುವರೆಗೆ ಒಟ್ಟು ಶೇ 65.14ರಷ್ಟು ಗುರಿ ತಲುಪಲಾಗಿದೆ. ಲಸಿಕೆ ವಿತರಣೆಯನ್ನು ಮತ್ತಷ್ಟು ಚುರುಕುಗೊಳಿಸಲಾಗಿದೆ ಎಂದು ಮಾಹಿತಿ ನೀಡಿದರು.

ಇದನ್ನು ಓದಿ: ಪದವಿ ಶಿಕ್ಷಣಕ್ಕೆ ಹೊಸ ಪಠ್ಯ : ಶಿಕ್ಷಣದ ಮತೀಯವಾದಿಕರಣಕ್ಕೆ ದಾರಿ ಮಾಡಿಕೊಡಲಿದೆಯೇ?

ಇದಕ್ಕೆ ಸಂಬಂಧಿಸಿದಂತೆ ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕುಮಾರನಾಯಕ್‌ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮ ಅವರು ಎಲ್ಲಾ ಜಿಲ್ಲಾಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದಾರೆ.

ಸರಕಾರ ಈ ಬಗ್ಗೆ ವಿಶೇಷ ಒತ್ತು ನೀಡಿ  ಆದ್ಯತಾ ಗುಂಪಿನ ಅಡಿಯಲ್ಲಿ ವಿದ್ಯಾರ್ಥಿಗಳು, ಬೋಧಕರು ಮತ್ತು ಬೋಧಕೇತರ ಸಿಬ್ಬಂದಿಗೆ ಲಸಿಕೆ ಕೊಡುತ್ತಿದೆ. ಕೆಲ ದಿನಗಳಲ್ಲೇ ಶೇ.100ರಷ್ಟು ಗುರಿ ಸಾಧಿಸಲಾಗುತ್ತದೆ. ಖಾಸಗಿ ಕಾಲೇಜುಗಳಲ್ಲಿ ನೀಡಲಾದ ಲಸಿಕೆ ಬಗ್ಗೆ ಅಂಕಿ-ಅಂಶವನ್ನು ಸಂಗ್ರಹಿಸಲಾಗುತ್ತಿದೆ. ಎಲ್ಲಾ ಮಾಹಿತಿ ಸಿಕ್ಕ ನಂತರದಲ್ಲಿ ಉಳಿದ ವಿದ್ಯಾರ್ಥಿಗಳಿಗೆ ಇನ್ನೆಷ್ಟು ದಿನಗಳಲ್ಲಿ ಲಸಿಕೆ ನೀಡುವ ಮುಂದಿನ ಕ್ರಮಗಳನ್ನು ಕೈಗೊಳ್ಳಲು ಸರಕಾರ ಮುಂದಾಗಿದೆ.

Donate Janashakthi Media

Leave a Reply

Your email address will not be published. Required fields are marked *