ಪದೇ ಪದೇ ದಾಳಿ ಮಾಡುತ್ತಿರುವ ಕಾಡಾನೆ; ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರ ಆಕ್ರೋಶ

ಚಿಕ್ಕಮಗಳೂರು: ತರೀಕೆರೆ ತಾಲೂಕಿನ ರಾಗಿಬಸವನಹಳ್ಳಿಯಲ್ಲಿ ಹೊಲದಲ್ಲಿ ರಾಗಿ ಕಾಯುತ್ತಾ ಮಲಗಿದ್ದ 65 ವರ್ಷದ ಈರಣ್ಣ ಎಂಬವರ ಮೇಲೆ ನೆನ್ನೆಯಷ್ಟೇ ದಾಳಿ ಮಾಡಿದ ಕಾಡಾನೆ ಅವರನ್ನ ಕೊಂದಿತ್ತು. ಇದೀಗ ಮತ್ತೆ ಮೂಡಗೆರೆ ತಾಲ್ಲೂಕಿನ ಬಣಕಲ್‌ ಗ್ರಾಮದ ಸಮೀಪ ರಸ್ತೆಬದಿ ಆಶ್ರಯ ಪಡೆದಿರುವವರ ಮೇಲೆ ಮತ್ತೆ ಕಾಡಾನೆ ದಾಳಿಯಾಗಿದ್ದು, ಜನರು ಪಾರಾಗಿದ್ದಾರೆ. ಪದೇ ಪದೇ ಕಾಡಾನೆ ದಾಳಿಯಾಗುತ್ತಿರುವುದರಿಂದ ಜನರು ಆಕ್ರೋಶಗೊಂಡಿದ್ದಾರೆ.

ಮೇಲಿಂದ ಮೇಲೆ ಕಾಡಾನೆಗಳ ಹಾವಳಿ ಹೆಚ್ಚುತ್ತಿದ್ದರೂ ಆನೆ ಹಾವಳಿ ಬಗ್ಗೆ ಸೂಕ್ತ ಕ್ರಮಕೈಗೊಳ್ಳದ ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

ಇದನ್ನು ಓದಿ: ಕಾಡಾನೆ ಹಾವಳಿ: ಶಾಶ್ವತ ಪರಿಹಾರಕ್ಕೆ ಸಾರ್ವಜನಿಕರ ಆಗ್ರಹ

ಹಾಸನ ಜಿಲ್ಲೆ ಬೇಲೂರು ತಾಲೂಕಿನ ಹಗರೆ ಮೂಲದ ನಾಗವಲ್ಲಿ ಹಾಗೂ ಗಂಡುಗುಸೆ ಎಂಬ ದಂಪತಿ ಕೂಲಿ ಕೆಲಸಕ್ಕೆಂದು ಮೂಡಿಗೆರೆ ತಾಲೂಕಿನ ಬಣಕಲ್ ಗ್ರಾಮಕ್ಕೆ ಬಂದಿದ್ದರು. ಬಣಕಲ್ ಗ್ರಾಮದ ಪಶು ಆಸ್ಪತ್ರೆ ಬಳಿ ಛಾವಣಿ ನಿರ್ಮಿಸಿಕೊಂಡು ವಾಸಿಸುತ್ತಿದ್ದರು. ಕಾರ್ಮಿಕರ ಮಲಗಿದ್ದ ಸಂದರ್ಭದಲ್ಲಿ ಕಾಡಾನೆ ದಾಳಿ ಮಾಡಿದೆ. ಅದೃಷ್ಟವಶಾತ್ ದಂಪತಿ ಹಾಗೂ ಮತ್ತೊಬ್ಬರು ಒಟ್ಟು ಮೂವರು ಸಾವಿನಿಂದ ಪಾರಾಗಿದ್ದಾರೆ.

ನಾಗವಲ್ಲಿ ಹಾಗೂ ಗಂಡುಗುಸೆ ದಂಪತಿಗೆ ತೀವ್ರ ಗಾಯವಾಗಿದ್ದು, ಮೂಡಿಗೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಗವಲ್ಲಿಗೆ ಸೊಂಟದ ಭಾಗಕ್ಕೆ ತೀವ್ರ ಗಾಯವಾಗಿದೆ ಎಂದು ತಿಳಿದು ಬಂದಿದೆ.

ಇದನ್ನು ಓದಿ: ಬೆಳ್ಳಂಬೆಳಗ್ಗೆ ಗ್ರಾಮದೊಳಗೆ ನುಗ್ಗಿದ ಕಾಡಾನೆ

ಕಾಡಾಂಚಿನ ಗ್ರಾಮಗಳಲ್ಲಿದ್ದ ಆನೆ ಹಾವಳಿ ಈಗ ನಗರ ಪ್ರದೇಶಕ್ಕೂ ಕಾಲಿಟ್ಟಿದೆ. ನಗರ ಪ್ರದೇಶಗಳಿಗೂ ಈಗ ಕಾಡಾನೆಗಳು ದಾಳಿ ಆರಂಭವಾಗಿದೆ. ಬಣಕಲ್ ಗ್ರಾಮದ ಪಶು ಆಸ್ಪತ್ರೆ ಬಳಿ ಆನೆ ಬಂದಿದೆ. ಬಣಕಲ್ ಸುಮಾರು 400ಕ್ಕೂ ಹೆಚ್ಚು ಮನೆಗಳಿಗರುವ ಹೋಬಳಿ ಕೇಂದ್ರ. ಈಗಾಗಲೇ ಕಳೆದ ಆರು ತಿಂಗಳಲ್ಲಿ ಮೂಡಿಗೆರೆಯಲ್ಲಿ ಮೂರು ಮಂದಿ ಕಾಡಾನೆ ದಾಳಿಗೆ ಪ್ರಾಣ ಕಳೆದುಕೊಂಡಿದ್ದಾರೆ.

ಬಣಕಲ್ ಗ್ರಾಮಕ್ಕೆ ಬಂದಿರುವ ಒಂಟಿ ಸಲಗ ಭೈರ ಎಂದು ಕೇಳಿಬಂದಿದೆ. ಮಲೆನಾಡಲ್ಲಿ ದಿನದಿಂದ ದಿನಕ್ಕೆ ಆನೆ ಹಾವಳಿ ಮೀತಿ ಮೀರಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಕೂಡಲೇ ಕ್ರಮಕೈಗೊಂಡು ಜನರ ರಕ್ಷಣೆ ಮಾಡಬೇಕೆಂಬುದು ಸ್ಥಳೀಯರ ಒತ್ತಾಯವಾಗಿದೆ.

ಇಲ್ಲಿ ಕ್ಲಿಕ್‌ ಮಾಡಿ : ಜನಶಕ್ತಿ ಮೀಡಿಯಾ ವಾಟ್ಸ್‌ಪ್‌ ಗುಂಪು ಸೇರಲು ಈ ಲಿಂಕ್‌ ಕ್ಲಿಕ್‌ ಮಾಡಿ

Donate Janashakthi Media

Leave a Reply

Your email address will not be published. Required fields are marked *