ಬೆಂಗಳೂರು: ಖಾಲಿ ಇರುವ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕಕ್ಕೆ ಆದೇಶ ಹೊರಡಿಸಿದ ರಾಜ್ಯ ಸರ್ಕಾರದ ಇದೀಗ, ಅತಿಥಿ ಉಪನ್ಯಾಸಕರ ಗೌರವ ಧನ ಹೆಚ್ಚಿಸಿದೆ.
ಈ ಕುರಿತು ಆದೇಶವನ್ನು ಹೊರಡಿಸಿರುವ ರಾಜ್ಯ ಸರ್ಕಾರವು ಸದ್ಯ ಪದವಿ ಪೂರ್ವ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ಗೌರವಧನ 3 ಸಾವಿರ ಹೆಚ್ಚಳ ಮಾಡಿದ್ದು, ಮಾಸಿಕ ಗೌರವಧನ 9,000 ರೂಪಾಯಿ ಪರಿಷ್ಕರಿಸಿ 12,000 ರೂಪಾಯಿಗೆ ಮಾರ್ಪಡಿಸಿದೆ.
2022-23ನೇ ಶೈಕ್ಷಣಿಕ ಸಾಲಿಗೆ ಖಾಲಿ ಇರುವ ಸರ್ಕಾರಿ ಪಿಯು ಕಾಲೇಜುಗಳ ಉಪನ್ಯಾಸಕರ ಹುದ್ದೆಗೆ ಅತಿಥಿ ಉಪನ್ಯಾಸಕರನ್ನು ನೇಮಕಕ್ಕೆ ಆದೇಶಿಸಲಾಗಿತ್ತು. ಅದರಂತೆ, 3708 ಅತಿಥಿ ಉಪನ್ಯಾಸಕರ ನೇಮಕಕ್ಕೆ ಇತ್ತೀಚಿಗೆ ಆದೇಶಿಸಲಾಗಿದೆ.
ಕೆಲ ದಿನಗಳ ಹಿಂದಷ್ಟೇ ರಾಜ್ಯ ಸರ್ಕಾರ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರ ಗೌರವಧನ ಹೆಚ್ಚಳ ಮಾಡಿದೆ. ಅದರಂತೆ ಗೌರವ ಸಂಭಾವನೆ 9,000 ರೂ.ನಿಂದ 15,000 ರೂ.ಗೆ ಹೆಚ್ಚಳಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರು ಮನವಿ ಮಾಡಿ ಪ್ರಸ್ತಾವನೆ ಸಲ್ಲಿಸಿದ್ದರು.
ಈಗ ಪದವಿ ಪೂರ್ವ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿ ಜೊತೆಗೆ ಗೌರವಧನವನ್ನು ಹೆಚ್ಚಳ ಮಾಡಲಾಗಿದೆ.