ಪಿಯುಸಿ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ವಿಳಂಬ: ತಕ್ಷಣ ಕ್ರಮಕ್ಕೆ ಪಾಫ್ರೆ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ಪ್ರಸಕ್ತ 2026-27 ನೇ ಶೈಕ್ಷಣಿಕ ವರ್ಷದ ಪಿಯುಸಿ ತರಗತಿಗಳು ಪ್ರಾರಂಭವಾಗಿ ಒಂದು ತಿಂಗಳು ಕಳೆಯುತ್ತಾ ಬಂದರು ಇನ್ನೂ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳು ತಲುಪಿಲ್ಲದಿರುವುದು ಅತ್ಯಂತ ವಿಷಾದನೀಯ ಸಂಗತಿ. ಪಾಫ್ರೆ ಇದನ್ನು ಬಲವಾಗಿ ಖಂಡಿಸುತ್ತದೆ ಎಂದು ಶಿಕ್ಷಣದ ಹಕ್ಕಿಗಾಗಿ ಜನಾಂದೋಲನಗಳ ಸಮನ್ವಯ (ಪಾಫ್ರೆ)ಯ ಪ್ರಧಾನ ಸಂಚಾಲಕ ನಿರಂಜನಾರಾಧ್ಯ ವಿ .ಪಿ ಆಕ್ರೋಶ ವ್ಯಕ್ತಪಡಿಸಿದರು.

ವಿಶೇಷವಾಗಿ ಕನ್ನಡ ಮತ್ತು ಇಂಗ್ಲಿಷ್ ಭಾಷಾ ಪಠ್ಯಪುಸ್ತಕಗಳೇ ಇಲ್ಲದೆ ಉಪನ್ಯಾಸಕರು ಪಾಠ ಮಾಡಲು ಪರದಾಡುತ್ತಿದ್ದು, ವಿದ್ಯಾರ್ಥಿಗಳ ಕಲಿಕೆಗೆ ಸಂಪೂರ್ಣವಾಗಿ ಹಿನ್ನಡೆಯಾಗಿದೆ.ಭಾಷಾ ವಿಷಯಗಳಲ್ಲಿ ಪದ್ಯ, ಗದ್ಯ, ವ್ಯಾಕರಣವನ್ನು ಪಠ್ಯಪುಸ್ತಕವಿಲ್ಲದೆ ಬೋಧಿಸುವುದು ಅವೈಜ್ಞಾನಿಕವಾಗಿದ್ದು ಮಕ್ಕಳಿಗೆ ಭಾಷಾ ಕಲಿಕೆ ಸ್ಥಗಿತಗೊಂಡಿದೆ ಎಂದು ಅಸಮಧಾನ ವ್ಯಕ್ತಪಡಿಸಿದರು.

ಗ್ರಾಮೀಣ ಭಾಗದ ಮಕ್ಕಳು ಪಠ್ಯ ಪುಸ್ತಕ ಇಲ್ಲದೆ ಕಲಿಕೆಯಲ್ಲಿ ತೊಡಗಿಸಿಕೊಳ್ಳುವುದು ಕಷ್ಟ ಸಾಧ್ಯ. ಕಾರಣ , ಈ ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕವೊಂದೇ ಕಲಿಕೆಗೆ ಇರುವ ಒಂದು ಮುಖ್ಯ ಸಂಪನ್ಮೂಲವಾಗಿದೆ ಎಂದರು.

ಇದನ್ನೂ ಓದಿ: ರಾಮಮಂದಿರ ದೇಣಿಗೆ ಪ್ರಕರಣ: 42 ಜನರ ವಿಚಾರಣೆ, ಎಸ್‌ಐಟಿ ತನಿಖೆ ತೀವ್ರ

ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಇದು ಭವಿಷ್ಯದ ಅಡಿಪಾಯವಾಗಿದ್ದು ಕಲಿಕೆಯಲ್ಲಿ ಹಿಂದೆ ಬೀಳುವಂತೆ ಮಾಡುತ್ತದೆ . ಅದು ಅವರ ಎರಡನೇ ಪಿಯುಸಿ ಫಲಿತಾಂಶದ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಿದರು.

ಒಂದಲ್ಲ ಒಂದು ರೀತಿ , ಪಠ್ಯ ಪುಸ್ತಕ ವಿತರಣೆಯಲ್ಲಿ ಪ್ರತಿ ವರ್ಷ ಇದೇ ಸಮಸ್ಯೆ ಮರುಕಳಿಸುತ್ತಿದೆ. ಮುದ್ರಣ, ಸರಬರಾಜು ವ್ಯವಸ್ಥೆಯಲ್ಲಿನ ಲೋಪದಿಂದ ಲಕ್ಷಾಂತರ ಮಕ್ಕಳ ಶಿಕ್ಷಣದ ಹಕ್ಕಿಗೆ ಧಕ್ಕೆಯಾಗಿದೆ ಎಂದು ತಿಳಿಸಿದರು.

ಪಾಫ್ರೆ ಬೇಡಿಕೆಗಳು:

1. ಈ ತಿಂಗಳ ಅಂತ್ಯದೊಳಗಾಗಿ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಪಿಯು ಕಾಲೇಜುಗಳಿಗೆ ಪೂರ್ಣ ಪ್ರಮಾಣದಲ್ಲಿ ಪಠ್ಯಪುಸ್ತಕಗಳನ್ನು ತಲುಪಿಸಬೇಕು.

2. ⁠ಪುಸ್ತಕ ಸಿಗುವವರೆಗೆ ಪಿಯು ಮಂಡಳಿ ಅಧಿಕೃತ ಇ-ಪುಸ್ತಕಗಳನ್ನು ಉಚಿತವಾಗಿ ವೆಬ್‌ಸೈಟ್/ವಿದ್ಯಾರ್ಥಿಗಳ ಮೊಬೈಲ್ ಆ್ಯಪ್‌ನಲ್ಲಿ ಲಭ್ಯ ಮಾಡಬೇಕು.

3. ⁠ಈ ವಿಳಂಬಕ್ಕೆ ಕಾರಣರಾದ ಅಧಿಕಾರಿಗಳ ಮೇಲೆ ಹೊಣೆಗಾರಿಕೆ ನಿಗದಿಪಡಿಸಿ ಕ್ರಮ ಕೈಗೊಳ್ಳಬೇಕು.

ಇದನ್ನೂ ನೋಡಿ: BLO ಕೆಲಸದ ಒತ್ತಡಕ್ಕೆ ಬೇಸತ್ತ ಅಂಗನವಾಡಿ ನೌಕರರು! ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ Janashakthi Media

Donate Janashakthi Media

Leave a Reply

Your email address will not be published. Required fields are marked *