ಕಲಬುರಗಿ ರಸ್ತೆಯಲ್ಲಿ ಪಾಕಿಸ್ತಾನ ಧ್ವಜ; ಬಜರಂಗದಳ ಕಾರ್ಯಕರ್ತರು ಪೊಲೀಸ್‌ ವಶಕ್ಕೆ

ಕಲಬುರಗಿ: ನಗರದ ಜಗತ್ ವೃತ್ತದಲ್ಲಿ ಪಾಕಿಸ್ತಾನ ಧ್ವಜವನ್ನು ಅಂಟಿಸಿದ ಬಜರಂಗದಳದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮನಲ್ಲಿ ಅಮಾಯಕರ‌ ಮೇಲಿನ ಉಗ್ರರ ದಾಳಿ ಖಂಡಿಸಿ ನಗರದ ವಿವಿಧೆಡೆ ಕಡೆ ಪಾಕಿಸ್ತಾನದ ಧ್ವಜವನ್ನು ನೆಲಕ್ಕೆ ಅಂಟಿಸುವ ಮುಖಾಂತರ ಬಜರಂಗ ದಳದ ಕಾರ್ಯಕರ್ತರೂ ಆಕ್ರೋಶ ವ್ಯಕ್ತಪಡಿಸಿದ್ದು ಪ್ರಚೋಧಿಸುವ ವಿಧಾನ ಆಗಿದೆ ಎಂಬ ಆರೋಪ ಕೇಳಿ ಬಂದಿದೆ.

ಬಜರಂಗದಳದ ಕಾರ್ಯಕರ್ತರು ನಗರದ ಜಗತ್ ವೃತ್ತ ಸೇರಿದಂತೆ ನಗರದ ಇತರೆ ಪ್ರಮುಖ ಪ್ರದೇಶಗಳಲ್ಲಿ ಪಾಕ್ ಧ್ವಜಗಳನ್ನು ರಸ್ತೆ, ಶೌಚಾಲಯ ಪ್ರದೇಶಗಳಲ್ಲಿ ಅಂಟಿಸಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಆಗಮಿಸಿದ ಗುಪ್ತಚರ ಇಲಾಖೆ ಸಿಬ್ಬಂದಿ, ಮತ್ತು ಬ್ರಹ್ಮಪುರ ಠಾಣೆಯ ಪೊಲೀಸರು ಅಂಟಿಸಿದ ಧ್ವಜವನ್ನು ತೆರವುಗೊಳಿಸಿದ್ದಾರೆ.

ಇದನ್ನೂ ಓದಿ : ರಾಷ್ಟ್ರವನ್ನೇ ಬೆಚ್ಚಿಬೀಳಿಸಿದ ಭಯೋತ್ಪಾದಕ ದಾಳಿ: ಮೋದಿ ಸರ್ಕಾರದ ಭದ್ರತಾ ವೈಫಲ್ಯವನ್ನು ಎತ್ತಿ ತೋರಿಸುತ್ತದೆ ಕಲಬುರಗಿ

ಈ‌ ವೇಳೆ‌ ಮಾತನಾಡಿದ‌ ಕಮಿಷನರ್ ಶರಣಪ್ಪ ಎಸ್. ಡಿ.,’ಪಹಲ್ಗಾಮನಲ್ಲಿ ನಡೆದ ಉಗ್ರರ ದಾಳಿ‌ ಖಂಡಿಸಿ ಪ್ರತಿಭಟನಾರ್ಥವಾಗಿ ಪಾಕ್ ಧ್ವಜಗಳನ್ನು ನಗರದಲ್ಲಿ ಅಂಟಿಸಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಬಜರಂಗ ದಳದವರು ಇದನ್ನು ಮಾಡಿದ್ದಾರೆ. ಈ ಸಂಬಂಧ ಆರು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ‌ ನಡೆಸಲಾಗುತ್ತಿದೆ. ಉಗ್ರರ ದಾಳಿ‌ ಖಂಡನೀಯ. ಅದರ ವಿರುದ್ಧದ ಪ್ರತಿಭಟನೆಯನ್ನು ಕಾನೂನಿನ‌ ಚೌಕಟ್ಟಿನಲ್ಲಿ ನಡೆಸಬೇಕು. ಯಾರಾದರೂ ಕಾನೂನು ಕೈಗೆತ್ತಿಕೊಂಡರೆ ಕ್ರಮ ಜರುಗಿಸಬೇಕಾಗುತ್ತದೆ’ ಎಂದು ಎಚ್ಚರಿಸಿದರು.

ಇದನ್ನೂ ನೋಡಿ : ಪಹಲ್‍ಗಾಂಮ್ ಹತ್ಯಾಕಾಂಡ| ಭದ್ರತೆಯ ಲೋಪವನ್ನೂ ತನಿಖೆಗೆ ಒಳಪಡಿಸಲು ಸಿಪಿಐ(ಎಂ) ಆಗ್ರಹ Janashakthi Media

 

Donate Janashakthi Media

Leave a Reply

Your email address will not be published. Required fields are marked *