ಗಾಝಾ: ಇಸ್ರೇಲ್ ಮುತ್ತಿಗೆ ಹಾಕಿದ ಪ್ರದೇಶದಲ್ಲಿರುವ ಅತಿದೊಡ್ಡ ವೈದ್ಯಕೀಯ ಸೌಲಭ್ಯವಾದ ಅಲ್-ಶಿಫಾ ಆಸ್ಪತ್ರೆಯಲ್ಲಿ ನಿರಂತರ ವಿದ್ಯುತ್ ಕಡಿತದಿಂದಾಗಿ ನವಜಾತ ಶಿಶು ಸಾವನ್ನಪ್ಪಿದೆ ಎಂದು ಪ್ಯಾಲೇಸ್ಟಿನಿಯನ್ ಆರೋಗ್ಯ ಸಚಿವಾಲಯ ಶನಿವಾರ ಆರೋಪಿಸಿದೆ. ಆಸ್ಪತ್ರೆಯಲ್ಲಿ ಅವಧಿಪೂರ್ವ ಹೆರಿಗೆಯಾದ 37 ನವಜಾತ ಮಕ್ಕಳು ಇದ್ದಾರೆ ಎಂದು ಸಚಿವಾಲಯದ ವಕ್ತಾರ ಅಶ್ರಫ್ ಅಲ್-ಕುದ್ರಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಇಸ್ರೇಲ್ ದಾಳಿಯ ಪರಿಣಾಮವಾಗಿ ಸಂಪೂರ್ಣ ವಿದ್ಯುತ್ ಕಡಿತವಾಗಿದ್ದು ಕಳೆದ ಮೂರು ಗಂಟೆಗಳಿಂದ ವೈದ್ಯಕೀಯ ಸಿಬ್ಬಂದಿ ಈ ಕೆಲವು ಮಕ್ಕಳಿಗೆ ಕೈಯಿಂದ ಕೃತಕ ಉಸಿರಾಟವನ್ನು ನಡೆಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ. ಕಳೆದ ಒಂದು ತಿಂಗಳಿನಿಂದ, ಅಲ್-ಶಿಫಾ ಆಸ್ಪತ್ರೆ ಸೇರಿದಂತೆ ಗಾಝಾ ಪಟ್ಟಿಗೆ ಯಾವುದೇ ಇಂಧನವನ್ನು ಅನುಮತಿಸಲಾಗಿಲ್ಲ.
ಇದನ್ನೂ ಓದಿ: ತೆಲಂಗಾಣ | ಅಧಿಕಾರಕ್ಕೆ ಬಂದರೆ ಹಿಂದುಳಿದ ವರ್ಗಗಳ ಮೀಸಲಾತಿ ಹೆಚ್ಚಿಸುವುದಾಗಿ ಕಾಂಗ್ರೆಸ್ ಭರವಸೆ
ಅಲ್-ಶಿಫಾ ಆಸ್ಪತ್ರೆಯ ಸಂಕೀರ್ಣ ಅಂಗಳಕ್ಕೆ ಇಸ್ರೇಲ್ ವಾಯು ದಾಳಿ ನಡೆಸಿದ್ದು, ಸಂಕೀರ್ಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ವಕ್ತಾರರು ತಿಳಿಸಿದ್ದಾರೆ. ಅಲ್-ಶಿಫಾ ಆಸ್ಪತ್ರೆಯ ಬಳಿ ಇಸ್ರೇಲ್ ದಾಳಿ ಮಾಡಿರುವ ಬಗ್ಗೆ ವರದಿಯಾಗಿವೆ. ಸಿಬ್ಬಂದಿ ಮತ್ತು ಅಧಿಕಾರಿಗಳು ಸಂಕೀರ್ಣದ ಸುತ್ತಮುತ್ತಲಿನ ಪ್ರದೇಶದಲ್ಲಿ ಭಾರೀ ಬಾಂಬ್ ದಾಳಿ ನಡೆಯುತ್ತಿರುವುದು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗಿದೆ.
ವಿಶ್ವ ಆರೋಗ್ಯ ಸಂಸ್ಥೆ (WHO) ವಕ್ತಾರರು ಶುಕ್ರವಾರ ಗಾಝಾ ಅಲ್-ಶಿಫಾ ಆಸ್ಪತ್ರೆ “ಬಾಂಬ್ ದಾಳಿಗೆ ಒಳಗಾಗುತ್ತಿದೆ” ಎಂದು ಹೇಳಿದ್ದಾರೆ. ಗಾಜಾ ಪಟ್ಟಿಯಲ್ಲಿರುವ 20 ಆಸ್ಪತ್ರೆಗಳು “ಕ್ರಿಯೆಯಿಂದ ಹೊರಗಿವೆ” ಎಂದು ಹೇಳಿದ್ದಾರೆ.
ಅದಾಗ್ಯೂ, ಈ ದಾಳಿಗಳನ್ನು ಇಸ್ರೇಲ್ ವಾಡಿಕೆಯಂತೆ ನಿರಾಕರಿಸಿದೆ. ಗಾಜಾ ಸ್ಟ್ರಿಪ್‌ನಲ್ಲಿ ಭಯೋತ್ಪಾದಕರು ಉಡಾಯಿಸಿದ ಕ್ಷಿಪಣಿ ವಿಫಲಗೊಂಡು ಅಲ್-ಶಿಫಾ ಆಸ್ಪತ್ರೆಗೆ ಬಿದ್ದಿದೆ ಎಂದು ಶನಿವಾರ ಮುಂಜಾನೆ ಇಸ್ರೇಲ್ ಸೇನೆ ಹೇಳಿ ನುಣುಚಿಕೊಂಡಿದೆ.
ಪ್ಯಾಲೆಸ್ತೀನ್ ಪ್ರತಿರೋಧ ಪಡೆ ಹಮಾಸ್ ಅಲ್-ಶಿಫಾ ಆಸ್ಪತ್ರೆಯ ಕೆಳಗಿರುವ ಸುರಂಗಗಳಿಂದ ಕಾರ್ಯನಿರ್ವಹಿಸುತ್ತದೆ ಎಂದು ಇಸ್ರೇಲಿ ಸೇನೆ ಹೇಳಿದೆ. ಆದರೆ, ಈ ಆರೋಪವನ್ನು ಹಮಾಸ್ ಸಂಘಟನೆ ನಿರಾಕರಿಸಿದೆ.
ಇದನ್ನೂ ಓದಿ: ರಾಜಸ್ಥಾನ: 4 ವರ್ಷದ ದಲಿತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಸಬ್ ಇನ್ಸ್‌ಪೆಕ್ಟರ್
ಅದಾಗ್ಯೂ, ಪ್ಯಾಲೆಸ್ತೀನ್ ಪ್ರತಿರೋಧ ಪಡೆ ಹಮಾಸ್ ಅಲ್-ಶಿಫಾ ಆಸ್ಪತ್ರೆಯ ಕೆಳಗಿರುವ ಸುರಂಗಗಳಿಂದ ಕಾರ್ಯನಿರ್ವಹಿಸುತ್ತದೆ ಎಂದು ಇಸ್ರೇಲಿ ಸೇನೆ ಹೇಳಿದೆ. ಆದರೆ, ಈ ಆರೋಪವನ್ನು ಹಮಾಸ್ ಸಂಘಟನೆ ನಿರಾಕರಿಸಿದೆ.
“ಗಾಜಾ ನಗರದ ಅಲ್-ಶಿಫಾ ಆಸ್ಪತ್ರೆಯ ಬಳಿ ಕಾರ್ಯನಿರ್ವಹಿಸುತ್ತಿರುವ ಇಸ್ರೇಲಿ ಪಡೆಗಳನ್ನು ಗುರಿಯಾಗಿಟ್ಟುಕೊಂಡು ಇಂದು ಬೆಳಿಗ್ಗೆ ಬಂಡುಕೋರರು ರಾಕೆಟ್‌ಗಳನ್ನು ಹಾರಿಸಿದ್ದಾರೆ. ರಾಕೆಟ್ ಚಾಲಿತ ಗ್ರೆನೇಡ್‌ಗಳು ಆಸ್ಪತ್ರೆಯ ಮೇಲೆ ಬಿದ್ದಿದೆ. ಇಸ್ರೇಲ್ ಸೇನೆಗೆ ಲಭ್ಯವಿರುವ ಮಾಹಿತಿಯ ಪ್ರಕಾರ, ಗಾಝಾ ಪಟ್ಟಿಯಲ್ಲಿರುವ ಭಯೋತ್ಪಾದಕ ಸಂಘಟನೆಗಳ ವಿಫಲ ಕ್ಷಿಪಣಿ ಉಡಾವಣೆ ಆಸ್ಪತ್ರೆಗೆ ಹೊಡೆದಿದೆ” ಎಂದು ಸೇನೆಯ ವಕ್ತಾರ ಅವಿಚಾಯ್ ಅಡ್ರೇ ಹೇಳಿದ್ದಾರೆ.
ಇಸ್ರೇಲ್ ಆಸ್ಪತ್ರೆಯ ಹೊರಗೆ ಆಂಬ್ಯುಲೆನ್ಸ್ ಅನ್ನು ಗುರಿಯಾಗಿಸಿಕೊಂಡು ದಾಳಿ ಮಾಡಿದ ಒಂದು ವಾರದ ನಂತರ ಈ ಬೆಳವಣಿಗೆ ಸಂಭವಿಸಿದೆ. ಈ ದಾಳಿಯಲ್ಲಿ ಕನಿಷ್ಠ 15 ಜನರು ಸಾವನ್ನಪ್ಪಿ, 50 ಜನರು ಗಾಯಗೊಂಡಿದ್ದರು.
ವಿಡಿಯೊ ನೋಡಿ: ಇಸ್ರೇಲ್‌ನಲ್ಲಿ ಕೆಲಸ ಮಾಡುತ್ತಿರುವ ಪ್ಯಾಲಿಸ್ಟೈನ್ ಕಾರ್ಮಿಕರನ್ನು ಹೊರದಬ್ಬಲಾಗುತ್ತಿದೆ. Janashakthi Media