ಹೊಸದಿಲ್ಲಿ : ಪಾನ್ ಮತ್ತು ಆಧಾರ್ ಲಿಂಕ್ ಮಾಡದೇ ಕಂಗಾಲಾಗಿದ್ದವರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ.ತೆರಿಗೆದಾರರಿಗೆ ಇನ್ನೂ ಸ್ವಲ್ಪ ಸಮಯವನ್ನ ಒದಗಿಸುವ ಸಲುವಾಗಿ,ಪ್ಯಾನ್ ಮತ್ತು ಆಧಾರ್ ಲಿಂಕ್ ಮಾಡುವ ದಿನಾಂಕವನ್ನು ಜೂನ್ 30 – 2023 ರವರೆಗೆ ವಿಸ್ತರಿಸಿದೆ.
ಈ ಬಗ್ಗೆ ಆದಾಯ ತೆರಿಗೆ ಇಲಾಖೆ ಪ್ರಕಟಣೆ ಹೊರಡಿಸಿದೆ. 2023 ರರ ಜುಲೈ 1 ರಿಂದ ಲಿಂಕ್ ಮಾಡದ ಪಾನ್ ಕಾರ್ಡ್ ನಿಷ್ಕ್ರಿಯಗೊಳ್ಳುತ್ತದೆ.ಇದನ್ನು 30 ದಿನಗಳ ಒಳಗೆ 1000 ರೂ ಶುಲ್ಕ ಕಟ್ಟಿ ಲಿಂಕ್ ಮಾಡಿಸಿ ಮತ್ತೆ ಕಾರ್ಯಗತಗೊಳಿಸಬಹುದು ಎಂದು ಇಲಾಖೆ ಸೂಚಿಸಿದೆ. ಈ ಪ್ರಕ್ರಿಯರಯಿಂದ 80 ವರ್ಷ ದಾಟಿದವರು,ಅನಿವಾಸಿ ಭಾರತೀಯರು ಸೇರಿ ಇನ್ನೂ ಹಲ ವಿಭಾಗಗಳಲ್ಲಿ ಬರುವ ಜನರಿಗೆ ವಿನಾಯ್ತಿ ನೀಡಲಾಗಿದೆ.
ಅವಧಿ ವಿಸ್ತರಣೆ ಮಾಡುವಂತೆ ಮೋದಿಗೆ ಮನವಿ :
ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರು ಗಡುವು ವಿಸ್ತರಣೆ ಮಾಡುವಂತೆ ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿದ್ದರು. ಈ ಬೆನ್ನಲ್ಲೆ ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಲಿಂಕ್ ಮಾಡಲು 2022ರ ಮಾರ್ಚ್ 31ರವರೆಗೆ ಉಚಿತವಾಗಿತ್ತು. 2022ರ ಏಪ್ರಿಲ್ 1ರಿಂದ ₹500 ಪಾವತಿಸಿ ಆಧಾರ್ ಲಿಂಕ್ ಮಾಡಬೇಕಾಗಿತ್ತು. 2022ರ ಜೂನ್‌ನಿಂದ 2023ರ ಮಾರ್ಚ್ 31ರವರಗೆ ಲಿಂಕ್ ಮಾಡಬೇಕಾದರೆ ₹1,000 ಪಾವತಿಸಬೇಕು ಎಂದು ಹೇಳಲಾಗಿತ್ತು. ಒಂದು ವೇಳೆ ಈ ಗಡುವಿನ ಒಳಗೆ ಲಿಂಕ್ ಮಾಡದಿದ್ದರೇ ಆ ನಂತರ ಬರುವ ಅರ್ಜಿಗಳಿಗೆ ₹10 ಸಾವಿರ ದಂಡ ಹಾಕಲಾಗುವುದು ಎಂದು ತಿಳಿಸಲಾಗಿತ್ತು. ಆದರೆ, ಇದೀಗ ಗುಡುವು ಮತ್ತೆ ವಿಸ್ತರಣೆಯಾಗಿರುವುದರಿಂದ ₹1000 ಶುಲ್ಕದೊಂದಿಗೆ ಜೂನ್ 30ರವರಗೆ ಆಧಾರ್ ಸಂಖ್ಯೆಯನ್ನು ಪ್ಯಾನ್‌ಗೆ ಲಿಂಕ್ ಮಾಡಬಹುದು.
ಒಬ್ಬನೇ ವ್ಯಕ್ತಿ ಒಂದಕ್ಕಿಂತ ಹೆಚ್ಚು ಪ್ಯಾನ್ ಹೊಂದಿರುವುದನ್ನು ತಪ್ಪಿಸುವ ಉದ್ದೇಶದಿಂದ, ಪ್ಯಾನ್ ಜತೆಗೆ ಆಧಾರ್ ಜೋಡಿಸುವ ವ್ಯವಸ್ಥೆಯನ್ನು 2017ರ ಏಪ್ರಿಲ್‌ನಲ್ಲಿ ಕೇಂದ್ರ ಸರ್ಕಾರವು ಜಾರಿಗೆ ತಂದಿತ್ತು. ಪ್ಯಾನ್-ಆಧಾರ್ ಜೋಡಣೆಗೆ ಆಗ ಸರ್ಕಾರವು ಯಾವುದೇ ಶುಲ್ಕ ವಿಧಿಸಿರಲಿಲ್ಲ. ಆದರೆ, ನಿರೀಕ್ಷಿತ ಮಟ್ಟದಲ್ಲಿ ಜೋಡಣೆ ಕಾರ್ಯಗತವಾಗಲಿಲ್ಲ. ಹೀಗಾಗಿ ಪ್ಯಾನ್-ಆಧಾರ್ ಜೋಡಣೆಗೆ ನೀಡಿದ್ದ ಗಡುವನ್ನು ಸರ್ಕಾರವು ಹಲವು ಬಾರಿ ವಿಸ್ತರಿಸಿತ್ತು. ಕೊನೆಯ ಹಂತದ್ದು ಎಂದು ಹೇಳಿ 2022ರ ಮಾರ್ಚ್‌ನಲ್ಲಿ ವಿಸ್ತರಿಸಿದ ಗಡುವು 2023ರ ಮಾರ್ಚ್ 31ಕ್ಕೆ ಕೊನೆಯಾಗಲಿದೆ ಎನ್ನಲಾಗಿತ್ತು.
ಇದನ್ನೂ ಓದಿ : ವೋಟರ್ ಐಡಿ ಅಕ್ರಮ: ಆರ್ಒ ಸಸ್ಪೆಂಡ್, ನಾಲ್ವರು ಪೊಲೀಸ್ ವಶಕ್ಕೆ
‘ಆಧಾರ್ ಜೊತೆಗೆ ಜೋಡಣೆಯಾಗದ ಪ್ಯಾನ್‌ಗಳನ್ನು ಇದೇ ಮಾರ್ಚ್ 31ರ ನಂತರ ಬಳಸಲು ಸಾಧ್ಯವಿಲ್ಲ. ಆನಂತರ ವ್ಯಾವಹಾರಿಕ ಮತ್ತು ತೆರಿಗೆ ಲಾಭಗಳನ್ನು ಕಳೆದುಕೊಳ್ಳಬೇಕಾಗುತ್ತದೆ’ ಎಂದು ಕೇಂದ್ರೀಯ ನೇರ ತೆರಿಗೆ ಮಂಡಳಿ ಅಧ್ಯಕ್ಷರು ಈಚೆಗೆ ಹೇಳಿದ್ದರು.