ಅಸ್ಸಾಂ : ಮಾರ್ಚ್ 7 ರೊಳಗೆ 5 ರಾಜ್ಯಗಳಿಗೆ ವಿಧಾನಸಭೆ ಚುನಾವಣೆ ವೇಳಾಪಟ್ಟಿಯನ್ನು ಚುನಾವಣಾ ಆಯೋಗ ಪ್ರಕಟಿಸುವ ಕುರಿತಾಗಿ ಪ್ರಧಾನಿ ಮೋದಿ ಸುಳಿವು ನೀಡಿದ್ದಾರೆ.
ಅಸ್ಸಾಂನ ಧೆಮಾಜಿ ಜಿಲ್ಲೆಯ ಸಿಲಾಪಥರ್ ನಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕೊನೆಯ ಬಾರಿಗೆ 2016 ರ ಮಾರ್ಚ್ 4 ರಂದು ರಲ್ಲಿ ವಿಧಾನಸಭೆ ಚುನಾವಣೆ ದಿನಾಂಕಗಳನ್ನು ಘೋಷಿಸಲಾಗಿತ್ತು. ಈ ವರ್ಷವೂ ಮಾರ್ಚ್ 7 ರೊಳಗೆ ವಿಧಾನಸಭೆ ಚುನಾವಣೆ ದಿನಾಂಕವನ್ನು ಘೋಷಿಸುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ.
ಚುನಾವಣಾ ಆಯೋಗ ಚುನಾವಣೆ ದಿನಾಂಕವನ್ನು ಪ್ರಕಟಿಸುತ್ತದೆ. ನಾನು ಅಸ್ಸಾಂ, ಪಶ್ಚಿಮಬಂಗಾಳ, ಪುದುಚೇರಿ, ತಮಿಳುನಾಡು ಮತ್ತು ಕೇರಳಕ್ಕೆ ಭೇಟಿ ನೀಡಲಿದ್ದೇನೆ ಎಂದು ತಿಳಿಸಿದ್ದಾರೆ. ಈ ಮೂಲಕ ವಿಧಾನಸಭೆ ಚುನಾವಣೆ ನಡೆಯಲಿರುವ 5 ರಾಜ್ಯಗಳಲ್ಲಿ ಪ್ರಚಾರದಲ್ಲಿ ಭಾಗಿಯಾಗಲಿರುವ ಬಗ್ಗೆ ಮತ್ತು ಆಯೋಗ ಚುನಾವಣೆ ಘೋಷಣೆ ಮಾಡುವ ಬಗ್ಗೆ ಸುಳಿವು ನೀಡಿದ್ದಾರೆ.
ಚುನಾವಣೆಗಳ ಘೋಷಣೆ ಮಾಡುವುದು ಆಯೋಗದ ಕೆಲಸ. ಪ್ರಧಾನಿಯಾದವರು ಬಹಿರಂಗ ಸಭೆಯಲ್ಲಿ ಅದು ಹೇಗೆ ಸುಳಿವು ನೀಡುತ್ತಾರೆ? ಚುನಾವಣಾ ಆಯೋಗ ಹಾಗೂ ಅಧಿಕಾರಿಗಳನ್ನು ಕೇಂದ್ರ ಸರಕಾರ ತನ್ನ ಕೈಗೊಂಬಿಯಾಗಿ ಮಾಡಿಕೊಂಡು ಚುನಾವಣಾ ಆಯೋಗವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ರಾಜಕೀಯ ವಿಶ್ಲೇಷಕರು ಆರೋಪಿಸಿದ್ದಾರೆ.