ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ: ಜೆಡಿಎಸ್-ಬಿಜೆಪಿ ಪರಸ್ಪರ ಸಮನ್ವಯತೆಗೆ ಯೋಜನೆ

ನವದೆಹಲಿ: ರಾಜ್ಯದಲ್ಲಿ ಮೂಂದೆ ಬರಲಿರುವ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಜೆಡಿಎಸ್-ಬಿಜೆಪಿ ಪರಸ್ಪರ ಸಮನ್ವಯತೆಯಿಂದ ಕೆಲಸ ಮಾಡುವ ನಿಟ್ಟಿನಲ್ಲಿ, ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.

ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲಿ ಎನ್‌ಡಿಎ ಮೈತ್ರಿಕೂಟವನ್ನು ಮತ್ತಷ್ಟು ಬಲವರ್ಧನೆಗೊಳಿಸುವ ನಿಟ್ಟಿನಲ್ಲಿ ಅಗತ್ಯ ಸಲಹೆ-ಸೂಚನೆ ಪಡೆದುಕೊಳ್ಳಲು ನಿಖಿಲ್ ಅವರು ಸೋಮವಾರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲಿದ್ದಾರೆ.

ಇದನ್ನೂ ಓದಿ : ಉಪ ಚುನಾವಣೆಯಲ್ಲಿ ಗೆದ್ದ ಕಾಂಗ್ರೆಸ್ ಬೀಗಬೇಕಿಲ್ಲ

ಈಗಾಗಲೇ ಗೃಹ ಸಚಿವರು ಸೋಮವಾರ ತಮ್ಮನ್ನು ಭೇಟಿಯಾಗುವಂತೆ ನಿಖಿಲ್ ಅವರಿಗೆ ಸಮಯ ನೀಡಿದ್ದು, ಅದಕ್ಕೆ ಪೂರ್ವಭಾವಿಯಾಗಿ ಅವರು ನವದೆಹಲಿಯಲ್ಲಿ ರಾಧಾ ಮೋಹನ್ ದಾಸ್ ಅಗರ್ವಾಲ್ ಅವರನ್ನು ಇಂದು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಕಳೆದ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಬಿಜೆಪಿ ಮೈತ್ರಿಕೂಟ ಕಾಂಗ್ರೆಸ್ ಪಕ್ಷದ ವಿರುದ್ಧ ಪ್ರಬಲ ಹೋರಾಟ ನಡೆಸಿ ಉತ್ತಮ ಫಲಿತಾಂಶ ಸಾಧಿಸಿದೆ. ಜನತೆ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ನಂಬಿಕೆ ಇರಿಸಿದ್ದಾರೆ. ಇದನ್ನು ಉಳಿಸಿ ಬೆಳೆಸಿಕೊಂಡು ಹೋಗುವ ನಿಟ್ಟಿನಲ್ಲಿ ಒಟ್ಟಾಗಿ ಕೆಲಸ ಮಾಡುವ ಅಗತ್ಯ ಇದೆ ಎಂದು ನಿಖಿಲ್ ಅವರು ರಾಧಾ ಮೋಹನ್ ದಾಸ್ ಅಗರ್ವಾಲ್ ಅವರಿಗೆ ಹೇಳಿದ್ದಾರೆ.

ಇದನ್ನೂ ನೋಡಿ : ಶಾಹಿ,ಗ್ನಾನವ್ಯಾಪಿ,ಸಂಭಾಲ್,ಅಜ್ಮೀರ್ ಚಿಸ್ತಿ ದರ್ಗಾ,ಮಸೀದಿಗಳ ಸಮೀಕ್ಷೆಯೂ, ಪೂಜಾ ಸ್ಥಳ ಸಂರಕ್ಷಣಾ ಕಾಯ್ದೆ ಉಲ್ಲಂಘನೆಯೂ

Donate Janashakthi Media

Leave a Reply

Your email address will not be published. Required fields are marked *