ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ, ಸ್ಥಳೀಯ ಸಂಸ್ಥೆಗಳ  ಚುನಾವಣೆಗೆ ತಯಾರಿ: ಏಪ್ರಿಲ್, ಮೇ ಒಳಗೆ ಚುನಾವಣೆ ನಡೆಯೋದು ಖಚಿತ

Please follow and like us:
ಬೆಳಗಾವಿ: ರಾಜ್ಯದ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ, ಸ್ಥಳೀಯ ಸಂಸ್ಥೆಗಳ  ಚುನಾವಣೆಗೆ ತಯಾರಿ ಶುವಾಗಿದೆ. ಜಿಲ್ಲಾ, ತಾಲ್ಲೂಕು ಪಂಚಾಯಿತಿಗೆ ಏಪ್ರಿಲ್ ಒಳಗೆ, ಸ್ಥಳೀಯ ಸಂಸ್ಥೆಗಳಿಗೆ ಏಪ್ರಿಲ್, ಮೇ ಒಳಗೆ ಚುನಾವಣೆ ನಡೆಯೋದು ಖಚಿತವಾಗಿದೆ.

ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾಹಿತಿ ಹಂಚಿಕೊಂಡಿರುವಂತ ರಾಜ್ಯ ಚುನಾವಣಾ ಆಯುಕ್ತ ಸಂಗ್ರೇಶಿ ಅವರು, ಚುನಾವಣಾ ಆಯೋಗದಿಂದ ಜಿಲ್ಲಾ, ತಾಲ್ಲೂಕು ಪಂಚಾಯ್ತಿ ಚುನಾವಣೆಗೆ ತಯಾರಿ, ಸಿದ್ಧತೆ ಮಾಡಿಕೊಳ್ಳಲಾಗಿದೆ. ಏಪ್ರಿಲ್ ಒಳಗೆ ಜಿಲ್ಲಾ, ತಾಲ್ಲೂಕು ಪಂಚಾಯ್ತಿಗೆ ಚುನಾವಣೆ ನಡೆಸಲು ನಿರ್ಧರಿಸಲಾಗಿದೆ ಎಂದರು.

ಇದನ್ನೂ ಓದಿ : ‘ಮನೆಗೊಂದು ಗ್ರಂಥಾಲಯ’ ಯೋಜನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಜಿಲ್ಲಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ, ಚುನಾವಣಾ ಪ್ರಕ್ರಿಯೆ ಸಂಬಂಧ ಮತದಾರರ ಪಟ್ಟಿಯ ಬಗ್ಗೆ ಮಾಹಿತಿ ಪಡೆಯಲಾಗುತ್ತಿದೆ. ಅಂತಿಮ ಮತದಾರರ ಪಟ್ಟಿ, ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯ್ತಿ ಚುನಾವಣೆಯ ಮೀಸಲಾತಿ ಪಟ್ಟಿ ಕೈಸೇರಿದ ಬಳಿಕ ಚುನಾವಣೆಗೆ ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದರು.

ಏಪ್ರಿಲ್ ಒಳಗೆ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯ್ತಿ ಚುನಾವಣೆ ನಡೆಯುತ್ತದೆ. ಏಪ್ರಿಲ್, ಮೇ ಒಳಗೆ ರಾಜ್ಯದ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ನಿರ್ಧರಿಸಿರುವುದಾಗಿ ತಿಳಿಸಿದರು.

ಇದನ್ನೂ ನೋಡಿ : ವಿವೇಕಾನಂದ ಸಮಾಜಮುಖಿ ಚಿಂತಕ – ಟಿ. ಸುರೇಂದ್ರರಾವ್‌ Janashakthi Media

Please follow and like us:
Donate Janashakthi Media

Leave a Reply

Your email address will not be published. Required fields are marked *