ತುಮಕೂರು: ಸರ್ಕಾರ ಮೀಸಲಾತಿ ಪಟ್ಟಿ ನೀಡಿದಲ್ಲಿ ಅಕ್ಟೋಬರ್ -ನವೆಂಬರ್ ತಿಂಗಳಲ್ಲಿ ರಾಜ್ಯದಲ್ಲಿ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು ಜಿಲ್ಲೆಯ ತಿಪಟೂರಿನ ಪ್ರವಾಸಿ ಮಂದಿರದಲ್ಲಿ ಸಭೆ ನಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿ.ಎಸ್. ಸಂಗ್ರೇಶಿ ತಿಳಿಸಿದ್ದಾರೆ. ತುಮಕೂರು
ರಾಜ್ಯದ ಜಿಲ್ಲಾ ಪಂಚಾಯತಿ ಮತ್ತು ತಾಲೂಕು ಪಂಚಾಯತಿ ಚುನಾವಣೆಗಳಿಗೆ ಸರ್ಕಾರ ಮೀಸಲಾತಿ ನಿಗದಿಪಡಿಸಿ ಪಟ್ಟಿಯನ್ನು ಚುನಾವಣಾ ಆಯೋಗಕ್ಕೆ ನೀಡಬೇಕಿದೆ. ಮೇ 30ರೊಳಗೆ ಮೀಸಲಾತಿ ಪಟ್ಟಿ ನೀಡುವುದಾಗಿ ಸರ್ಕಾರ ತಿಳಿಸಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಪೊಲೀಸ್ ಅಧಿಕಾರಿಗಳು ದಕ್ಷತೆಯಿಂದ ಕೆಲಸ ಮಾಡಬೇಕು: ಡಾ.ಎಂ.ಎ.ಸಲೀಂ
ಮೀಸಲಾತಿ ಪಟ್ಟಿಗಾಗಿ ಕಾಯುತ್ತಿದ್ದು ಮೀಸಲಾತಿ ಪಟ್ಟಿ ನೀಡಿದ ಕೂಡಲೇ ಚುನಾವಣೆಗೆ ಸಿದ್ಧತೆ ಆರಂಭಿಸಲಾಗುವುದು. ಸಿದ್ಧತೆ ಮತ್ತು ಚುನಾವಣಾ ತಯಾರಿಗೆ ಎರಡು ಮೂರು ತಿಂಗಳು ಬೇಕಾಗುತ್ತದೆ.
ಹೀಗಾಗಿ ದಸರಾ ನಂತರ ಈ ವರ್ಷದ ನವೆಂಬರ್ ನಲ್ಲಿ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.
ಇದನ್ನೂ ನೋಡಿ: ಫ್ಯಾಸಿಸಂ ವಿರುದ್ಧ ವಿಜಯದ 80 ವರ್ಷಗಳ ನಂತರ ಈಗ ಅದನ್ನು ಯಾಕೆ ನೆನಪಿಸಿಕೊಳ್ಳಬೇಕು ?