ಕೆ.ಆರ್.ಪುರ: ಬೀದಿಬದಿಗಳಲ್ಲಿ ಪ್ರಮುಖ ರಸ್ತೆಗಳ ಬದಿಯಲ್ಲಿ ಕಸ ಕಸದ ರಾಶಿ ಬಿದ್ದಿದೆ. ಈ ಬಗ್ಗೆ ಯಾವುದೇ ಕ್ರಮ ವಹಿಸದ ಬಿದರಹಳ್ಳಿ ಪಂಚಾಯಿತಿ ವಿರುದ್ಧ ಸ್ಥಳೀಯರು ಅಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಮುಖ ಬಿದಿ ಬದಿಗಳಲ್ಲಿ ಹಸಿ ಮತ್ತು ಒಣ ತ್ಯಾಜ್ಯ, ನಿರ್ಮಾಣ ಹಂತದ ಕಟ್ಟಡಗಳ ತ್ಯಾಜ್ಯ, ಪ್ಲಾಸ್ಟಿಕ್ ತ್ಯಾಜ್ಯ ತಂದು ಸುರಿಯಲಾಗುತ್ತಿದೆ. ಗ್ರಾಮ ಪಂಚಾಯತಿ ಸರಿಯಾದ ರೀತಿಯಲ್ಲಿ ಕಸ ನಿರ್ವಹಣೆ ಮಾಡುತ್ತಿಲ್ಲ. ಬಿದರಹಳ್ಳಿ ಸುತ್ತಮುತ್ತಲಿನ ಪ್ರದೇಶದಲ್ಲಿ ಹೊಸ ಬಡಾವಣೆಗಳು ತಲೆ ಎತ್ತಿವೆ. ಇದರಿಂದ ಕಸದ ಸಮಸ್ಯೆ ಇನ್ನಷ್ಟು ಹೆಚ್ಚಾಗಿದೆ ಎಂದು ಸ್ಥಳೀಯರು ದೂರಿದರು.
ಇದನ್ನೂ ಓದಿ: ಅವರು ಆರ್‌ಎಸ್‌ಎಸ್ ಗೀತೆ ಹಾಡಬಹುದು, ಏನು ಬೇಕಾದರೂ ಮಾಡಬಹುದು ನಾವು ಏನೂ ಮಾತಾಡುವಂತಿಲ್ಲ ನಾವು ಎನೂ ಮಾತಾಡುವಂತಿಲ್ಲ
