ಬೆಳಗಾವಿ: ಪ್ರವರ್ಗ 2ಎ ಮೀಸಲಾತಿಗಾಗಿ ಒತ್ತಾಯಿಸಿ ಪಂಚಮಸಾಲಿ ಸಮುದಾಯ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಹೋರಾಟಗಾರರ ಮೇಲೆ ಲಾಠಿಚಾರ್ಜ್ ಪ್ರಯೋಗಿಸಿರುವ ಸರ್ಕಾರ ಕೂಡಲೇ ಕ್ಷಮೆ ಯಾಚಿಸಬೇಕು ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ ಒತ್ತಾಯಿಸಿದರು.
ಈ ಕುರಿತು ಸುವರ್ಣಸೌಧದ ಡಾ. ಬಿ. ಆರ್. ಅಂಬೇಡ್ಕರ್ ಪ್ರತಿಮೆ ಬಳಿ ಗುರುವಾರ ಮಾತನಾಡಿರುವ ಅವರು, ‘2ಎ ಪ್ರವರ್ಗದ ಮೀಸಲಾತಿಗಾಗಿ ನಡೆಸುತ್ತಿರುವ ಹೋರಾಟವನ್ನು ಹತ್ತಿಕ್ಕುವ ದುರಾದ್ದೇಶದಿಂದ ಚಳುವಳಿ ವಿರತ ಹೋರಾಟಗಾರರ ಮೇಲೆ ಲಾಠಿಚಾರ್ಜ್ ಪ್ರಯೋಗಿಸಿರುವ ಕಾಂಗ್ರೆಸ್ ಸರ್ಕಾರದ ಕ್ರಮ ಖಂಡಿಸಿತ್ತೇನೆ’ ಎಂದರು.
ಇದನ್ನೂ ಓದಿ : ಪಂಚಮಸಾಲಿಗೆ ಯಾವುದೇ ಕಾರಣಕ್ಕೂ ಮೀಸಲಾತಿ ನೀಡಬೇಡಿ: ಸಿಎಂ ಗೆ ಮನವಿ
‘ಪ್ರಜಾಪ್ರಭುತ್ವದ ವ್ಯವಸ್ಥೆಯ ಮೇಲೆ ವಿಶ್ವಾಸವಿಲ್ಲವೆಂಬಂತೆ ನಡೆದುಕೊಳ್ಳುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿ ಹೋರಾಟಗಳನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ. ಮುಖ್ಯಮಂತ್ರಿಗಳು ಈ ಕೂಡಲೇ ಪಂಚಮಸಾಲಿ ಸಮಾಜದ ಕ್ಷಮೆ ಯಾಚಿಸಿ, ದಬ್ಬಾಳಿಕ ನಡೆಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಕೂಡಲಸಂಗಮ ಪಂಚಮಸಾಲಿ ಗುರುಪೀಠದ ಪರಮಪೂಜ್ಯ ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಸುವರ್ಣ ಸೌಧದ ಮುಂಭಾಗದಲ್ಲಿ ನಡೆಯುತ್ತಿರುವ ಪ್ರತಿಭಟನಾ ಸಮಾವೇಶ ಸ್ಥಳಕ್ಕೆ ಭೇಟಿ ನೀಡಿ ಹೋರಾಟಕ್ಕೆ ಈ ಮುಂಚೆ ಬೆಂಬಲ ಸೂಚಿಸಿದ್ದರು. ಪ್ರತಿಭಟನೆ
ಇದನ್ನೂ ನೋಡಿ : ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಬೇಡ: ಹಿಂದುಳಿದ ಜಾತಿಗಳ ಒಕ್ಕೂಟ ಮನವಿ Janashakthi Media