ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಸಮುದಾಯ ಹೋರಾಟ: ಲಾಠಿ ಏಟಿಗೆ 20ಕ್ಕೂ ಹೆಚ್ಚು ಜನರು ಗಂಭೀರವಗಿ ಗಾಯ

ಬೆಳಗಾವಿ: ಪಂಚಮಸಾಲಿ ಸಮುದಾಯದವರು 2ಎ ಮೀಸಲಾತಿಗಾಗಿ ಒತ್ತಾಯಿಸಿ ಬೆಳಗಾವಿಯಲ್ಲಿ ನಡೆಸುತ್ತಿರುವ ಹೋರಾಟ ಹಿಂಸಾಚಾರಕ್ಕೆ ತಿರುಗಿದೆ. ಸುವರ್ಣಸೌಧದ ಬಳಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದು, ಪ್ರತಿಭಟನಾಕಾರರ ಗುಂಪು ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದೆ.

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗಾಗಿ ಆಗ್ರಹಿಸಿ ಕೂಡಲಸಂಗಮ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪಂಚಮಸಾಲಿ ಸಮುದಾಯದವರು ಪ್ರತಿಭಟನೆ ತೀವ್ರಗೊಳಿಸಿದ್ದು, ಈ ವೇಳೆ ಪ್ರತಿಭಟನಾಕಾರರ ಗುಂಪು ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದೆ.

ಬ್ಯಾರಿಕೇಡ್ ಗಳನ್ನು ಪೊಲೀಸರನ್ನು ತಳ್ಳಿ ಸುವರ್ಣಸೌಧದತ್ತ ಮುನ್ನುಗ್ಗಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ತಡೆಯಲು ಯತ್ನಿಸಿದ್ದಾರೆ. ಪೊಲೀಸರ ಮೇಲೆ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದಾರೆ. ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.

ಇದನ್ನೂ ಓದಿ : ಗುತ್ತಿಗೆ ಕಾರ್ಮಿಕರನ್ನು ಖಾಯಂ ಗೊಳಿಸಿ; ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು: ಸಿಐಟಿಯು ನೇತ್ರತ್ವದಲ್ಲಿ ಮುನಿಸಿಪಲ್ ಮತ್ತು ಅಸ್ವತ್ರೆ ಕಾರ್ಮಿಕರ ಬೃಹತ್ ಮೇರವಣಿಗೆ

ಲಾಠಿ ಏಟಿಗೆ 20ಕ್ಕೂ ಹೆಚ್ಚು ಜನರು ಗಂಭೀರವಗಿ ಗಾಯಗೊಂಡಿದ್ದಾರೆ. ಲಾಠಿ ಚಾರ್ಜ್ ಮಾಡುತ್ತಿದ್ದಂತೆ ಮತ್ತೊಂದೆಡೆ ಪ್ರತಿಭಟನಾಕಾರರ ಆಕ್ರೋಶ ಮತ್ತಷ್ಟು ಹೆಚ್ಚಿದ್ದು, ಸಿಕ್ಕ ಸಿಕ್ಕ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಪೊಲೀಸರ ವಾಹನಗಳು, ಕಾರುಗಳ ಗಾಜು ಪುಡಿಪುಡಿಯಾಗಿವೆ. ಘಟನೆಯಲ್ಲಿ ಹಲವು ಪೊಲೀಸರು ಗಾಯಗೊಂಡಿದ್ದಾರೆ.

ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗುತ್ತಿದ್ದಂತೆ ಪೊಲೀಸರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಹಾಗೂ ಶಾಸಕರಾದ ಯತ್ನಾಳ್, ಅರವಿಂದ್ ಬೆಲ್ಲದ್ ಅವರಿಗೆ ಪ್ರತಿಭಟನೆ ಹಿಂಪಡೆಯುವಂತೆ ಮನವಿ ಮಾಡಿದ್ದಾರೆ. ಆದಾಗ್ಯೂ ಪ್ರತಿಭಟನೆಯನ್ನು ಮುಂದುವರೆಸುತ್ತಿದ್ದಂತೆ ಪೊಲೀಸರು, ಸ್ವಾಮೀಜಿ ಹಾಗೂ ಶಾಸಕ ಯತ್ನಾಳ್‌, ಬೆಲ್ಲದ್ ಸೇರಿ ಹಲವು ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ.

ಇನ್ನೊಂದೆಡೆ ಪೊಲೀಸರ ಕ್ರಮ ಖಂಡಿಸಿ, ಹಾಗೂ ನಮಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಪಂಚಮಸಾಲಿ ಸಮುದಾಯದ ವಕೀಲರು ಸುವರ್ಣಸೌಧದ ಬಳಿ ಹದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ. ಹೆದ್ದಾರಿಯಲ್ಲಿ ಕಿಲೋಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್ ಸಂಭವಿಸಿದ್ದು ವಾಹನ ಸವಾರರು ಪರದಾಟ ನಡೆಸಿದ್ದಾರೆ. ಪ್ರತಿಭಟನೆ ತೀವ್ರಸ್ವರೂಪ ಪಡೆದ ಕಾರಣ ಸುವರ್ಣಸೌಧದ ಬಳಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ.

ಇದನ್ನೂ ನೋಡಿ : ಕೋವಿಡ್‌ ಹಣ ತಿಂದವರನ್ನು ಬಿಡಲ್ಲ: ಡಿಸಿಎಂ ಡಿಕೆ ಶಿವಕುಮಾರ್ Janashakthi Media

Donate Janashakthi Media

Leave a Reply

Your email address will not be published. Required fields are marked *