ಪಾಣಿ‌ಪತ್‌:ಕುಟುಂಬ ಸದಸ್ಯರ ಎದುರೇ ಮೂವರು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ

ಚಂಡೀಗಢ: ಕುಟುಂಬ ಸದಸ್ಯರ ಎದುರೇ ಮೂವರು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ವರದಿಯಾಗಿದೆ. ಮಹಿಳೆಯರ

ಈ ಘಟನೆ ಬುಧವಾರ ತಡರಾತ್ರಿ ಹರಿಯಾಣದ ಪಾಣಿಪತ್‌ನಲ್ಲಿ  ನಡೆದಿದೆ, ಆರೋಪಿಗಳು ನಾಲ್ಕು ಕುಟುಂಬಗಳು ವಾಸಿಸುತ್ತಿದ್ದ ಮನೆಗೆ ನುಗ್ಗಿ ಅತ್ಯಾಚಾರ ಮಾಡುವ ಮೊದಲು ಮೂವರು ಮಹಿಳೆಯ ಕುಟುಂಬ ಸದಸ್ಯರನ್ನು ಹಗ್ಗಗಳಿಂದ ಕಟ್ಟಿಹಾಕಿದ್ದರು. ಆರೋಪಿಗಳು ನಗದು ಹಾಗೂ ಚಿನ್ನಾಭರಣ ದೋಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ:ಆಜ್‌ತಕ್ ಟಿವಿಯಲ್ಲಿ ಗೋಡ್ಸೆಯ ‘ದೇಶಭಕ್ತಿ’ ಬಗ್ಗೆ ಮತ್ತೆ ಪ್ರತಿಪಾದಿಸಿದ ಶಂಕಿತ ಭಯೋತ್ಪಾದಕಿ ಪ್ರಜ್ಞಾ ಠಾಕೂರ್!

ಆರೋಪಿಗಳು ಚಾಕುಗಳು ಮತ್ತು ಇತರ ಹರಿತವಾದ ಆಯುಧಗಳಿಂದ ಶಸ್ತ್ರಸಜ್ಜಿತರಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಸಾಮೂಹಿಕ ಅತ್ಯಾಚಾರ ಸಂಭವಿಸಿದ  ಸ್ಥಳದಿಂದ ಸುಮಾರು ಒಂದು ಕಿಮೀ ದೂರದಲ್ಲಿ ಬುಧವಾರ ತಡರಾತ್ರಿ ನಡೆದ ಪ್ರತ್ಯೇಕ ಘಟನೆಯಲ್ಲಿ, ಅಸ್ವಸ್ಥ ಮಹಿಳೆಯ ಮೇಲೆ ದಾಳಿ ಮಾಡಲಾಗಿದ್ದು, ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ, ಆಕೆಯ ಪತಿ ಬಳಿ ಇದ್ದ ಎಲ್ಲಾ ಬೆಲೆಬಾಳುವ ವಸ್ತುಗಳನ್ನು ಕದ್ದು ಆರೋಪಿಗಳು ಪರಾರಿಯಾಗಿದ್ದಾರೆ.

ಈ ಎರಡು ಘಟನೆಗಳು ಒಂದೇ ಗ್ರಾಮದಲ್ಲಿ ನಡೆದಿವೆ ಎಂದು ಪೊಲೀಸರು ಹೇಳಿದ್ದಾರೆ. ಈ ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ವಿಡಿಯೋ ನೋಡಿ:ಒಂದು ದೇಶ, ಒಂದು ಚುನಾವಣೆ : ಬಿಜೆಪಿ ಸರ್ಕಾರದ ಗುಪ್ತ ಅಜೆಂಡವೇನು? ಈ ವಾರದ ನೋಟ ಕಾರ್ಯಕ್ರಮದಲ್ಲಿ

Donate Janashakthi Media

Leave a Reply

Your email address will not be published. Required fields are marked *