ಪರಶುರಾಮ ಥೀಂ ಪಾರ್ಕ್ ಹಗರಣ; ಸಿಐಡಿ ತನಿಖೆಗೆ ಆದೇಶ

ಉಡುಪಿ :  ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಎರ್ಲಪಾಡಿ ಗ್ರಾಮದ ಬೈಲೂರಿನ ಪರಶುರಾಮ ಥೀಮ್‌ ಪಾರ್ಕ್‌ ನಿರ್ಮಾಣ ಕಾಮಗಾರಿಯಲ್ಲಿ ಆಗಿರುವ ಕಳಪೆ ಹಾಗೂ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು  ಸಿಎಂ ಸಿದ್ದರಾಮಯ್ಯ ಸಿಐಡಿಗೆ ಆದೇಶಿಸಿದ್ದಾರೆ.

ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಅವರ ಶಿಫಾರಸ್ಸಿನಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೀಗ ಸಿಐಡಿ ತನಿಖೆಗೆ ಆದೇಶಿಸಿದ್ದಾರೆ. ಇದೇ 2ರಂದು ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಆರ್.‌ ಹೆಬ್ಬಾಳ್ಕರ್ ಅವರು, ಥೀಮ್‌ ಪಾರ್ಕ್‌ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದಂತೆ ತನಿಖೆ ನಡೆಸುವಂತೆ ಮುಖ್ಯಮಂತ್ರಿಯವರಿಗೆ ಪತ್ರ ಬರೆದು ಮನವಿ ಮಾಡಿದ್ದರು. ಅದರಂತೆ ಈಗ ಮುಖ್ಯಮಂತ್ರಿ ತನಿಖೆಗೆ ಆದೇಶ ಹೊರಡಿಸಿದ್ದಾರೆ. ಪರಶುರಾಮ‌ ಥೀಮ್‌ ಪಾರ್ಕ್‌ ಕಾಮಗಾರಿಯಲ್ಲಿ ನಡೆದ ಕಳಪೆ ಕಾಮಗಾರಿ ಹಾಗೂ ಅವ್ಯವಹಾರದ ಬಗ್ಗೆ, ಜೊತೆಗೆ ಧಾರ್ಮಿಕ ಭಾವನೆಗಳಿಗೆ ಅಪಪ್ರಚಾರವಾಗಿರುವ ಸಂಬಂಧ ಸಾರ್ವಜನಿಕರಿಂದ ಭಾರೀ ದೂರು ಕೇಳಿ ಬಂದಿತ್ತು.

ಇದನ್ನು ಓದಿ : ಛತ್ತೀಸ್‌ಗಢ | ಹಸ್‌ದೇವ್‌ ಅರಣ್ಯದಲ್ಲಿ ಗಣಿಗಾರಿಕೆಗೆ ವಿರೋಧ; 30 ಕಾಂಗ್ರೆಸ್ ಶಾಸಕರ ಅಮಾನತು

ಈ ಕುರಿತು ಆದೇಶ ಪತ್ರ ಹೊರಡಿಸಿರುವ ಮುಖ್ಯಮಂತ್ರಿಗಳು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರ ಪತ್ರವನ್ನು ಉಲ್ಲೇಖಿಸಿ ಕಾರ್ಕಳ ತಾಲೂಕಿನ ಎರ್ಲಪಾಡಿ ಗ್ರಾಮದ ಬೈಲೂರಿನಲ್ಲಿರುವ ಪರಶುರಾಮ ಥೀಂ ಪಾರ್ಕ್ ಕಾಮಗಾರಿಯಲ್ಲಿ ಭ್ರಷ್ಠಾಚಾರ ಹಾಗೂ ಕಳಪೆ ಕಾಮಗಾರಿ ನಡೆದಿರುವುದಾಗಿ ಹಾಗೂ ಧಾರ್ಮಿಕ ಭಾವನೆಗಳಿಗೆ ಅಪಚಾರವಾಗುತ್ತಿರುವ ಬಗ್ಗೆ ಪರವಿರೋಧ ಚರ್ಚೆಗಳು ನಡೆಯು್ತಿರುವ ಕುರಿತು ವಿವಿಧ ದ್ರಶ್ಯ ಮಾಧ್ಯಮ ಮತ್ತು ದಿನಪತ್ರಿಕೆಗೆಗಳು ವರದಿ ಮಾಡಿದ್ದು ಇದರ ಸತ್ಯಾಸತ್ಯಗೆಯನ್ನು ಪರಿಶೀಲಿಸಿಲು ಸಿಐಡಿ ತನಿಖೆಗೆ ಆದೇಶಿಸಿದ್ದಾರೆ.

ಕಾರ್ಕಳ ತಾಲೂಕಿನ ಬೈಲೂರಿನ ಉಮಿ ಕುಂಜ ಬೆಟ್ಟದ ಮೇಲೆ ಪರಶುರಾಮ ಥೀಮ್ ಪಾರ್ಕ್ ಅನ್ನು ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, 2023ರ ಜ. 17ರಂದು ಉದ್ಘಾಟಿಸಿದ್ದರು. ಇಡೀ ಥೀಮ್ ಪಾರ್ಕ್ ಅನ್ನು 15 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದ್ದು, ಅದರಲ್ಲಿ ಬೃಹತ್ತಾದ ಪರಶುರಾಮನ ಪುತ್ಥಳಿ, ಬಯಲು ರಂಗ ಮಂದಿರ, ಆರ್ಟ್ ಗ್ಯಾಲರಿ, ಭಜನಾ ಮಂದಿರವನ್ನ ನಿರ್ಮಿಸಲಾಗಿತ್ತು.

ಈ ಮೂರ್ತಿಗೆ ಕಂಚು ಮತ್ತು ಉಕ್ಕು ಬಳಸಲಾಗಿದೆ ಎಂದು ಹೇಳಲಾಗಿತ್ತು. ಆದರೆ, ಕಾಂಗ್ರೆಸ್ ನಾಯಕರು ಈ ಪುತ್ಥಳಿಯನ್ನು ಫೈಬರ್‌ನಿಂದ ನಿರ್ಮಿಸಲಾಗಿದ್ದು, ಕಂಚು, ಉಕ್ಕು ಬಳಸಲಾಗಿದೆ ಎಂದು ಹೇಳಿ ಆ ಹಣವನ್ನು ಈ ಥೀಮ್ ಪಾರ್ಕ್ ನಿರ್ಮಿಸುವ ಜವಾಬ್ದಾರಿ ಹೊತ್ತಿದ್ದ ಸ್ಥಳೀಯ ಶಾಸಕರು ಹಾಗೂ ಮಾಜಿ ಸಚಿವರಾದ ಸುನಿಲ್ ಕುಮಾರ್ ಅವರು ಲೂಟಿ ಮಾಡಿದ್ದಾರೆ ಎಂದು ಸ್ಥಳೀಯ ಕಾಂಗ್ರೆಸ್‌ ನಾಯಕರು ಆರೋಪಿಸಿದ್ದು, ಇದೀಗ ಬಿಜೆಪಿ ನಾಯಕರಿಗೆ ಸಂಕಷ್ಟ ಎದುರಾಗಿದೆ.

ಇದನ್ನು ನೋಡಿ : ನ್ಯಾಶನಲ್ ಕಾಲೇಜ್ ಮುಂದೆ ಜನಾಕ್ರೋಶ :ಡಾ. ರವಿ ಬಾಗಿ ವರ್ಗಾವಣೆ ಹಿಂಪಡೆದ ಆಡಳಿತ ಮಂಡಳಿ Janashakthi Media

Donate Janashakthi Media

Leave a Reply

Your email address will not be published. Required fields are marked *