ಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ ಆರಂಭ; ವಕ್ಫ್ ಆಸ್ತಿ ಕಾಯ್ದೆ ತಿದ್ದುಪಡಿ

ನವದೆಹಲಿ:  ನವೆಂಬರ್ 25 ರಿಂದ ಸಂಸತ್ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಡಿಸೆಂಬರ್​ 20ರವರೆಗೆ ನಡೆಯಲಿದೆ. ಈ ಅಧಿವೇಶನದಲ್ಲಿ, ಸರ್ಕಾರ ಪ್ರಸ್ತಾಪಿಸಿದ ಹಲವಾರು ಪ್ರಮುಖ ಮಸೂದೆಗಳ ಅಂಗೀಕಾರವನ್ನು ಪ್ರತಿಪಕ್ಷಗಳು ಪ್ರತಿಭಟಿಸುವ ಸಾಧ್ಯತೆಯಿದೆ.

ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟ ಮತ್ತು ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ನಡುವೆ ಭಾರೀ ವಾಕ್ಸ‌ಮರಕ್ಕೆ ವೇದಿಕೆಯಾಗುವ ಎಲ್ಲಾ ಸಾಧ್ಯತೆಗಳಿರುವ ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೆ ಇಂದು ಚಾಲನೆ ಸಿಗಲಿದೆ.

ಅಧಿವೇಶನದಲ್ಲಿ ಒಟ್ಟು 16 ಮಸೂದೆ ಮಂಡಿಸಲು ಸರ್ಕಾರ ಸಿದ್ಧತೆ ನಡೆಸಿದೆ. ಸಂವಿಧಾನವನ್ನು ಅಂಗೀಕರಿಸಿದ 75 ನೇ ವಾರ್ಷಿಕೋತ್ಸವದ ಅಂಗವಾಗಿ ನವೆಂಬರ್ 26 ರಂದು ಸಂವಿಧಾನ ದಿನವಾಗಿ ಆಚರಿಸಲಾಗುವ ಸಂವಿಧಾನ್ ಸದನದ ಸೆಂಟ್ರಲ್ ಹಾಲ್ನಲ್ಲಿ ವಿಶೇಷ ಆಚರಣೆ ನಡೆಯಲಿದೆ ಎಂದು ರಿಜಿಜು ಹೇಳಿದರು.

ಇದನ್ನೂ ಓದಿ: ಮಹಾರಾಷ್ಟ್ರ| ಮುಖ್ಯಮಂತ್ರಿ ಹುದ್ದೆಗೆ ಹಕ್ಕು ಮಂಡಿಸಿದ ಏಕನಾಥ್ ಶಿಂಧೆ

‘ಒಂದು ರಾಷ್ಟ್ರ ಒಂದು ಚುನಾವಣೆ ಮತ್ತು ವಕ್ಫ್ ಆಸ್ತಿ ಕಾಯ್ದೆಗೆ ತಿದ್ದುಪಡಿಗಳು ಸೇರಿದಂತೆ ಹಲವಾರು ವಿವಾದಾತ್ಮಕ ಶಾಸನಾತ್ಮಕ ಪ್ರಸ್ತಾವಗಳೊಂದಿಗೆ ಸರ್ಕಾರ ಮುಂದುವರಿಯುತ್ತಿರುವುದರಿಂದ ಸಂಸತ್ತಿನಲ್ಲಿ ರಾಜಕೀಯ ವಾತಾವರಣವು ಉಲ್ಬಣಗೊಳ್ಳುವ ನಿರೀಕ್ಷೆಯಿದೆ.

ಇದರ ಜೊತೆಗೆ ಇತ್ತೀಚಿನ ಮಣಿಪುರ ಗಲಭೆ ವಿಷಯ, ಆಹಾರ ಧಾನ್ಯಗಳ ಬೆಲೆ ಏರಿಕ ಮತ್ತಿತರ ವಿಷಯಗಳನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ವಿಪಕ್ಷಗಳು ಪ್ರತಿಭಟನೆ ನಡೆಸಲು ಸಜ್ಜಾಗಿವೆ. ಹೀಗಾಗಿ ಮೊದಲ ದಿನದಿಂದಲೇ ಕಲಾಪಗಳು ಕಾವೇರುವ ನಿರೀಕ್ಷೆಯಿದೆ.

ಇದನ್ನೂ ನೋಡಿ: ವಚನಾನುಭವ 20 | ಕಾಣದ ಠಾವಿನಲ್ಲಿ | ಮನುಷ್ಯನೊಳಗಿನ ಕಲ್ಮಷ ತೊಳೆದ ಬಸವಣ್ಣ – ಮೀನಾಕ್ಷಿ ಬಾಳಿ Janashakthi Media

Donate Janashakthi Media

Leave a Reply

Your email address will not be published. Required fields are marked *