ಹುಬ್ಬಳ್ಳಿ: ಪ್ರಯಾಣಿಕನೊಬ್ಬ ವಿಮಾನದ ತುರ್ತು ನಿರ್ಗಮನ ಬಾಗಿಲು ತೆರೆದು ಸಹಪ್ರಯಾಣಿಕರಲ್ಲಿ ಆತಂಕ ಸೃಷ್ಟಿಸಿದ ಘಟನೆ ಸೆಪ್ಟೆಂಬರ್ 12 ಸಂಜೆ ನಗರದ ವಿಮಾನ ನಿಲ್ದಾಣದ ಅಪ್ರೊನ್ ರ‍್ಯಾಂಪ್ ಬೇನಲ್ಲಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಬೆಳಗಾವಿಯ ಶಹಾಪುರದ ನಿರಂಜನ ಎಂಬಾತ ವಿಮಾನದ ತುರ್ತು ನಿರ್ಗಮನ ಬಾಗಿಲು ತೆರೆದು ಆತಂಕ ಸೃಷ್ಟಿಸಿದ ಪ್ರಯಾಣಿಕ ಎಂದು ಗುರುತಸಲಾಗಿದೆ.
ಇದನ್ನೂ ಓದಿ: ಖರೀದಿದಾರರು ಇಲ್ಲವೆಂದು ಹರಾಜು ಬಂದ್: ಬೀದಿಗೆ ಬೆಳ್ಳುಳ್ಳಿ ಸುರಿದು ರೈತರು ಪ್ರತಿಭಟನೆ
ನಿರಂಜನ ಹುಬ್ಬಳ್ಳಿಯಿಂದ ಪುಣೆಗೆ ಹೊರಟಿದ್ದ. ನಗರದ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನ ಏರಿ, ತನ್ನ ಆಸನದ ಪಕ್ಕದಲ್ಲೇ ಇದ್ದ ತುರ್ತು ನಿರ್ಗಮನ ಬಾಗಿಲನ್ನು ತೆರೆದಿದ್ದಾನೆ.
ಇದರಿಂದ ಸಹಪ್ರಯಾಣಿಕರು ಕೆಲಕಾಲ ಆತಂಕಕ್ಕೊಳಗಾಗುವಂತಾಯಿತು ಎಂದು ವಿಮಾನ ನಿಲ್ದಾಣದ ಸಿಬ್ಬಂದಿ ದೂರು ಕೊಟ್ಟಿದ್ದಾರೆ. ಈ ಕುರಿತು ಗೋಕುಲ ರೋಡ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ನೋಡಿ: ಪರಿಷ್ಕೃತ ಜಿಎಸ್ ಟಿ : ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ? Janashakthi Media
