ಬೆಳಗಾವಿ : ಭಾನುವಾರ ಸಂಜೆ ಬೆಂಗಳೂರಿನಿಂದ ಬೆಳಗಾವಿಗೆ ಬಂದ ಇಂಡಿಗೋ ವಿಮಾನ ಸಿಬ್ಬಂದಿ ಸುಮಾರು 22 ಹೆಚ್ಚು ಪ್ರಯಾಣಿಕರ ಲಗೇಜನ್ನು ಬೆಂಗಳೂರಿನಲ್ಲೇ ಬಿಟ್ಟು ಬಂದಿದ್ದು ಪ್ರಯಾಣಿಕರು ಪರದಾಡಿದ ಘಟನೆ ನಡೆದಿದೆ. ಲಗೇಜು
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡ ವಿಮಾನದಲ್ಲಿ ಆಗಮಿಸಿದ್ದು, ಅವರ ಬ್ಯಾಗ್ ಕೂಡ ವಿಮಾನದಲ್ಲಿ ಇರಲಿಲ್ಲ ಎನ್ನಲಾಗಿದೆ. ಬೆಳಗಾವಿಗೆ ಬಂದು ಇಳಿಯುವವರೆಗೆ ಬ್ಯಾಗ್ ತಂದಿಲ್ಲ ಎಂಬುದರ ಕುರಿತು ಯಾರಿಗೂ ಮಾಹಿತಿ ನೀಡಿರಲಿಲ್ಲ. ಲಗೇಜು
ಭಾನುವಾರ ಸಂಜೆ 5. 55ಕ್ಕೆ ಬೆಂಗಳೂರಿನಿಂದ ಹೊರಟ ವಿಮಾನದಲ್ಲಿ ಮಲೇಷಿಯನ್ ವಿದ್ಯಾರ್ಥಿಗಳು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರಿದ್ದರು. ವಿಮಾನ ರಾತ್ರಿ 7. 30 ಗಂಟೆಗೆ ಬೆಳಗಾವಿಗೆ ಬಂದಿಳಿಯುತ್ತಿದ್ದಂತೆ ಪ್ರಯಾಣಿಕರಿಗೆ ಬಿಗ್ ಶಾಕ್ ಕಾದಿತ್ತು. ನಂತರ ಪರಿಶೀಲನೆ ನಡೆಸಿದಾಗ ಸುಮಾರು 22 ಕ್ಕೂ ಹೆಚ್ಚು ಪ್ರಯಾಣಿಕರ ಬ್ಯಾಗ್ ಗಳು ಬಂದಿರಲಿಲ್ಲ.
ಇದನ್ನು ಓದಿ : ರಾಜ್ಯ ಉನ್ನತ ಶಿಕ್ಷಣ ಅಕಾಡೆಮಿ ನಿರ್ದೇಶಕರಾಗಿ ನಿವೃತ್ತ ಪ್ರಾಧ್ಯಾಪಕ ಡಾ.ಎಂ. ಚಂದ್ರ ಪೂಜಾರಿ ನೇಮಕ
ಈ ಕುರಿತು ಇಂಡಿಗೋ ವಿಮಾನ ಸಿಬ್ಬಂದಿಯನ್ನು ಪ್ರಯಾಣಿಕರು ವಿಚಾರಿಸಿದಾಗ ಮಲೇಷಿಯನ್ ವಿದ್ಯಾರ್ಥಿಗಳ ಬ್ಯಾಗ್ ಗಳು ಬಹಳ ದೊಡ್ಡದಿದ್ದವು. ಹಾಗಾಗಿ ಬೇರೆ ಪ್ರಯಾಣಿಕರ ಬ್ಯಾಗ್ ಗಳನ್ನು ತರಲು ಸಾಧ್ಯವಾಗಿಲ್ಲ. ನಿಮ್ಮ ಬ್ಯಾಗ್ ಗಳನ್ನು ನಾಳೆ ತರಿಸಿಕೊಡುತ್ತೇವೆ ಎಂದು ಉಡಾಫೆ ಉತ್ತರ ನೀಡಿದ್ದಾರೆ. ಇದರಿಂದ ಆಕ್ರೋಶಗೊಂಡ ಪ್ರಯಾಣಿಕರು ವಿಮಾನ ಸಿಬ್ಬಂದಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡು, ಪ್ರತಿಭಟನೆ ನಡೆಸಿದ್ದಾರೆ. ಲಗೇಜು