ರಜೆಯಲ್ಲಿ ಮಕ್ಕಳ ಸುರಕ್ಷತೆಗೆ ಗಮನ ನೀಡಿ: ಪಾಲಕರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮನವಿ

Please follow and like us:
ಬೆಳಗಾವಿ: ಹಾಸನ ಜಿಲ್ಲೆ ಆಲೂರು ಬಳಿ ನಾಲ್ವರು ಮಕ್ಕಳು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಕುರಿತು ತೀವ್ರ ಸಂತಾಪ ವ್ಯಕ್ತಪಡಿಸಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ರಜಾ ದಿನಗಳಲ್ಲಿ ಮಕ್ಕಳ ಸುರಕ್ಷತೆಗೆ ಹೆಚ್ಚಿನ ಗಮನ ನೀಡುವಂತೆ ಪಾಲಕರಲ್ಲಿ ಮನವಿ ಮಾಡಿದ್ದಾರೆ.

ರಜೆಯ ದಿನಗಳಲ್ಲಿ ವಿವಿಧ ರೀತಿಯ ದುರಂತಗಳಲ್ಲಿ ಮಕ್ಕಳ ಸಾವಿನ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಚಿವರು ಹೇಳಿಕೆ ನೀಡಿದ್ದಾರೆ. ಪ್ರತಿಯೊಬ್ಬರ ಜೀವ ಅತ್ಯಂತ ಅಮೂಲ್ಯವಾದದ್ದು. ಹಾಗಾಗಿ ಯಾವುದೇ ಸಂದರ್ಭದಲ್ಲಿ ನಿರ್ಲಕ್ಷ್ಯ ಮಾಡಬಾರದು. ಪಾಲಕರು ಸದಾ ಮಕ್ಕಳ ಚಟುವಟಿಕೆಗಳನ್ನು ಗಮನಿಸುತ್ತಿರಬೇಕು ಎಂದು ಲಕ್ಷ್ಮೀ ಹೆಬ್ಬಾಳಕರ್ ಮನವಿ ಮಾಡಿದ್ದಾರೆ.

ಇದನ್ನು ಓದಿ : ವಿದೇಶಕ್ಕೆ ಹೋದ ಮೇಲೆ ಪ್ರಜ್ವಲ್ ಸಂಪರ್ಕಿಸಲು ಸಾಧ್ಯವೇ? ಹೆಚ್‌.ಡಿ.ಕುಮಾರಸ್ವಾಮಿ

ಮಕ್ಕಳು ರಜಾ ಸಂದರ್ಭದಲ್ಲಿ ನೀರಿನಲ್ಲಿ ಆಟವಾಡಲು ತೆರಳುತ್ತಾರೆ. ಈ ವೇಳೆ ಸುರಕ್ಷಿತ ಜಾಗವನ್ನು ಆಯ್ಕೆ ಮಾಡಿಕೊಳ್ಳಬೇಕು. ಜೊತೆಗೆ ಪಾಲಕರೊಬ್ಬರು ಜೊತೆಯಲ್ಲಿರಬೇಕು. ಅಪ್ರಾಪ್ತ ವಯಸ್ಸಿನ ಮಕ್ಕಳು ವಾಹನ ಚಾಲನೆಯಿಂದ ದೂರವಿರಬೇಕು. ಇತರರು ಕೂಡ ಎಚ್ಚರಿಕೆಯಿಂದ ವಾಹನ ಓಡಿಸಬೇಕು. ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸುವಂತೆ ಪಾಲಕರು ತಿಳಿ ಹೇಳಬೇಕು. ಯಾವುದೇ ರೀತಿಯ ಚಟುವಟಿಕೆ ಸಂದರ್ಭದಲ್ಲಿ ಸುರಕ್ಷತೆಯ ಕಡೆ ಹೆಚ್ಚಿನ ಗಮನ ನೀಡಬೇಕು ಎಂದು ಸಚಿವರು ವಿನಂತಿಸಿದ್ದಾರೆ.

ಇದನ್ನು ನೋಡಿ : ಪಂಜಾಬ್ ಲೋಕಸಭೆ : ” ದೆಲ್ಲಿ ದಾರಿ ಬಂದ್ ಮಾಡಿದ್ದ ಬಿಜೆಪಿಗೆ ಹಳ್ಳಿ ದಾರಿ ಬಂದ್ ” ವ್ಯಾಪಕಗೊಂಡ ಅನ್ನದಾತರ ಆಕ್ರೋಶ

Please follow and like us:
Donate Janashakthi Media

Leave a Reply

Your email address will not be published. Required fields are marked *