ಜೋರ್ಹತ್/ಗೋಲಾಘಾಟ್: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಜಾದವ್ ಪೆಯಾಂಗ್ ಅವರು ನಿರ್ಮಿಸಿದ್ದ ಅರಣ್ಯಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಕಿಯಿಂದಾಗಿ ಸಾವಿರಾರು ಸಸ್ಯಗಳು ಸೇರಿದಂತೆ ಕೆಲವು ಪ್ರಾಣಿಗಳು ಸುಟ್ಟುಹೋಗಿವೆ. ಘಟನೆ ಸಂಬಂಧ ತನಿಖೆಗೆ ಆದೇಶಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ : ಕಟ್ಟಡವೊಂದರಲ್ಲಿ ಭೀಕರ ಅಗ್ನಿ ಅವಘಡ; ಹಲವು ಅಂಗಡಿಗಳು ಸುಟ್ಟು ಭಸ್ಮ
ಭಾನುವಾರ ಸಂಜೆ ದುಷ್ಕರ್ಮಿಗಳು ಪೆಯಾಂಗ್ ಅವರು ನಿರ್ಮಿಸಿರುವ ‘ಮೊಲೈ ಕಟೋನಿ’ ಎಂದು ಕರೆಯಲ್ಪಡುವ ಕಾಡಿಗೆ ಬೆಂಕಿ ಹಚ್ಚಿದ್ದಾರೆ ಎಂದು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಕಿ ಕಾಡ್ಗಿಚ್ಚಿನಂತೆ ಹರಡಿದ್ದರಿಂದ 2022ರಲ್ಲಿ ಪೆಯಾಂಗ್ ಮತ್ತು ಅವರ ಮಗಳು ನೆಟ್ಟಿದ್ದ 5,500ಕ್ಕೂ ಹೆಚ್ಚು ಸಸಿಗಳು ಬೆಂಕಿಗೆ ಆಹುತಿಯಾಗಿವೆ’ ಎಂದೂ ಅವರು ವಿವರಿಸಿದ್ದಾರೆ. ‘ಬ್ರಹ್ಮಪುತ್ರ ನದಿಯ ದಡದಲ್ಲಿ ಪೆಯಾಂಗ್ ಅವರು ‘ಮೊಲೈ ಕಟೋನಿ’ ಅರಣ್ಯವನ್ನು ನಿರ್ಮಿಸಿದ್ದಾರೆ.
‘ದುಷ್ಕರ್ಮಿಗಳು ಉದ್ದೇಶಪೂರ್ವಕವಾಗಿಯೇ ಅರಣ್ಯಕ್ಕೆ ಬೆಂಕಿ ಹಚ್ಚಿದ್ದಾರೆ’ ಎಂದು ಜಾದವ್ ಅವರ ಪುತ್ರಿ ಮುನ್ಮುನಿ ಪೆಯಾಂಗ್ ಬೇಸರ ಹೊರಹಾಕಿದ್ದಾರೆ.
ಇದನ್ನೂ ನೋಡಿ : ಕುವೆಂಪು ಜನ್ಮ ದಿನ | “ಬನ್ನಿ ಬನ್ನಿ ಲೋಕಗುರುಗಳೆಲ್ಲ ಬನ್ನಿ” ಹಾಡು : ಎಚ್.ವಿ. ನಟರಾಜ Janashakthi Media
