ಬೆಂಗಳೂರು: ರಾಜ್ಯದಲ್ಲಿ ಪಿಡಿಒ ನೇಮಕಾತಿ ಪರೀಕ್ಷೆಗಳನ್ನು 8ನೇ ಡಿಸೆಂಬರ್ 2024ರಂದು ನಡೆಸಲಾಗಿತ್ತು. ತುಮಕೂರಿನ ಕೇಂದ್ರದಲ್ಲಿ ಅಭ್ಯರ್ಥಿಯೊಬ್ಬ ಬ್ಯೂಟೂತ್ ಬಳಸಿ ಪರೀಕ್ಷೆ ಬರೆಯುತ್ತಿದ್ದ ಎಂಬ ಕಾರಣಕ್ಕೆ ಪೊಲೀಸರು ಆತನನ್ನು ಬಂಧಿಸಿದ್ದರು. ಪಿಡಿಒ
ಈ ಪ್ರಕರಣದ ಬೆನ್ನಲ್ಲೇ ಪಿಡಿಒ ನೇಮಕಾತಿ ಪ್ರಶ್ನೆ ಪತ್ರಿಕೆ ಲೀಕ್ ಆಗಿದೆ ಎಂಬ ಆರೋಪಗಳು ಸಹ ಕೇಳಿ ಬಂದಿದ್ದವು. ಈ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರೇ ಸ್ಪಷ್ಟನೆ ನೀಡಿದ್ದರು. ಕೆಲ ವಿದ್ಯಾರ್ಥಿಗಳು ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ಬೇರೆ ವಿದ್ಯಾರ್ಥಿಗಳನ್ನು ಪ್ರಚೋದಿಸಿದ, ಪ್ರತಿಭಟನೆ ಮಾಡಿದ 12 ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲಿಸಲಾಗಿದೆ.
ಪ್ರಶ್ನೆ ಪತ್ರಿಕೆ ನೀಡುವಲ್ಲಿ ವಿಳಂಬ ಸಹ ಆಗಿಲ್ಲ. ಉಪಸಮಿತಿ ಸಲ್ಲಿಸಲಿರುವ ವರದಿಯಲ್ಲಿ ಯಾರಿಗಾದರೂ ಅನ್ಯಾಯವಾಗಿದ್ದಲ್ಲಿ ಅವರಿಗೆ ನ್ಯಾಯ ಒದಗಿಸಲಾಗುವುದು ಎಂದು ಮುಖ್ಯಮಂತ್ರಿಗಳು ಹೇಳಿದ್ದರು.
ಇದನ್ನೂ ಓದಿ : ಡಿಜಿಟಲ್ ಬಂಧನಗಳೂ ಸೈಬರ್ ವಂಚನೆಯ ಜಾಲವೂ ತಂತ್ರಜ್ಞಾನದ ಅವಿಷ್ಕಾರಗಳಿಗೆ ಸಮಾನಾಂತರವಾಗಿ ಬೆಳೆಯುತ್ತಿರುವ ಡಿಜಿಟಲ್ ವಂಚಕ ಜಾಲಗಳು
ಇದೀಗ ಸಿಎಂ ಸಿದ್ಧರಾಮಯ್ಯ ಹೇಳಿಕೆ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದು ವೈರಲ್ ಆಗಿದೆ. ಈ ವಿಡಿಯೋವನ್ನು ಸಿಎಂ, ಸಚಿವರು ಮತ್ತು ವಿರೋಧ ಪಕ್ಷದ ನಾಯಕರಿಗೆ ಟ್ಯಾಗ್ ಮಾಡಿ, ಅಭ್ಯರ್ಥಿಗಳು ನ್ಯಾಯಕ್ಕಾಗಿ ಆಗ್ರಹಿಸುತ್ತಿದ್ದಾರೆ.
ಈ ವಿಡಿಯೋಗೆ ಕಮೆಂಟ್ ಮಾಡಿದ ನೆಟ್ಟಿಗರು, ಈ ಪರೀಕ್ಷಾ ಕೇಂದ್ರದಲ್ಲಿನ ಚಟುವಟಿಕೆಗಳನ್ನು ಗಮನಿಸಿದರೆ ಪರೀಕ್ಷೆಯು ಪಾರದರ್ಶಕವಾಗಿ, ಸುಸೂತ್ರವಾಗಿ ನಡೆದಿದೆ ಎನಿಸುವುದಿಲ್ಲ. ಹಲವು ಸಂಶಯ ಊಹಾಪೋಹಗಳಿಗೆ ಎಡೆಮಾಡಿಕೊಡುತ್ತದೆ. ಅಂದ ಹಾಗೇ ಪರೀಕ್ಷಾ ಕೇಂದ್ರದ ವಾತಾವರಣ ಈ ರೀತಿ ಇರಲೇಬಾರದು. ತ್ರಿಸದಸ್ಯ ಉಪಸಮಿತಿಯು ಈ ಬಗ್ಗೆ ತ್ವರಿತವಾಗಿ ವಿಚಾರಣೆ ನಡೆಸಿ ಸತ್ಯವನ್ನು ತಿಳಿಸಬೇಕು ಎಂದು ಆಗ್ರಹಿಸಿದ್ದಾರೆ.
PDO ಪ್ರಶ್ನೆ ಪತ್ರಿಕೆ ಸೋರಿಕೆಯಾಗಿಲ್ಲ ಎಂಬ ಮಾನ್ಯ ಮುಖ್ಯಮಂತ್ರಿಗಳ ಸುಳ್ಳು ಉತ್ತರಕ್ಕೆ ಅಭ್ಯರ್ಥಿಗಳು ಸೆರೆ ಹಿಡಿದಿರುವ ಸಾಕ್ಷಿ ನಿಜ ಕಣ್ಣು ಮುಂದೆ ಇದ್ದರು ತಮ್ಮ ತಪ್ಪನ್ನು ಮುಚ್ಚಿಕೊಳ್ಳಲು ಸುಳ್ಳುಗಳ ಸರಮಾಲೆಯನ್ನು ಹೆಣೆದಿರುವ KPSC😡 PDO ಮರು ಪರೀಕ್ಷೆ ಆಗಲೇ ಬೇಕು ಹಾಗೂ 12 ವಿದ್ಯಾರ್ಥಿಗಳ ಮೇಲೆ ಹಾಕಿರುವ FIR ಹಿಂಪಡೆಯಬೇಕು… pic.twitter.com/qnprxwritN
— Kanthakumar R / ಕಾಂತಕುಮಾರ್ ಆರ್ (@kanthakumarr) December 14, 2024
ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷರಾಗಿರುವ ಕಾಂತಕುಮಾರ್ ಆರ್, PDO ಪ್ರಶ್ನೆ ಪತ್ರಿಕೆ ಸೋರಿಕೆಯಾಗಿಲ್ಲ ಎಂಬ ಮಾನ್ಯ ಮುಖ್ಯಮಂತ್ರಿಗಳ ಸುಳ್ಳು ಉತ್ತರಕ್ಕೆ ಅಭ್ಯರ್ಥಿಗಳು ಸೆರೆ ಹಿಡಿದಿರುವ ಸಾಕ್ಷಿ. ನಿಜ ಕಣ್ಣು ಮುಂದೆ ಇದ್ದರು ತಮ್ಮ ತಪ್ಪನ್ನು ಮುಚ್ಚಿಕೊಳ್ಳಲು ಸುಳ್ಳುಗಳ ಸರಮಾಲೆಯನ್ನು ಹೆಣೆದಿರುವ KPSC, PDO ಮರು ಪರೀಕ್ಷೆ ಆಗಲೇ ಬೇಕು ಹಾಗೂ 12 ವಿದ್ಯಾರ್ಥಿಗಳ ಮೇಲೆ ಹಾಕಿರುವ FIR ಹಿಂಪಡೆಯಬೇಕು ಹಾಗೂ ಕರ್ತವ್ಯ ಲೋಪ ಎಸಗಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ನ್ಯಾಯ ಸಿಗುವವರೆಗೆ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ನೋಡಿ : ಬೆಳಗಾವಿ | ಕಬ್ಬು ಬೆಳೆಗೆ ಸೂಕ್ತ ದರ ನಿಗದಿ ಮಾಡಿ – ಕಬ್ಬು ಬೆಳೆಗಾರರ ಧರಣಿ Janashakthi Media