ಪಿಡಿಒ ಹುದ್ದೆ ನೇಮಕಾತಿ ಪರೀಕ್ಷೆ: ಬ್ಲೂಟೂತ್ ಸಾಧನ ಬಳಸಿ ಅಕ್ರಮ – ಅಭ್ಯರ್ಥಿ ಪೊಲೀಸ್ ವಶ

ಬೆಂಗಳೂರು: ಗ್ರಾಮೀಣ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹುದ್ದೆ ನೇಮಕಾತಿ ಪರೀಕ್ಷೆ ವೇಳೆ ತುಮಕೂರಿನ ಲಾ ಕಾಲೇಜಿನ ಪರೀಕ್ಷಾ ಕೇಂದ್ರವೊಂದರಲ್ಲಿ ಬ್ಲೂಟೂತ್ ಸಾಧನ ಬಳಸಿ ಅಕ್ರಮದಲ್ಲಿ ಭಾಗಿಯಾಗಿದ್ದ ಅಭ್ಯರ್ಥಿಯೊಬ್ಬನನ್ನು ಪತ್ತೆ ಹಚ್ಚಿರುವ ಸಿಬ್ಬಂದಿ, ಆತನನ್ನು ಪೊಲೀಸ್ ವಶಕ್ಕೆ ಒಪ್ಪಿಸಿದ್ದಾರೆ. ಪಿಡಿಒ 

ಈ ಹಿಂದೆ ಯಾದಗಿರಿ, ಕಲಬುರಗಿಯಲ್ಲಿ ಪಿಎಸ್‌ಐ, ಎಫ್‌ಡಿಎ ಪರೀಕ್ಷೆಯಲ್ಲೂ ಹೀಗೆ ಬ್ಲೂಟೂತ್‌ ಬಳಸಿ ಅಕ್ರಮ ನಡೆಸಿದ್ದು ಬೆಳಕಿಗೆ ಬಂದು ಭಾರೀ ಸುದ್ದಿಯಾಗಿತ್ತು. ಅದಾದ ಬಳಿಕ ಇಂಥ ಅಕ್ರಮ ತಡೆಯಲು ಸರ್ಕಾರ ನಾನಾ ಕ್ರಮ ಕೈಗೊಂಡಿತ್ತು . ಅದರ ಬೆನ್ನಲ್ಲೇ ಈ ಪ್ರಕರಣ ಬೆಳಕಿಗೆ ಬಂದಿದೆ.

ಭಾನುವಾರ ಪರೀಕ್ಷೆ ನಡೆಯುತ್ತಿದ್ದ ಸ್ಪರ್ಧಾತ್ಮಕ ಪರೀಕ್ಷೆ ವೇಳೆ ಅಭ್ಯರ್ಥಿ ಬ್ಲೂಟೂತ್ ಸಾಧನ ಬಳಸಿ ಅಕ್ರಮ ಮಾಡುತ್ತಿರುವುದನ್ನು ಸಿಸಿ ಕ್ಯಾಮೆರಾ ಕಂಟ್ರೋಲ್ ರೂಮ್‌ನಲ್ಲಿ ಕೂತು ವೀಕ್ಷಿಸುತ್ತಿದ್ದ ಸಿಬ್ಬಂದಿ ಗಮನಿಸಿದ್ದಾರೆ. ಕೂಡಲೇ ಕೊಠಡಿಗೆ ತೆರಳಿ ಆತನನ್ನು ವಿಚಾರಣೆ ನಡೆಸಲು ಮುಂದಾದಾಗ, ಆತ ನೆಪ ಹೇಳಿ ಪರಾರಿಯಾಗಲು ಯತ್ನಿಸಿದ್ದಾನೆ. ಆಗ ಆತನನ್ನು ಹಿಡಿದುಕೊಂಡ ಸಿಬ್ಬಂದಿ, ಭದ್ರತೆಗೆ ನಿಯೋಜನೆಗೊಂಡಿದ್ದ ಪೊಲೀಸ್ ವಶಕ್ಕೆ ಒಪ್ಪಿಸಿದ್ದಾರೆ.

ಇದನ್ನೂ ಓದಿ : ಶಾಲಾ ಪ್ರವಾಸಕ್ಕೆ ಬಂದಿದ್ದ ಬಸ್ ಪಲ್ಟಿ: 40ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

ಈತ ಬೆಂಗಳೂರಿನ ರಾಮಮೂರ್ತಿ ನಗರದವನು ಎನ್ನಲಾಗಿದ್ದು, ಸ್ಥಳೀಯ ಪೊಲೀಸ್ ಠಾಣೆಗೆ ದೂರು ದಾಖಲಾಗಿದೆ. ಈ ಕುರಿತು ಮತ್ತಷ್ಟು ಮಾಹಿತಿ, ವರದಿ ಲಭ್ಯವಾದ ಬಳಿಕ ಕೆಪಿಎಸ್‌ಸಿಯ ಪರೀಕ್ಷೆಗಳಿಂದ ನಿಷೇಧ ಮಾಡುವ ಕುರಿತು ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಕೆಪಿಎಸ್‌ಸಿ ಮೂಲಗಳು ತಿಳಿಸಿವೆ.

2022ರಲ್ಲಿ ನಡೆದಿದ್ದ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪರೀಕ್ಷೆ ವೇಳೆ ಯಾದಗಿರಿ ಮತ್ತು ಕಲಬುರಗಿಯಲ್ಲಿ ಮೊದಲ ಬಾರಿ ಬ್ಲೂಟೂತ್‌ ಅಕ್ರಮ ಬಯಲಾಗಿ ಭಾರೀ ಸುದ್ದಿಯಾಗಿತ್ತು. ಈ ಕುರಿತು ತನಿಖೆ ನಡೆಸಿದ ಸಿಐಡಿ ಪೊಲೀಸರಿಗೆ ರಾಜ್ಯಾದ್ಯಂತ ಇದೇ ರೀತಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿತ್ತು. ಪ್ರಕರಣಕ್ಕೆ ಸಂಬಂಧಿಸಿ ಹಗರಣದ ಕಿಂಗ್‌ ಪಿನ್‌ ಆರ್‌.ಡಿ.ಪಾಟೀಲ್‌, ಹಿರಿಯ ಐಪಿಎಸ್‌ ಅಧಿಕಾರಿ ಅಮೃತ್‌ ಪಾಲ್‌ ಸೇರಿ 113 ಮಂದಿ ಅಭ್ಯರ್ಥಿಗಳು, ಅಧಿಕಾರಿಗಳು, ಮಧ್ಯವರ್ತಿಗಳನ್ನು ಬಂಧಿಸಲಾಗಿತ್ತು. ಆ ಬಳಿಕ ಸರ್ಕಾರ ಮರುಪರೀಕ್ಷೆಗೆ ಆದೇಶ ಹೊರಡಿಸಿತ್ತು.

ಕಲಬುರಗಿ ನಗರದ ಬೀಬೀ ರಜಾ ಹೈಸ್ಕೂಲ್‌ ಕೇಂದ್ರದಲ್ಲಿ ಭಾನುವಾರ ನಡೆದ ಕೆಪಿಎಸ್‌ಸಿಯ ಪಿಡಿಒ ಪರೀಕ್ಷೆ ಬರೆಯಲು ಮಹಿಳಾ ಅಭ್ಯರ್ಥಿಯೊಬ್ಬರು 4 ನಿಮಿಷ ತಡವಾಗಿ ಬಂದಿದ್ದರು. ಅಷ್ಟರಲ್ಲೇ ಪರೀಕ್ಷಾ ಕೇಂದ್ರದ ಬಾಗಿಲು ಹಾಕಲಾಗಿತ್ತು. ಹೀಗಾಗಿ, ಅವರಿಗೆ ಪರೀಕ್ಷೆ ಬರೆಯಲು ಅವಕಾಶ ಕೈತಪ್ಪಿತು. ಅಫಜಲ್ಪುರ ತಾಲೂಕಿನ ನಿಲೂರ ಗ್ರಾಮದ ಮಹಿಳೆಗೆ 4 ನಿಮಿಷ ತಡವಾಗಿ ಬಂದಿದ್ದಾರೆಂದು ಗೇಟ್ ತೆರೆಯಲು ಕೇಂದ್ರದ ಪ್ರಮುಖರು, ಸಿಬ್ಬಂದಿ ನಿರಾಕರಿಸಿದರು. ಮಹಿಳೆ ಕಣ್ಣಿರಿಡುತ್ತಾ ಅವಕಾಶಕ್ಕಾಗಿ ಗೋಳಾಡುತ್ತಾ ತುಂಬ ಹೊತ್ತು ಗೇಟ್‌ ಬಳಿ ಕಾಯ್ದರಾದರೂ ಗೇಟ್‌ ತೆರೆಯಲೇ ಇಲ್ಲ.

ಪರೀಕ್ಷಾ ಕೇಂದ್ರಗಳನ್ನು ಬೀಬೀ ರಜಾ ಹೈಸ್ಕೂಲ್ ಮತ್ತು ಪಿಯು ಕಾಲೇಜುಗಳಲ್ಲಿ ಆಯೋಜಿಸಲಾಗಿತ್ತು. ವಿಳಾಸ ಸರಿಯಾಗಿ ಗೊತ್ತಾಗದೆ ಪರೀಕ್ಷಾರ್ಥಿಗಳು ಪರದಾಡುವಂತಾಯಿತು. ಅನೇಕರು ಬಸ್‌, ರೈಲು ನಿಲ್ದಾಣದಿಂದ ಆಟೋದಲ್ಲಿ ನಗರ ಸುತ್ತಿ ಸೆಂಟರ್‌ಗೆ ಬರುವಂತಾಯಿತು. ಆಟೋದವರು ಈ ವೇಳೆ ಹೆಚ್ಚಿನ ಹಣ ವಸೂಲಿ ಮಾಡಿದರು ಎಂದು ಪರೀಕ್ಷಾರ್ಥಿಗಳು ದೂರಿದ್ದಾರೆ. ಪಿಡಿಒ 

ಇದನ್ನೂ ನೋಡಿ : ಶೈಲಜಾ ಟೀಚರ್‌ ಆತ್ಮಕತೆ ಅನುವಾದಿಸುವಾಗ ಅವರೊಟ್ಟಿಗೆ ಹೆಜ್ಜೆ ಹಾಕಿದ ಅನುಭವವಾಯಿತು Janashakthi Media

Donate Janashakthi Media

Leave a Reply

Your email address will not be published. Required fields are marked *