ಸುಮಾರು ₹50 ಲಕ್ಷ ತೆರಿಗೆ ಹಣ ಸ್ವಂತಕ್ಕೆ ಬಳಸಿಕೊಂಡ ಪಿಡಿಒ; ಪ್ರಕರಣ ದಾಖಲು

ತುಮಕೂರು: ಸುಮಾರು ₹50 ಲಕ್ಷ ತೆರಿಗೆ ಹಣವನ್ನು ಹೆಗ್ಗೆರೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕೆ.ಆರ್‌. ರಾಘವೇಂದ್ರ ಸ್ವಂತಕ್ಕೆ ಬಳಸಿಕೊಂಡಿದ್ದಾರೆ ಎಂದು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಾಲ್ಲೂಕು ಪಂಚಾಯಿತಿ ಇ.ಒ ಕೆ.ಹರ್ಷಕುಮಾರ್‌ ದೂರು ನೀಡಿದ್ದಾರೆ.

ಐಪಿಸಿ ಕಲಂ 420 (ವಂಚನೆ) ಸೇರಿದಂತೆ ವಿವಿಧ ಕಲಂ ಅಡಿ ರಾಘವೇಂದ್ರ ವಿರುದ್ಧ ಪ್ರಕರಣ ದಾಖಲಾಗಿದೆ. ಹಣ ದುರುಪಯೋಗ, ಕರ್ತವ್ಯ ಲೋಪ, ನಿರ್ಲಕ್ಷ್ಯದ ಆರೋಪದ ಮೇರೆಗೆ ಪಿಡಿಒ ರಾಘವೇಂದ್ರ, ಗ್ರೇಡ್‌-2 ಕಾರ್ಯದರ್ಶಿ ಎಚ್‌.ಸಿ.ಹನುಮಂತರಾಜು ಅವರನ್ನು ಅಮಾನತುಗೊಳಿಸಲಾಗಿದೆ.

ಇದನ್ನು ಓದಿ : ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ; ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ

‘ಗ್ರಾಮೀಣಾಭಿವೃದ್ಧಿ ಮತ್ತು ಪಂಚಾ ಯತ್‌ರಾಜ್‌ ಇಲಾಖೆಯ ಪಂಚತಂತ್ರ-2.0 ತಂತ್ರಾಂಶದಲ್ಲಿ ಸಾರ್ವಜನಿಕರಿಂದ ಆಸ್ತಿ ತೆರಿಗೆ ಮತ್ತು ಇತರ ಶುಲ್ಕಗಳಿಂದ ಸಂಗ್ರಹವಾದ ಮೊತ್ತವನ್ನು ಹೆಗ್ಗೆರೆ ಗ್ರಾ.ಪಂ ವರ್ಗ-2ರ ಬ್ಯಾಂಕ್‌ ಖಾತೆಗೆ ಜಮಾ ಮಾಡಿಲ್ಲ. ಈ ಹಣವನ್ನು ಪಿಡಿಒ ಮತ್ತು ಸಿಬ್ಬಂದಿ ಸ್ವಂತಕ್ಕೆ ಬಳಸಿಕೊಂಡಿದ್ದಾರೆ’ ಎಂದು ಇ.ಒ ದೂರಿನಲ್ಲಿ ತಿಳಿಸಿದ್ದಾರೆ.

‘2022-23ನೇ ಸಾಲಿನಿಂದ ಸೃಜನೆ ಯಾದ 1,030 ಆಸ್ತಿ ತೆರಿಗೆ ಮತ್ತು ಇತರ ಶುಲ್ಕದ ರಸೀದಿಗಳನ್ನು ಅನಧಿಕೃತವಾಗಿ ರದ್ದುಪಡಿಸಿದ್ದಾರೆ. ತೆರಿಗೆ ರೂಪದಲ್ಲಿ ಸಂಗ್ರಹವಾದ ಸುಮಾರು ₹50 ಲಕ್ಷ ಹಣವನ್ನು ಬ್ಯಾಂಕ್‌ ಖಾತೆಗೆ ಜಮಾ ಮಾಡದೆ ಸ್ವಂತಕ್ಕೆ ಬಳಸಿಕೊಂಡು, ಸಾರ್ವಜನಿಕರ ತೆರಿಗೆ ಹಣ ದುರುಪ ಯೋಗ ಪಡಿಸಿಕೊಂಡಿದ್ದಾರೆ. ಸರ್ಕಾರಕ್ಕೆ ಮೋಸ ಮಾಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಪಿಡಿಒ, ಸಿಬ್ಬಂದಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನು ನೋಡಿ : ಹೊರಗುತ್ತಿಗೆ ನೇಮಕಾತಿ ಮೀಸಲಾತಿಯಲ್ಲಿ ಉದ್ಯೋಗ ಭದ್ರತೆಗೆ ಆಗ್ರಹಿಸಿ ಪ್ರತಿಭಟನೆJanashakthi Media

Donate Janashakthi Media

Leave a Reply

Your email address will not be published. Required fields are marked *