ಹಾಸನ ಪೆನ್ ಡ್ರೈವ್ ಪ್ರಕರಣ ವಿಚಾರಣೆಗೆ ಪೊಲೀಸ್ ತಂಡ ರಚಿಸುವಂತೆ ಸಿಎಂ ಸಿದ್ಧರಾಮಯ್ಯಗೆ ಪತ್ರ; ರಾಜ್ಯ ಮಹಿಳಾ ಆಯೋಗ

ಬೆಂಗಳೂರು: ಹಾಸನ ಪೆನ್ ಡ್ರೈವ್ ಪ್ರಕರಣ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ರಾಜ್ಯದಲ್ಲೇ ತಲ್ಲಣ ಸೃಷ್ಠಿಸಿದ್ದು, ಈ ವಿಚಾರವಾಗಿ ರಾಜ್ಯ ಮಹಿಳಾ ಆಯೋಗವು ಕಾಮುಕನ ವಿಚಾರಣೆ ನಡೆಸುವುದಕ್ಕೆ ಪೊಲೀಸ್ ತಂಡ ರಚಿಸುವಂತೆ ಸಿಎಂ ಸಿದ್ಧರಾಮಯ್ಯಗೆ ಪತ್ರ ಬರೆದು ಮನವಿ ಮಾಡಿದೆ.

ಹಾಸನ ಪೆನ್ ಡ್ರೈವ್ ಪ್ರಕರಣ ವಿಚಾರಣೆಗೆ ಪೊಲೀಸ್ ತಂಡ ರಚಿಸುವಂತೆ ಸಿಎಂ ಸಿದ್ಧರಾಮಯ್ಯಗೆ ಪತ್ರ; ರಾಜ್ಯ ಮಹಿಳಾ ಆಯೋಗ

ಹಾಸನದಲ್ಲಿ ನಡೆದಿರುವ ಭಯಾನಕ ಸೆಕ್ಸ್ ಹಗರಣದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿರುವ ಕರ್ನಾಟಕ ರಾಜ್ಯ ಮಹಿಳಾ ಆಯೋಗ, ಹೆಣ್ಣುಮಕ್ಕಳ ಜೊತೆ ಲೈಂಗಿಕ ಚಟುವಟಿಕೆ ನಡೆಸುವುದರ ಜೊತೆಗೆ ಅದನ್ನು ಚಿತ್ರೀಕರಿಸಿಕೊಂಡ ವ್ಯಕ್ತಿ ಮತ್ತು ಈ ವಿಡಿಯೋಗಳನ್ನು ಸಾರ್ವಜನಿಕಗೊಳಿಸಿದ ವ್ಯಕ್ತಿಯನ್ನು ವಿಚಾರಣೆ ನಡೆಸುವ ಸಲುವಾಗಿ ವಿಶೇಷ ತಂಡವನ್ನು ರಚಿಸಬೇಕೆಂದು ಕೋರಿದೆ.

ಇದನ್ನು ಓದಿ : ಅತಿ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲುತ್ತೇನೆ ಎನ್ನುವ ಆತ್ಮವಿಶ್ವಾಸ ನನಗಿದೆ: ಡಿ.ಕೆ.ಸುರೇಶ್

ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌದರಿ ಇಂದು ಪತ್ರ ಬರೆದಿದ್ದು, ಹಾಸನದಲ್ಲಿ ನಡೆಯುತ್ತಿರುವ ಆತಂಕಕಾರಿ ಘಟನೆಗಳ ಕುರಿತು ಮುಖ್ಯಮಂತ್ರಿಗಳ ಗಮನ ಸೆಳೆಯಲಾಗಿದೆ.

ಪ್ರಭಾವಿ ರಾಜಕಾರಣಿ ಅನೇಕ ಮಹಿಳೆಯರನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಳ್ಳುವುದರ ಜೊತೆಗೆ ಅದನ್ನು ಮೊಬೈಲ್ ನಲ್ಲಿ ಚಿತ್ರೀಕರಿಸಿಕೊಂಡಿರುವ ದೃಶ್ಯಗಳು ಇರುವ ಪೆನ್ ಡ್ರೈವ್ ಗಳು ಜನತೆಯ ಕೈಗೆ ಸಿಕ್ಕು ತಲೆ ತಗ್ಗಿಸುವಂಥ ಸ್ಥಿತಿ ನಿರ್ಮಾಣವಾಗಿದೆ ಎಂದು ಮಾಧ್ಯಮಗಳಲ್ಲಿ ಪ್ರಕಟವಾಗಿದೆ.

ಮಹಿಳಾ ಆಯೋಗಕ್ಕೂ ಈಗಾಗಲೇ ಹಲವು ದೂರುಗಳು ಬಂದಿದ್ದು ಸೂಕ್ತ ಕ್ರಮಕ್ಕೆ ಒತ್ತಾಯಿಸಲಾಗಿದೆ. ಈ ಹಿನ್ನೆಲೆಯಲ್ಲಿ ವಿಶೇಷ ತನಿಖಾ ತಂಡವೊಂದನ್ನು ರಚಿಸಬೇಕು ಎಂದು ನಾಗಲಕ್ಷ್ಮಿ ಚೌದರಿ ಮನವಿ ಮಾಡಿದ್ದಾರೆ.

ಇದನ್ನು ನೋಡಿ : ನೇಹಾ ಹತ್ಯೆ ಪ್ರಕರಣ : ಕಲಿಯಬೇಕಾದ ಪಾಠ- ನಿಲ್ಲಿಸಬೇಕು ಧರ್ಮದ ಹೆಸರಿನ ಆಟ Janashakthi Media

Donate Janashakthi Media

Leave a Reply

Your email address will not be published. Required fields are marked *